Headlines

ಜಗದೀಶ್ ಧನ್ ಜಕರ್ ರಾಜೀನಾಮೆ ಬೆನ್ನಲ್ಲೇ ಉಪರಾಷ್ಟ್ರಪತಿ ಸ್ಥಾನಕ್ಕೆ ಪೈಪೋಟಿ

ನವದೆಹಲಿ, ಜುಲೈ 22: ಆರೋಗ್ಯದ ಕಾರಣ ಹೇಳಿ, ಎಲ್ಲರಿಗೂ ಅಚ್ಚರಿಯಾಗುವಂತೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ದಿಢೀರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಲೋಕಸಭೆ ಮತ್ತು ರಾಜ್ಯ ಸಭೆಯ ಸದಸ್ಯರನ್ನು ಒಳಗೊಂಡಂತೆ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತಾತ್ಮಕ ಒಕ್ಕೂಟವು ಬಹುಮತವನ್ನು ಹೊಂದಿರುವುದರಿಂದ, ಧನ್‌ಕರ್‌ ರಾಜೀನಾಮೆ ನೀಡುವ ನಿರ್ಧಾರವು ಅಚ್ಚರಿಗೆ ಕಾರಣವಾಗಿದೆ. ಮುಂಬರುವ ದಿನಗಳಲ್ಲಿ ಸಂಭಾವ್ಯ ಹೆಸರುಗಳನ್ನು ಪರಿಗಣಿಸುವ ಸಾಧ್ಯತೆಯಿದೆ. ಭಾರತೀಯ ಸಂವಿಧಾನದ ಪ್ರಕಾರ, 60 ದಿನಗಳ…

Read More

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಸುಪ್ರೀಂಕೋರ್ಟ್ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆ

ನವದೆಹಲಿ, ಜುಲೈ 22: ನಟ ದರ್ಶನ್ ತೂಗುದೀಪ್ ಅವರು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ, ಜಾಮೀನು ಪಡೆದು ಹೊರಬಂದರು. ಬಳಿಕ ಕರ್ನಾಟಕ ಹೈಕೋರ್ಟ್ ದರ್ಶನ್​ಗೆ ಜಾಮೀನು ನೀಡಿತ್ತು. ಈ ಜಾಮೀನು ತೀರ್ಪನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿದೆ. ಈ ಅರ್ಜಿ ವಿಚಾರಣೆ ಇಂದು (ಜುಲೈ 22) ನಡೆಯಬೇಕಿತ್ತು. ಆದರೆ, ಈಗ ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಲ್ಪಟ್ಟಿದೆ. ಹೀಗಾಗಿ, ದರ್ಶನ್​ಗೆ ಮತ್ತೆರಡು ದಿನ ರಿಲೀಫ್ ಸಿಕ್ಕಂತಾಗಿದೆ. ‘ಇಂದು ಸುಪ್ರೀಂಕೋರ್ಟ್ ನಲ್ಲಿ ದರ್ಶನ್ ಪರ ಹಿರಿಯ…

Read More

ಅನಾರೋಗ್ಯ ಕಾರಣ ಹೇಳಿ ಉಪರಾಷ್ಟ್ರಪತಿ ರಾಜೀನಾಮೆ

ನವದೆಹಲಿ, ಜುಲೈ 21: ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ನಾನು ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಇದು ತಕ್ಷಣವೇ ಜಾರಿಗೆ ಬರುತ್ತದೆ” ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಜಗದೀಪ್‌ ಧನ್‌ಕರ್‌ ಉಲ್ಲೇಖಿಸಿದ್ದಾರೆ. ಧನ್‌ಕರ್‌ ರಾಜೀನಾಮೆ ಭಾರತದ ರಾಜಕಾರಣದಲ್ಲಿ ಇದೀಗ ಭಾರೀ ಚರ್ಚೆಗೆ ಒಳಪಡುತ್ತಿದೆ. ಜಗದೀಪ್‌ ಧನ್‌ಕರ್‌ ಸಂಸತ್ತಿನ ಮಾನ್ಸೂನ್‌ ಅಧಿವೇಶನದ ಮೊದಲ ದಿನವೇ ಉಪರಾಷ್ಟ್ರಪತಿ ಮತ್ತು ರಾಜ್ಯಸಭೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆಗೆ ಆರೋಗ್ಯದ ಕಾರಣಗಳನ್ನು ನೀಡಿದ್ದಾರೆ….

Read More

ಸಂಸದ ತೇಜಸ್ವಿಸೂರ್ಯ ವಿರುದ್ಧದ ಸುಳ್ಳು ಸುದ್ದಿ ಪ್ರಕರಣ ವಜಾ: ರಾಜ್ಯಸರ್ಕಾರಕ್ಕೆ ಮುಖಭಂಗ

ನವದೆಹಲಿ, ಜುಲೈ 21: ಹಾವೇರಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆಯೂ ಸುಳ್ಳು ಸುದ್ದಿ ಹಬ್ಬಿಸಿದರೆಂದು ಆರೋಪಿಸಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಬಿಜೆಪಿ ಸಂಸದ ತೇಜಸ್ವಿಸೂರ್ಯಗೆ ಬಿಗ್​ ರಿಲೀಫ್​ ಸಿಕ್ಕಿದೆ. ಜೊತೆಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ ಉಂಟಾಗಿದೆ. ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠ ವಿಚಾರಣೆ…

Read More

ದೆಹಲಿ: ಸಿಎಂ ಸಿದ್ದರಾಮಯ್ಯರ ಬೇಡಿಕೆಗಳಿಗೆ ರಕ್ಷಣಾ ಸಚಿವರಿಂದ ಗ್ರೀನ್ ಸಿಗ್ನಲ್!

