Headlines

ರೇಣುಕಾಸ್ವಾಮಿ ಕೊಲೆ ಕೇಸ್: ಮತ್ತೆ ಜೈಲು ಸೇರುತ್ತಿರುವ ದರ್ಶನ್ ಮುಂದಿರುವ ಆಯ್ಕೆಗಳಿವು…

ಬೆಂಗಳೂರು, ಆಗಸ್ಟ್ 14: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ್, ನಟಿ ಪವಿತ್ರಾಗೌಡ ಹಾಗೂ ಇತರೆ ಕೆಲ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಷರತ್ತುಬದ್ಧ ಜಾಮೀನು ಆದೇಶವನ್ನು ಸುಪ್ರೀಂಕೋರ್ಟ್ ಇಂದು ರದ್ದುಗೊಳಿಸಿ ತೀರ್ಪು ನೀಡಿದೆ. ಇದರಿಂದ ನಟ ದರ್ಶನ್, ನಟಿ ಪವಿತ್ರಾಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳು ಮತ್ತೊಮ್ಮೆ ಜೈಲು ಸೇರುತ್ತಿದ್ದಾರೆ. ಅದರಲ್ಲೂ ನಟ ದರ್ಶನ್​ಗೆ ಎಲ್ಲರಿಗಿಂತಲೂ ತುಸು ಮುಂಚಿತವಾಗಿ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಇಂದು ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದ್ದು, ರೇಣುಕಾಸ್ವಾಮಿ…

Read More

ಕೆ.ಎನ್ ರಾಜಣ್ಣಗೆ ಬಿಜೆಪಿ ಸೇರಲು ‌ಆಹ್ವಾನವಿತ್ತ ಶ್ರೀರಾಮುಲು

ಬೆಂಗಳೂರು, ಆಗಸ್ಟ್ 14: ರಾಜ್ಯದ ಕಾಂಗ್ರೆಸ್‌ ಸರ್ಕಾರದಿಂದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರನ್ನು ವಜಾಗೊಂಡ ಕೆ.ಎನ್‌. ರಾಜಣ್ಣ ಹಾಗೂ ಅವರ ಮಗ ಎಂಎಲ್‌ಸಿ ರಾಜೇಂದ್ರ ಅವರನ್ನು ಭೇಟಿಯಾದ ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಸಚಿವ ಸತೀಶ್‌ ಜಾರಕಿಹೊಳಿ ಅವರೊಂದಿಗೆ ಕಾಂಗ್ರೆಸ್‌ ಶಾಸಕರ ತಂಡ ರಾಜಣ್ಣ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿ ನಂತರ ಈ ಬೆಳವಣಿಗೆ ನಡೆದಿದೆ. ಇಡೀ ಸಮುದಾಯ ಮತ್ತು ಅದರ ನಾಯಕರು ನಿಮ್ಮೊಂದಿಗಿದ್ದಾರೆ, ಬಿಜೆಪಿಗೆ ಬನ್ನಿ. ನೀವು…

Read More

ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ದರ್ಶನ್ ಜಾಮೀನು ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಮತ್ತಿತರ ಆರೋಪಿಗಳು ಹೈಕೋರ್ಟ್ ನೀಡಿದ್ದ ಜಾಮೀನನ್ನು ಕರ್ನಾಟಕ ಸರ್ಕಾರ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ, 2025 ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ದರ್ಶನ್, ಪವಿತ್ರಾ ಗೌಡ ಹಾಗೂ ಮೂವರು ಸೇರಿದಂತೆ ಏಳೂ ಜನ ಆರೋಪಿಗಳ ಜಾಮೀನು ರದ್ದುಗೊಳಿಸಿ ಆದೇಶ ನೀಡಿದೆ. ಈ ತೀರ್ಪಿನಿಂದ ದರ್ಶನ್ ಮತ್ತು ಇತರ ಆರೋಪಿಗಳು ಜೈಲು ಸೇರಬೇಕಾಗಿದೆ.

