ಸಂಪುಟದಿಂದ ಕೆ.ಎನ್ ರಾಜಣ್ಣರನ್ನು ವಜಾ ಮಾಡಿಸಿದ್ದು ರಣದೀಪ್ ಸುರ್ಜೇವಾಲ!?
ಬೆಂಗಳೂರು, ಆಗಸ್ಟ್ 12: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣರನ್ನ ವಜಾಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ..! ಹೌದು, ಹಾಲಿ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ ಇತ್ತೀಚೆಗೆ ಬೆಂಗಳೂರಿಗೆ ಬಂದು ಸಚಿವರು, ಶಾಸಕರ ಸಭೆ ನಡೆಸಿದ್ದರು. ಇದನ್ನು ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಬಹಿರಂಗವಾಗಿ ಪ್ರಶ್ನಿಸಿದ್ದರು. ಜೊತೆಗೆ ರಣದೀಪ್ ಸುರ್ಜೇವಾಲಾ, ಎಲ್ಲಾ ಕ್ಯಾಬಿನೆಟ್ ಸಚಿವರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿದ್ದರು. ಈ ಮಾತುಕತೆಗೆ ಸಹಕಾರ ಸಚಿವರಾಗಿದ್ದ ಕೆ.ಎನ್.ರಾಜಣ್ಣ…

