ನಾಳೆ ಪ್ರಧಾನಿ ಆಗಮಿಸುವ ಹಿನ್ನೆಲೆ: ಬೆಂಗಳೂರಿನ ಸಂಚಾರ ಮಾರ್ಗದಲ್ಲಿ ಬದಲಾವಣೆ
ಬೆಂಗಳೂರು, ಆಗಸ್ಟ್ 9: ವಂದೇ ಭಾರತ್ ರೈಲು ಹಾಗೂ ಮೆಟ್ರೊ ಮಾರ್ಗ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದ್ದು, ಕೆಲ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ನಿರ್ಬಂಧಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ 12.30ರವರೆಗೆ ಮಾರೇನಹಳ್ಳಿ ಮುಖ್ಯ ರಸ್ತೆಯ ರಾಜಲಕ್ಷ್ಮಿ ಜಂಕ್ಷನ್ ನಿಂದ ಮಾರೇನಹಳ್ಳಿ 18ನೇ ಮುಖ್ಯ ರಸ್ತೆ ಹಾಗೂ ಮಾರೇನಹಳ್ಳಿ ಈಸ್ಟ್ ಎಂಡ್ ಮುಖ್ಯ ರಸ್ತೆ ಜಂಕ್ಷನ್‌ನಿಂದ ಆರವಿಂದ ಜಂಕ್ಷನ್…

