Headlines

ಕರ್ನಾಟಕದಲ್ಲಿ ಮತ್ತೆ‌ ಸರ್ಕಾರದಿಂದ ಕರೆಂಟ್ ಶಾಕ್ ಸಾಧ್ಯತೆ!

ಬೆಂಗಳೂರು, ಸೆ.14: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ…

Read More

ಚಂದನ್ ಆತ್ಮಹತ್ಯೆ ಬೆದರಿಕೆಯ ಹಿಂದಿನ ರಹಸ್ಯವೇನು!?

ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ : ನನ್ನ ಸಾವಿಗೆ ಸೆನ್ ಡಿವೈಸ್ಪಿ ಪವನ್ ಕುಮಾರ್ ಕಾರಣ ಎಂದು ಆರೋಪಿಸಿ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾನೆ. ಬೆಂಗಳೂರು ಮೂಲದ ಬ್ಯಾಡ್ಮಿಂಟನ್ ಕೋಚ್ ಆಗಿರುವ ಚಂದನ್ ಗಂಭೀರ ಆರೋಪ ಮಾಡಿ ವಿಡಿಯೊ ಹರಿಯಬಿಟ್ಟಿದ್ದು ಇದರ ರಹಸ್ಯವೆ ಮಾನವೀಯತೆಗೆ ಬೆಂಕಿ ಇಟ್ಟ ಕಥೆಯಾಗಿದೆ. ಕೋಚರ್ ಚಂದನ್ ಹೇಳುವಂತೆ, ನಾನು ಅವರಿಗೆ ಫ್ರೀ ಕೋಚಿಂಗ್ ಕೊಟ್ಟಿದ್ದೇನೆ, ಅವರ ಬಳಿ ಸಾಲವಾಗಿ ಹಣ ಕೂಡ ಪಡೆದಿದ್ದೇನೆ. ಇದೀಗ ನನಗೆ ತುಂಬಾ ಕಿರುಕುಳ…

Read More

ಹಾಸನ‌ ಬಳಿ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ 10 ಕ್ಕೆ ಏರಿಕೆ!

ಹಾಸನ, ಸೆ.13: ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿ ಗ್ರಾಮದ ಬಳಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್ ಹರಿದು ನಡೆದಿದ್ದ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಇಂದು ಶನಿವಾರ ಈ ದುರಂತದಲ್ಲಿ ಬೆಳಿಗ್ಗೆಯವರೆಗೂ 9 ಮಂದಿ ಸಾವನ್ನಪ್ಪಿದ್ದರು.ಇದೇ ದುರಂತದಲ್ಲಿ ಹಾಸನ ತಾಲ್ಲೂಕಿನ ಶಿವಯ್ಯನ ಕೊಪ್ಪಲು ಗ್ರಾಮದ ಯುವಕ 26 ವರ್ಷದ ಚಂದನ್ ಗಂಭೀರ ಸ್ಥಿತಿಯಲ್ಲಿ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ. ದುರಾದೃಷ್ಟವಶಾತ್ ಟ್ರಕ್ ಹರಿದಿದ್ದರಿಂದ ಚಂದನ್ ಬ್ರೇನ್ ಡೆಡ್ ಸ್ಥಿತಿಯಲ್ಲಿತ್ತು. ಹೀಗಾಗಿ ಚಂದನ್ ನನ್ನು…

Read More

ಹಾಸನ ದುರಂತ: ಹಿಮ್ಸ್ ಗೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ, ಜೆಡಿಎಸ್ ನಿಂದ ತಲಾ 1 ಲಕ್ಷ ರೂ. ಪರಿಹಾರ ಘೋಷಣೆ

ಹಾಸನ ತಾಲ್ಲೂಕಿನ ಮೊಸಳೆ ಹೊಸಹಳ್ಳಿ ಗ್ರಾಮದ ಬಳಿ ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ ಇಂದು ಶನಿವಾರ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಹಾಸನದ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ನೀಡಿದರು. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ದೇವೇಗೌಡ ಘೋಷಣೆ ಮಾಡಿದರು. ಗಂಭೀರವಾಗಿ ಗಾಯಗೊಂಡವರಿಗೆ 25 ಸಾವಿರ ರೂ., ಸ್ವಲ್ಪ…

Read More

ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಹರಿದ ಟ್ರಕ್: 8 ಗಣೇಶ ಭಕ್ತರು ದುರ್ಮರಣ!

