ಡಿಸೆಂಬರ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಚಿವ ರಾಯರೆಡ್ಡಿ ಮಹತ್ವದ ಸುಳಿವು!
ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಕೊನೆಗೂ ಮುಹೂರ್ತ ಸನ್ನಿಹಿತವಾಗಿದ್ದು, ಮುಂಬರುವ ಡಿಸೆಂಬರ್ 15ರ ವೇಳೆಗೆ ಮತದಾನ ನಡೆಯುವ ಸಾಧ್ಯತೆ ದಟ್ಟವಾಗಿದೆ. ಕೊಪ್ಪಳದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಮುಂಬರುವ ಒಂದೆರಡು ದಿನಗಳಲ್ಲಿ ಅಧಿಕೃತ ಮೀಸಲಾತಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸುಳಿವು ನೀಡಿದ್ದು, ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗುವಂತೆ ಕರೆ ನೀಡಿದ್ದಾರೆ. ಚುನಾವಣಾ ಪ್ರಕ್ರಿಯೆ ಮತ್ತು ಮೀಸಲಾತಿ…

