Headlines

ರಾಹುಲ್ ಗಾಂಧಿ ಮತಗಳ್ಳತನ ಆರೋಪ ಸಿಎಂ ಸಿದ್ದರಾಮಯ್ಯಗೆ ಕಂಟಕ!

ಬೆಂಗಳೂರು, ಆಗಸ್ಟ್ 21: ಕಳೆದ 2024 ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಗಂಭೀರ ಆರೋಪ ಇದೀಗ ಖುದ್ದು ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿಗೆ ಸಂಚಕಾರ ತಂದಿದೆ. ಏಕೆಂದರೆ ಹಿಂದಿನ 2018ರ ಕರ್ನಾಟಕ ವಿಧಾನಸಭೆ ಚುನಾವಣೆಯ ಬಾದಾಮಿ ಕ್ಷೇತ್ರದಲ್ಲಿ ಮತ ಖರೀದಿ ಮಾಡಿದ್ದರಿಂದ ಸಿದ್ದರಾಮಯ್ಯನವರು ಗೆದ್ದದ್ದು ಎಂದು ಇಂದು ಸಿ.ಎಂ. ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ. ಇಬ್ರಾಹಿಂ ಅವರ ಈ ಹೇಳಿಕೆಯನ್ನು ಆಧರಿಸಿ ರಾಜ್ಯ ಬಿಜೆಪಿ, ರಾಜ್ಯ ಚುನಾವಣಾ ಆಯೋಗಕ್ಕೆ…

Read More

ಧರ್ಮಸ್ಥಳ ಪ್ರಕರಣ: ಅಪಪ್ರಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು – ಬಿಜೆಪಿ ಕಾರ್ಯಕರ್ತರ ಮನವಿ

ಮಂಡ್ಯ: ಧರ್ಮಸ್ಥಳದ ಬಗ್ಗೆ ಅಪ ಪ್ರಚಾರ ಮಾಡುತ್ತಿರುವ ಗಿರೀಶ್ ಮಟ್ಟಣ್ಣ, ಮಹೇಶ್ ಶೆಟ್ಟಿ, ತಿಮ್ಮರೊಡಿ, ಸಮೀರ್, ಕಾಂಗ್ರೆಸ್ ಮುಖಂಡರಾದ ರಮ್ಯಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಅಪರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎ.ಈ.ಗಂಗಾಧರಸ್ವಾಮಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಿದ್ದೇನೆ, ತನಿಖೆ ನಡೆಸಿ ಎನ್ನುವ ಅನಾಮಿಕ ಕ ವ್ಯಕ್ತಿ ಯಾರು ಎಂಬ ಬಗ್ಗೆ ಯಾರಿಗೂ ಮಾಹಿತಿ ಇಲ್ಲ ನಿರ್ದಿಷ್ಟ ಸ್ಥಳಗಳಲ್ಲಿ ಅನಾಥ ಮೃತದೇಹ…

Read More

ಕೊನೆಗೂ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆ ಈಡೇರಿಸಿದ ಸರ್ಕಾರ

ಬೆಂಗಳೂರು, ಆಗಸ್ಟ್ 20: ಕರ್ನಾಟಕ ರಾಜ್ಯ ಸಚಿವ ಸಂಪುಟ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ಈಗಾಗಲೇ ಒಪ್ಪಿಗೆ ನೀಡಿದೆ. ಒಳ‌ ಮೀಸಲಾತಿ ಸಂಬಂಧ ನಡೆದ ವಿಶೇಷ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ಒಳ‌ ಮೀಸಲಾತಿ ಬಹುತೇಕ ಫೈನಲ್ ಆಗಿದೆ. ಇಂದು ಅಧಿಕೃತ ಘೋಷಣೆ ಮಾಡಲಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರು ಒಳ ಮೀಸಲಾತಿಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಸಮುದಾಯದವರು, ಅವರಿಗೆ ಹೂವಿನ ಹಾರ ಹಾಕಿ, ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನ ನಡೆದ ವಿಶೇಷ…

Read More

ವಿಧಾನಸಭೆಯಲ್ಲಿ ಕಠಿಣ ಎಸ್ಮಾ ಕಾಯ್ದೆ ವಿಧೇಯಕ ಅಂಗೀಕಾರ

ಕೆಎಸ್‌‍ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಯಾವುದೇ ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ ಮುಂದಿನ 20 ವರ್ಷಗಳ ಅವಧಿಗೆ ಜಾರಿಯಲ್ಲಿರುವಂತೆ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಅಂಗೀಕರಿಸಲಾಯಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ತಿದ್ದುಪಡಿ ವಿಧೇಯಕ 2025 ಅನ್ನು ಪರ್ಯಾಲೋಚನೆಗೆ ಮಂಡಿಸಿದರು. ಕಾಯ್ದೆಯ ಬಗ್ಗೆ ವಿವರಣೆ ನೀಡಿದ ಸಚಿವರು ಈ ಹಿಂದೆ 2018ರಲ್ಲಿ ಎಸ್ಮಾ ಕಾಯ್ದೆಯನ್ನು ನಾನೇ ಸಚಿವನಾಗಿ ಜಾರಿ ಮಾಡಿದ್ದೆ.ಆದರೆ ಅದು ನಮ ಸರ್ಕಾರದಲ್ಲಿ ಉಪಯೋಗಕ್ಕೆ ಬರಲಿಲ್ಲ. 2021…

