12ನೇ ಬಾರಿ ಭಾರತದ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ನವದೆಹಲಿ, ಆಗಸ್ಟ್ 15: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ನಿಮಿತ್ತ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ದೇಶವನ್ನು ಉದ್ದೇಶಿಸಿ ಪ್ರಧಾನಿಗಳು ಭಾಷಣ ಮಾಡಲಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ಬೆಳಗ್ಗೆ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಭೇಟಿ ನೀಡಿದ್ದರು. ಬಳಿಕ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಕೆ ಮಾಡಿದರು. ಇದಾದ ಮೇಲೆ ಕೆಂಪು ಕೋಟೆ ಕಡೆಗೆ ಆಗಮಿಸಿದರು. ಈ ವೇಳೆ ರಕ್ಷಣಾ ಸಚಿವರು ಪ್ರಧಾನಿಗಳನ್ನು ಸ್ವಾಗತ…

