ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲುತೂರಾಟ: ಮದ್ದೂರು ಉದ್ವಿಗ್ನ, ಲಾಠಿಚಾರ್ಜ್
ಮಂಡ್ಯ, ಸೆ.8: ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಮದ್ದೂರು ಉದ್ವಿಗ್ನಗೊಂಡಿದೆ. ಘಟನೆ ಖಂಡಿಸಿ ಸಾಗರೋಪಾದಿಯಲ್ಲಿ ಸೇರಿದ್ದ ಜನ ಕೋಮು ಗಲಭೆಗೆ ಅವಕಾಶ ಮಾಡಿಕೊಡುವ ಸಾಧ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಆದರೂ ಸ್ಥಳದಲ್ಲಿ ಬೂದಿ ಮುಚ್ಚಿದ ಕೆಂಡದಂತ ವಾತಾವರಣವಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಂತರವೇ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್…