Read More

ಮುಜರಾಯಿ ದೇಗುಲಗಳಲ್ಲಿ ಆಗಸ್ಟ್ 15 ರಿಂದ ಪ್ಲಾಸ್ಟಿಕ್ ಬಳಸುವಂತಿಲ್ಲ

ಬೆಂಗಳೂರು, ಆಗಸ್ಟ್ 15: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಇದೇ ಆಗಸ್ಟ್ 15ರಿಂದ ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‌ಗೆ ತಿಳಿಸಿದ್ದಾರೆ. ನಿನ್ನೆ ವಿಧಾನಪರಿಷತ್ ಕಲಾಪದಲ್ಲಿ ಸದಸ್ಯ ಮಧುಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಜರಾಯಿ ಇಲಾಖೆಯು ಆಗಸ್ಟ್ 15ರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್‌ ನಿಷೇಧ ಮಾಡಿ, ಆದೇಶ ಹೊರಡಿಸಲಾಗುವುದು. ಬಳಕೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. ದೇವಸ್ಥಾನದ…

Read More

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಜಾಮೀನು ಭವಿಷ್ಯ ನಾಳೆ ಸುಪ್ರೀಂಕೋರ್ಟ್ ನಲ್ಲಿ ನಿರ್ಧಾರ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ತೂಗುದೀಪ್ ಹಾಗೂ ನಟಿ ಪವಿತ್ರಾಗೌಡ ಅವರಿಗೆ ನೀಡಲಾಗಿದ್ದ ಕರ್ನಾಟಕ ಹೈಕೋರ್ಟ್ ನ ಜಾಮೀನು ರದ್ದುಗೊಳಿಸಬೇಕೆಂದು ಸುಪ್ರೀಂಕೋರ್ಟಿಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಗಿದಿದ್ದು, ನಾಳೆ ಗುರುವಾರ ತೀರ್ಪು ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಪವಿತ್ರಾಗೌಡ ಅವರಿಗೆ ನಾಳೆ ಬಹಳ ಮಹತ್ವದ ದಿನವಾಗಿದ್ದು, ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಈಗಾಗಲೇ ಸುಪ್ರೀಂಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಬೇಕೆಂದು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ…

Read More

ವೋಟಿ​ಗಾಗಿ ನೋಟು; ಸಿದ್ದರಾಮಯ್ಯ,ಡಿ.ಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು, ಆ.13: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವೋಟ್​ಗಾಗಿ ನೋಟು ಹಂಚಿಕೆ ಮಾಡಲಾಗಿದೆ ಎಂಬ ಶಾಸಕ ಶಿವಲಿಂಗೇಗೌಡ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್​ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. “2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ನ ಅಭ್ಯರ್ಥಿಯಾಗಿದ್ದ ಸಂಸದ ಶ್ರೇಯಸ್​ ಎಂ. ಪಟೇಲ್​ ಪರವಾಗಿ ಜಿಲ್ಲೆಯಲ್ಲಿ ಹಣ ಹಂಚಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ…

Read More

ಧರ್ಮಸ್ಥಳ ಬಳಿ ಶವಗಳನ್ನು ಹೂತಿಟ್ಟ ಕೇಸ್: ನಾಳೆ 13ನೇ ಸ್ಥಳದ ಜಿಪಿಆರ್ ವರದಿ ಎಸ್ಐಟಿಗೆ ಸಲ್ಲಿಕೆ