ನವದೆಹಲಿ, ಜುಲೈ 9: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಶುರುವಾಗಿದೆ. ನಾಡಹಬ್ಬಕ್ಕೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ಸಿದ್ಧತೆಗಳು ಸದ್ದಿಲ್ಲದೆ ಶುರುವಾಗುತ್ತಿವೆ. ಇನ್ನು ಈ ಬಾರಿ ಮೈಸೂರು ದಸರಾದಲ್ಲಿ ಏರ್​ ಶೋ ಆಯೋಜಿಸಲು ರಾಜ್ಯಸರ್ಕಾರ ಮುಂದಾಗಿದ್ದು, ಇದಕ್ಕೆ ಅನುಮತಿ ನೀಡುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರು ಇಂದು(ಜುಲೈ 9) ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಇದಕ್ಕೆ ರಾಜನಾಥ್ ಸಿಂಗ್ ಸಹ ಸಮ್ಮತಿಸಿದ್ದಾರೆ. ಜೊತೆಗೆ ವಿವಿಧ ಯೋಜನೆಗಳಿಗಾಗಿ ರಕ್ಷಣಾ ಇಲಾಖೆಯ ಭೂಮಿ…

Read More

ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ದೆಹಲಿಗೆ ಬಂದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ನವದೆಹಲಿ, ಜುಲೈ 9: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚಿಸಲು ನಾನು ಹಾಗೂ ಸಿಎಂ ಸಿದ್ದರಾಮಯ್ಯ ದೆಹಲಿಗೆ ಬಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ವಿವಿಧ ಸಚಿವರ ಜತೆ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ವಿಚಾರವಾಗಿ ಮಾತುಕತೆ ನಡೆಸಿದ ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಡಿಸಿಎಂ ಅವರು ಮಾತನಾಡಿದರು. ‘ಅಭಿವೃದ್ಧಿ ಯೋಜನೆಗಳ ಸಲುವಾಗಿ ಚರ್ಚಿಸಲು ನಾವು ಬಂದಿದ್ದೇವೆ. ರಾಹುಲ್ ಗಾಂಧಿ ಅವರ ಭೇಟಿಗೂ ಸಮಯ ಕೋರಿದ್ದೇನೆ. ನಾಳೆ ಭೇಟಿ ಮಾಡುವ ಸಾಧ್ಯತೆ…

Read More

ಬೆಂಗಳೂರಿನಲ್ಲಿ ಭಾರತದ ಪ್ರಥಮ ಯುಪಿಐ ಆಧಾರಿತ ಬ್ಯಾಂಕ್ ಆರಂಭ!

ಬೆಂಗಳೂರು, ಜುಲೈ 8: ಅಂತೂ ಇಂತೂ ಬೆಂಗಳೂರಿನಲ್ಲಿ ಭಾರತದ ಪ್ರಪ್ರಥಮ ಪೂರ್ಣ ಪ್ರಮಾಣದ ಯುಪಿಐ (UPI) ಬ್ಯಾಂಕ್ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದೆ.ಈ ಯುಪಿಐ ಬ್ಯಾಂಕ್ ನಲ್ಲಿ ಎಲ್ಲವೂ ಡಿಜಿಟಲ್ ಮಯವಾಗಿದ್ದು, ನಿಮ್ಮ ನೆರವಿಗೆ ಅಥವಾ ಕೆಲಸ ಮಾಡಲು ಯಾವುದೇ ಉದ್ಯೋಗಿಗಳು ಇಲ್ಲ! ಫಿನ್‌ಟೆಕ್ ಕಂಪನಿಯಾದ ಸ್ಲೈಸ್ ಬೆಂಗಳೂರಿನ ಕೋರಮಂಗಲದಲ್ಲಿ ಯುಪಿಐ ಬ್ಯಾಂಕನ್ನು ಪ್ರಾಯೋಗಿಕವಾಗಿ ಆರಂಭಿಸಿದೆ. ಇಲ್ಲಿ ನೀವು ಯಾವುದೇ ಕಾಗದ ಪತ್ರಗಳು ಅಥವಾ ಕಾರ್ಡ್‌ಗಳ ಅಗತ್ಯವಿಲ್ಲದೇ ಸಂಪೂರ್ಣವಾಗಿ ಡಿಜಿಟಲ್ ಬ್ಯಾಂಕಿಂಗ್ ಬಳಸಬಹುದು. ಖಾತೆ ತೆರೆಯುವಿಕೆಯಿಂದ ಹಿಡಿದು ನಗದು ಠೇವಣಿ,…

Read More
error: Content is protected !!