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ವೇಗವಾಗಿ ಬಂದ ಟ್ರಕ್ ಹರಿದು 8 ಮಂದಿ ಗಣೇಶ ಭಕ್ತರು ಸಾವನ್ನಪ್ಪಿದ ದುರ್ಘಟನೆ ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಗ್ರಾಮದ ಬಳಿ ನಡೆದಿದೆ. ಇಂದು ಶುಕ್ರವಾರ ರಾತ್ರಿ ಈ ದುರಂತ ಘಟಿಸಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ 20 ಕ್ಕೂ ಹೆಚ್ಚಿನ ಗಣೇಶ ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆ ಮತ್ತು ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಭೀಕರ ಅಪಘಾತದ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ…

Read More

ನನಗೆ ಮನೆಯೇ ಇಲ್ಲ, ಸಮೀರ್ ಎಂ.ಡಿ ಅಂದ್ರೆ ಬಾಡಿಗೆಗೆ ಮನೆ ಕೊಡ್ತಿಲ್ಲ!

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಎಸ್ಐಟಿ ತನಿಖೆಗೆ ಒಳಗಾಗಿರುವ ಸಮೀರ್ ಎಂ.ಡಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಯೂಟ್ಯೂಬ್ ವಿಡಿಯೋದಲ್ಲಿ ಮಾತನಾಡಿರುವ ಸಮೀರ್​.. ನನಗೆ ವಿದೇಶದಿಂದ ಫಂಡ್​ ಬಂದಿದೆ ಎಂದು ಆರೋಪ ಮಾಡುತ್ತಿದ್ದಾರೆ. ನನಗೆ ಯಾವುದೇ ಫಂಡ್ ಬಂದಿಲ್ಲ. ಹಣ ತಗೊಂಡಿದ್ದಿದ್ರೆ ತನಿಖೆಯಿಂದ ಎಲ್ಲಾ ಹೊರಗೆ ಬರ್ತಿತ್ತು. ಪೊಲೀಸರಿಗೆ ಎಲ್ಲಾ ಬ್ಯಾಂಕ್ ದಾಖಲೆ ನೀಡಿದ್ದೇನೆ. ಪೊಲೀಸರು ತನಿಖೆ ಮಾಡಲಿ, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡುವವರನ್ನ ಯಾರೂ ಪ್ರಶ್ನೆ ಮಾಡಲ್ಲ ಎಂದು ಆಕ್ರೋಶ…

Read More

ಸೆ.22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಬೆಂಗಳೂರು, ಸೆ.12: ಬಹು ಚರ್ಚಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಇದೇ ಸೆಪ್ಟೆಂಬರ್ ತಿಂಗಳ 22ರಿಂದ ಅಕ್ಟೋಬರ್ 7ರವರೆಗೆ ಕೈಗೊಳ್ಳಲಾಗುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮನವಿ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ಎಂದೇ ಪರಿಗಣಿಸಲಾಗುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಸಮಗ್ರ ಮಾಹಿತಿ ನೀಡಿದರು. ರಾಜ್ಯದಲ್ಲಿ 2 ಕೋಟಿ ಮನೆಗಳಿದ್ದು, 7 ಕೋಟಿ ಜನಸಂಖ್ಯೆ ಇದೆ. ಎಲ್ಲಾ ಮನೆಗಳ ಸಮೀಕ್ಷೆ ನಡೆಸಲು, ದಸರಾ…

