ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣ: 38 ಮಂದಿಗೆ ಮರಣದಂಡನೆ ಎತ್ತಿಹಿಡಿದ ಹೈಕೋರ್ಟ್
2008ರಲ್ಲಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಸಂಪೂರ್ಣವಾಗಿ ಎತ್ತಿಹಿಡಿದಿರುವ ನ್ಯಾಯಾಲಯ, ಪ್ರಕರಣದ 49 ಅಪರಾಧಿಗಳಲ್ಲಿ 38 ಮಂದಿಗೆ ವಿಧಿಸಿದ್ದ ಮರಣದಂಡನೆ ಹಾಗೂ ಉಳಿದ 11 ಮಂದಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಕಾಯಂಗೊಳಿಸಿದೆ. ಜೊತೆಗೆ, ಅಪರಾಧಿಗಳು ಸಲ್ಲಿಸಿದ್ದ ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಿ, ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ…