Read More

ಧರ್ಮಸ್ಥಳ ಕೇಸ್: ಅನಾಮಿಕನನ್ನು ವಶಕ್ಕೆ ಪಡೆಯಲು ಎಸ್ಐಟಿ ಚಿಂತನೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಅನಾಮಿಕ ನೀಡಿರುವ ದೂರಿನಂತೆ ನಡೆಸಲಾಗುತ್ತಿದ್ದ ಉತ್ಖನನವನ್ನು ಸದ್ಯಕ್ಕೆ ಸ್ಥಗಿತಗೊಳಿಸಿರುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಸೋಮವಾರ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಎಸ್​ಐಟಿ ಅನಾಮಿಕನನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ದೂರಿನ ಮೇಲೆಯೇ ಸದ್ಯ ಅನುಮಾನ ವ್ಯಕ್ತವಾದ ಕಾರಣ ಆತನನ್ನು ವಶಕ್ಕೆ ಪಡೆಯಲು ಎಸ್​ಐಟಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ದೂರುದಾರ ಅನಾಮಿಕನನ್ನು ಸುಪರ್ದಿಗೆ ಪಡೆದು ವಿಚಾರಣೆಗೆ ಒಳಪಡಿಸಿದರೆ ಹೆಚ್ಚಿನ ಮಾಹಿತಿ ದೊರೆಯುವ ಸಾಧ್ಯತೆ ಇರುವುದರಿಂದ ಈ ಕ್ರಮಕ್ಕೆ ಎಸ್​ಐಟಿ ಮುಂದಾಗಿದೆ…

Read More

“ಧರ್ಮಸ್ಥಳ ಕೇಸ್ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ: ಸಿಬಿಐ-ಎನ್ಐಎ ತನಿಖೆಗೆ ಒತ್ತಾಯಿಸಿದ ಜನಾರ್ದನ ರೆಡ್ಡಿ”

ಬೆಂಗಳೂರು, ಆಗಸ್ಟ್​ 19: ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದೆ ತಮಿಳುನಾಡಿನ ಕಾಂಗ್ರೆಸ್​ ಸಂಸದ ಹಾಗೂ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ‌ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಸದ ಸಸಿಕಾಂತ್ ಸೆಂಥಿಲ್ ಮೂಲಕ ಧರ್ಮಸ್ಥಳ ಕೇಸ್ ಮಾಡಿಸುತ್ತಿದ್ದಾರೆ ಎಂದರು. ಕೋರ್ಟ್ ಮೊರೆ ಹೋಗುವೆ ಎಂದ ಜನಾರ್ದನ ರೆಡ್ಡಿ!ಮುಸುಕುಧಾರಿಯೂ ಕೂಡ ತಮಿಳುನಾಡು ಮೂಲದವನು. ಮುಸುಕುಧಾರಿ ಇಷ್ಟು ವರ್ಷ…

Read More

ಧರ್ಮಸ್ಥಳದ ಬಗ್ಗೆ ಯೂಟ್ಯೂಬರ್ ಗಳು ಅಪಪ್ರಚಾರ ನಡೆಸಿದರೆ ಕಾನೂನು ಕ್ರಮ: ಗೃಹ ಸಚಿವರ ಎಚ್ಚರಿಕೆ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿರುವ ಅಸಹಜ ಸಾವು ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಗಂಭೀರವಾದ ಮಾತುಕತೆಗಳು ನಡೆದಿದ್ದು ರಾಜ್ಯಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರವೇ ನಡೆಯುತ್ತಿದೆ. ಇದರ ನಡುವೆ ಗೃಹ ಸಚಿವ ಪರಮೇಶ್ವರ್ ಅವರು ಯೂಟ್ಯೂಬರ್​ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅವರು ಹೇಳಿದ್ದಿಷ್ಟು…“ಯಾರೇ ಯೂಟ್ಯೂಬರ್​ಗಳಾದರೂ, ಯಾವುದೇ ಯೂಟ್ಯೂಬ್ ಆದರೂ ಇರಲಿ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಬಾರದು. ಒಂದು ವೇಳೆ ಧರ್ಮಸ್ಥಳ ಕ್ಷೇತ್ರದ ಕುರಿತು ಕೆಟ್ಟದಾಗಿ ಮಾತನಾಡಿರುವುದು, ಅಪಪ್ರಚಾರ ಮಾಡಿರುವುದು ಕಂಡುಬಂದಲ್ಲಿ ಅಂತವರ…

