ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್.ನಾರಾಯಣ್ ವಿರುದ್ಧ ಎಫ್ಐಆರ್ ದಾಖಲು
ನಿರ್ದೇಶಕ ಎಸ್. ನಾರಾಯಣ್ ಅವರು ಇತ್ತೀಚೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ‘ನನ್ನ ಹೆಸರಲ್ಲಿ ಫೇಕ್ ಟ್ವಿಟರ್ ಖಾತೆ ಮಾಡಲಾಗಿದೆ. ಇದರ ಮೂಲಕ ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ’ ಎಂದು ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಈಗ ಅವರು ಮತ್ತೆ ಪೊಲೀಸ್ ಠಾಣೆ ಮೆಟ್ಟಿಲು ಏರಬೇಕಾದ ಪರಿಸ್ಥಿತಿ ಬಂದಿದೆ. ಅದೂ ಆರೋಪಿಯಾಗಿ. ಸೊಸೆ ಪವಿತ್ರಾ ಅವರು ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ದೂರು ದಾಖಲು ಮಾಡಿದ್ದು, ಎಫ್ಐಆರ್ ದಾಖಲಾಗಿದೆ. 2021ರಲ್ಲಿ ಎಸ್.ನಾರಾಯಣ್ ಪುತ್ರ ಪವನ್ ಹಾಗೂ ಪವಿತ್ರಾ…

