ಉಪರಾಷ್ಟ್ರಪತಿ ಚುನಾವಣೆ: ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಆಯ್ಕೆ
ನವದೆಹಲಿ, ಆಗಸ್ಟ್ 19: ಮುಂದಿನ ಸೆಪ್ಟೆಂಬರ್ 19 ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ನೇತೃತ್ವದ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರು ಅಭ್ಯರ್ಥಿಯಾಗಿದ್ದಾರೆ. ಇದರಿಂದಾಗಿ ದೇಶದ 2ನೇ ಅತ್ಯುನ್ನತ ಹುದ್ದೆಯಾದ ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲು ವೇದಿಕೆ ಬಹುತೇಕ ಸಿದ್ಧಗೊಂಡಂತಾಗಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಇಂಡಿಯಾ ಮೈತ್ರಿಕೂಟಗಳ ಸಭೆಯಲ್ಲಿ ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿರುವ ಸುದರ್ಶನ್ ರೆಡ್ಡಿ ಅವರನ್ನು ಕಣಕ್ಕಿಳಿಸಲು ಸಭೆ ಒಮತದ ತೀರ್ಮಾನವನ್ನು ಕೈಗೊಂಡಿತು. ಇನ್ನೊಂದು ವಿಶೇಷವೆಂದರೆ…

