ಸರ್ಕಾರಿ ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ: ಸಚಿವ ಕೆ.ಎನ್ ರಾಜಣ್ಣ, ಜೆಡಿಎಸ್ ತೀವ್ರ ಆಕ್ಷೇಪ
ಬೆಂಗಳೂರು, ಜುಲೈ 25: ಇತ್ತೀಚಿಗಷ್ಟೇ ಬೆಂಗಳೂರಿಗೆ ಬಂದು ಕಾಂಗ್ರೆಸ್ ಶಾಸಕರ ಮತ್ತು ಸಚಿವರ ಜೊತೆ ಒನ್ ಟು ಒನ್ ಸಭೆ ನಡೆಸಿದ್ದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೆಲವು ಮಂದಿ ಸರ್ಕಾರಿ ಅಧಿಕಾರಿಗಳಿಗೂ ಕೂಡ ಬುಲಾವ್ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಇದೀಗ ಸಹಕಾರ ಸಚಿವ ಕೆ.ಎನ್ ರಾಜಣ್ಣ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ. ಸುರ್ಜೇವಾಲ ಸರ್ಕಾರಿ ಅಧಿಕಾರಿಗಳನ್ನು ಕರೆಸಿ ಮಾತುಕತೆ ನಡೆಸಿದ್ದೇ ಆದರೆ ಅದು ಸಂವಿಧಾನ ಬಾಹಿರ ಕೃತ್ಯ ಎಂದು…

