ಆಗಸ್ಟ್ 5 ರಂದು ಸಾರಿಗೆ ಮುಷ್ಕರ ಮಾಡುತ್ತಿಲ್ಲ: ಅನಂತ ಸುಬ್ಬರಾವ್ ಸ್ಪಷ್ಟನೆ
ಬೆಂಗಳೂರು, ಆಗಸ್ಟ್ 3: ಇದೇ ಮಂಗಳವಾರ (ಆಗಸ್ಟ್ 5) ರಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಬರುತ್ತಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್ ಸಂಚಾರ ಸ್ಥಗಿತಗೊಳಿಸಿ ಎಲ್ಲಾ ಸಿಬ್ಬಂದಿಗಳು ಮನೆಯಲ್ಲಿರುತ್ತಾರೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಕೂಡಲೇ ರಾಜ್ಯಸರ್ಕಾರ ಸಾರಿಗೆ ನೌಕರರಿಗೆ 38 ತಿಂಗಳ ಅರಿಯರ್ಸ್ ಕೊಡಬೇಕು. ಶಕ್ತಿ…