ಬೆಳ್ತಂಗಡಿ/ಬೆಂಗಳೂರು, ಆಗಸ್ಟ್ 13: ರಾಜ್ಯದ ಸುಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳ ಸ್ನಾನಘಟ್ಟದ ಬಳಿ ಅನಾಮಿಕ ವ್ಯಕ್ತಿ ಗುರುತಿಸಿರುವ 13 ನೇ ಸ್ಥಳದಲ್ಲಿ ಜಿಪಿಆರ್‌ ಬಳಸಿ ನಡೆಸುತ್ತಿದ್ದ ಶೋಧ ಕಾರ್ಯ ಮುಗಿದಿದ್ದು ಅದರ ವರದಿಯನ್ನು ತಂಡ ಇಂದು ಅಥವಾ ನಾಳೆ ಗುರುವಾರ ಎಸ್‌‍ಐಟಿಗೆ ನೀಡಲಿದೆ. ಈ ತಂಡ ನೀಡುವ ವರದಿ ಆಧಾರದ ಮೇಲೆ ಎಸ್‌‍ಐಟಿ ಉತ್ಖನನವನ್ನು ಆರಂಭಿಸಲಿದೆ. ಸೋಮವಾರ ದೆಹಲಿಯಿಂದ ಮಂಗಳೂರಿಗೆ ಬಂದ ಜಿಪಿಆರ್‌ ತಂಡ ಅಂದು ಪ್ರಾಯೋಗಿಕವಾಗಿ 13ನೇ ಸ್ಥಳದಲ್ಲಿ ಪರಿಶೀಲಿಸಿತು. ಬಳಿಕ ಆ ಸ್ಥಳದಲ್ಲಿದ್ದ ಗಿಡಗಂಟೆಗಳನ್ನು ತೆರವುಗೊಳಿಸಿ…

Read More

ಕಾರವಾರ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ದಾಳಿ

ಕಾರವಾರ, ಆಗಸ್ಟ್ 13: ಉತ್ತರಕನ್ನಡ ಜಿಲ್ಲೆಯ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. 6 ಕಾರುಗಳಲ್ಲಿ ಬಂದಿರುವ 24ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಕಾರಣ ಶಾಸಕ ಸತೀಶ್ ಸೈಲ್ ಬೆಂಗಳೂರಿನಲ್ಲಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಸತೀಶ್ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಮಲ್ಲಿಕಾರ್ಜುನ ಶಿಪ್ಪಿಂಗ್…

Read More

ಸಂಪುಟದಿಂದ ಕೆ.ಎನ್ ರಾಜಣ್ಣರನ್ನು ವಜಾ ಮಾಡಿಸಿದ್ದು ರಣದೀಪ್ ಸುರ್ಜೇವಾಲ!?

ಬೆಂಗಳೂರು, ಆಗಸ್ಟ್ 12: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣರನ್ನ ವಜಾಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ..! ಹೌದು, ಹಾಲಿ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ ಇತ್ತೀಚೆಗೆ ಬೆಂಗಳೂರಿಗೆ ಬಂದು ಸಚಿವರು, ಶಾಸಕರ ಸಭೆ ನಡೆಸಿದ್ದರು. ಇದನ್ನು ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಬಹಿರಂಗವಾಗಿ ಪ್ರಶ್ನಿಸಿದ್ದರು. ಜೊತೆಗೆ ರಣದೀಪ್ ಸುರ್ಜೇವಾಲಾ, ಎಲ್ಲಾ ಕ್ಯಾಬಿನೆಟ್ ಸಚಿವರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿದ್ದರು. ಈ ಮಾತುಕತೆಗೆ ಸಹಕಾರ ಸಚಿವರಾಗಿದ್ದ ಕೆ.ಎನ್‌.ರಾಜಣ್ಣ…

Read More

ಕಾಲ್ತುಳಿತ ಕೇಸ್, ರಾಜಣ್ಣ ವಜಾ ಗಲಾಟೆ ಮಧ್ಯೆ ಅಧಿವೇಶನದಲ್ಲಿ 15 ವಿಧೇಯಕಗಳ ಮಂಡನೆ

ಬೆಂಗಳೂರು, ಆಗಸ್ಟ್ 12: ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನದ 2ನೇ ದಿನದ ಕಲಾಪ ನಡೆಯುತ್ತಿದೆ. ಸಚಿವ ಕೆ.ಎನ್ ರಾಜಣ್ಣ ತಲೆದಂಡ, ಆರ್.ಸಿ.ಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿವೆ. ಇದರ ನಡುವೆ ಇಂದು(ಆಗಸ್ಟ್ 12) ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ. ಸಚಿವರಾದ ಪರಮೇಶ್ವರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಸಂತೋಷ್ ಲಾಡ್, ಎಂ.ಸಿ ಸುಧಾಕರ್ ಹಾಗೂ ಬೋಸರಾಜು ಪರವಾಗಿ ಕಾನೂನು ಸಚಿವ…

Read More
error: Content is protected !!