Read More

“ಚಾಮರಾಜನಗರ ನಗರಸಭೆ ಮೇಲೆ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಹಾಗೂ ಅಕ್ರಮಗಳ ಪರಿಶೀಲನೆ”

ಚಾಮರಾಜನಗರ ನಗರಸಭೆ ಕಚೇರಿಯಲ್ಲಿ ಭ್ರಷ್ಟಾಚಾರ, ಕೆಲಸ ವಿಳಂಬ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಕಡತಗಳನ್ನು ಪರಿಶೀಲನೆ ನಡೆಸಿದರು.ಮೈಸೂರು ಹಾಗೂ ಚಾಮರಾಜನಗರ ಲೋಕಾಯುಕ್ತ ಅಧಿಕಾರಿಗಳ ಐದು ತಂಡಗಳು ನಗರಸಭೆಗೆ ದಿಢೀರನೇ ದಾಳಿ ನಡೆಸಿದ್ದು, ಪೌರಾಯುಕ್ತರ ಕಚೇರಿ, ಕಂದಾಯ ಶಾಖೆ, ಆರೋಗ್ಯ ಶಾಖೆ ಸೇರಿದಂತೆ ಇತರೆ ಶಾಖೆಗಳ ಮೇಲೆ ದಾಳಿ ನಡೆಸಿ ಅಲ್ಲಿನ ಕಡತಗಳನ್ನು ಸಂಜೆಯ ವರೆಗೂ ಪರಿಶೀಲನೆ ನಡೆಸಿದ್ದಾರೆ.ಆಯಾ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರಾಯುಕ್ತರಿಂದ ಮಾಹಿತಿ ಪಡೆದುಕೊಂಡ ಲೋಕಾಯುಕ್ತ…

Read More

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್.ನಾರಾಯಣ್ ವಿರುದ್ಧ ಎಫ್ಐಆರ್ ದಾಖಲು

ನಿರ್ದೇಶಕ ಎಸ್​. ನಾರಾಯಣ್ ಅವರು ಇತ್ತೀಚೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ‘ನನ್ನ ಹೆಸರಲ್ಲಿ ಫೇಕ್ ಟ್ವಿಟರ್ ಖಾತೆ ಮಾಡಲಾಗಿದೆ. ಇದರ ಮೂಲಕ ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ’ ಎಂದು ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಈಗ ಅವರು ಮತ್ತೆ ಪೊಲೀಸ್ ಠಾಣೆ ಮೆಟ್ಟಿಲು ಏರಬೇಕಾದ ಪರಿಸ್ಥಿತಿ ಬಂದಿದೆ. ಅದೂ ಆರೋಪಿಯಾಗಿ. ಸೊಸೆ ಪವಿತ್ರಾ ಅವರು ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ದೂರು ದಾಖಲು ಮಾಡಿದ್ದು, ಎಫ್ಐಆರ್ ದಾಖಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ…

Read More

ಸಿಎಂ ಖಡಕ್ ಸೂಚನೆ ಮೇರೆಗೆ ಕರ್ನಾಟಕದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದು!!!

ಬೆಂಗಳೂರು, ಸೆ.10: ಕರ್ನಾಟಕದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್ ಪಡಿತರ ಕಾರ್ಡ್ ಗಳ ಪೈಕಿ ಈಗಾಗಲೇ 3.65 ಲಕ್ಷ ಕಾರ್ಡ್​ ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದ್ದು, ಇನ್ನೂ ಸಾಕಷ್ಟ ಅನರ್ಹರು ಬಿಪಿಎಲ್ ಕಾರ್ಡ್​ ಗಳನ್ಜು ಹೊಂದಿದ್ದಾರೆ. ಅವುಗಳನ್ನು ಪತ್ತೆ ಮಾಡಿ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಹಾರ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು…

Read More
error: Content is protected !!