ಬಿಹಾರ ಅಸೆಂಬ್ಲಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆದ್ದರೆ ಮಾತ್ರ ಸಿದ್ದರಾಮಯ್ಯ ಕುರ್ಚಿ ಭದ್ರ!
ನವದೆಹಲಿ, ಜುಲೈ 13: ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್ ಹೈಕಮಾಂಡ್‌ನ ಬಲಾ-ಬಲವನ್ನು ಪರೀಕ್ಷೆ ಒಳಪಡಿಸಲಿದ್ದು, ಸಹಜವಾಗಿಯೇ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸುರ್ಜೇವಾಲ ನಡೆಸುತ್ತಿರುವ ಸರಣಿ ಸಭೆಗಳು ತೀವ್ರ ಕುತೂಹಲ ಕೆರಳಿಸಿವೆ. ಸಚಿವ ಸಂಪುಟ ಪುನರ್ ರಚನೆ, ನಿಗಮ ಮಂಡಳಿಗಳ ನೇಮಕಾತಿ ಸೇರಿದಂತೆ ಹಲವಾರು ವಿಚಾರಗಳಲ್ಲಿ ಈವರೆಗೂ ಹೈಕಮಾಂಡ್‌ನ ಪ್ರಭಾವ ಎದ್ದುಕಾಣುತ್ತಿದೆ. ಒಂದು ವೇಳೆ ಬಿಹಾರದ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಾದರೆ ಸಿದ್ದರಾಮಯ್ಯ ಅವರು ಹೆಚ್ಚು…