Read More

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಬೆಂಗಳೂರಿನಲ್ಲಿ ಜಾಗ ಖರೀದಿಸಿದ ಸುದೀಪ್

ಬೆಂಗಳೂರು, ಆಗಸ್ಟ್ 18: ಸಾಹಸಸಿಂಹ ವಿಷ್ಣುವರ್ಧನ್ ಅವರ ಸಮಾಧಿ ಇತ್ತೀಚೆಗೆ ನೆಲಸಮ ಆಯಿತು. ಇದರಿಂದ ಅಭಿಮಾನಿಗಳಿಗೆ ತೀವ್ರ ಬೇಸರ ಉಂಟಾಯಿತು. ವಿಷ್ಣು ಅಭಿಮಾನಿಗಳಲ್ಲಿ ಒಬ್ಬರಾಗಿರುವ ನಟ ಸುದೀಪ್ ಅವರಿಗೆ ಕೂಡ ನೋವಾಗಿದೆ. ವಿಷ್ಣುವರ್ಧನ್ ಸ್ಮಾರಕ ಬೆಂಗಳೂರಿನಲ್ಲಿ ನಿರ್ಮಾಣ ಆಗಬೇಕು ಎಂಬ ಆಸೆ ಅಭಿಮಾನಿಗಳಿಗೆ ಇದೆ. ಅದಕ್ಕಾಗಿ ವಿಷ್ಣು ಅಭಿಮಾನಿಗಳು ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದಾರೆ. ಕಿಚ್ಚ ಸುದೀಪ್ ಅವರು ವಿಷ್ಣು ಸ್ಮಾರಕ ನಿರ್ಮಾಣಕ್ಕಾಗಿ ಕೆಂಗೇರಿ ಬಳಿ ಅರ್ಧ ಎಕರೆ ಜಾಗವನ್ನು ಖರೀದಿ ಮಾಡಿದ್ದಾರೆ. ಆ ಬಗ್ಗೆ ವೀರಕಪುತ್ರ ಶ್ರೀನಿವಾಸ್ ಅವರು…

Read More

ಅಧಿವೇಶನ ಮುಗಿದ ಕೂಡಲೇ ಅನರ್ಹ ಬಿಪಿಎಲ್ ಕಾರ್ಡ್ ರದ್ದು: ಆಹಾರ ಸಚಿವ ಮುನಿಯಪ್ಪ

ಬೆಂಗಳೂರು, ಆಗಸ್ಟ್ 18: ವಿಧಾನಮಂಡಲದ ಅಧಿವೇಶನ ಮುಗಿದ ಕೂಡಲೇ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಯಲಿದೆ ಎಂದು ಆಹಾರ ಸಚಿವ ಮುನಿಯಪ್ಪ ವಿಧಾನಪರಿಷತ್‌ನಲ್ಲಿಂದು ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಸೋಮವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ ಕಾಂಗ್ರೆಸ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಪಿಎಲ್ ಕಾರ್ಡ್ ಗೊಂದಲ ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದರು. ಬಳಿಕ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಸಿಗುತ್ತಿಲ್ಲ….

Read More

ಧರ್ಮಸ್ಥಳ ಪ್ರಕರಣದ ದೂರುದಾರನ ಹೆಸರು ಗೃಹ ಸಚಿವರಿಂದ ಬಹಿರಂಗ!!!

ಬೆಂಗಳೂರು, ಆಗಸ್ಟ್ 18: ಧರ್ಮಸ್ಥಳ ಸುತ್ತಮುತ್ತ ನೂರಾರು ಜನರನ್ನು ಕೊಲೆ ಮಾಡಿ ಶವಗಳನ್ನು ಕಾಣದ ರೀತಿಯಲ್ಲಿ ಹೂತಿಡಲಾಗಿದೆ ಎಂದು ಆರೋಪಿಸಿ ಎಸ್ಐಟಿ ತನಿಖಾ ತಂಡಕ್ಕೆ ತಲೆನೋವಾಗಿರುವ ಅನಾಮಿಕ ದೂರುದಾರನ ಹೆಸರನ್ನು ಇಂದು ಖುದ್ದು ಗೃಹ ಸಚಿವ ಪರಮೇಶ್ವರ್ ಸದನದ ಮುಂದೆ ಬಹಿರಂಗಪಡಿಸಿದ್ದಾರೆ. ಸದನದ ಮುಂದೆ ಗೃಹ ಸಚಿವರು ಹೇಳಿದ್ದಿಷ್ಟು:“ಹಿಂದೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಓರ್ವ ದೂರು ಕೊಟ್ಟಿದ್ದನು. ಈ ವ್ಯಕ್ತಿ ತನ್ನ ದೂರಿನಲ್ಲಿ ತನಗೆ ನಿರಂತರವಾಗಿ ಜೀವ ಬೆದರಿಕೆಯೊಡ್ಡಿ ಶವ ಹೂತಿಟ್ಟ ಬಗ್ಗೆ ತಿಳಿಸಿದ್ದ. ಈ…

Read More
error: Content is protected !!