ನಾಳೆಯಿಂದ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ!
ಬೆಂಗಳೂರು, ಜುಲೈ 31: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋರಿಕ್ಷಾ ಪ್ರಯಾಣದ ದರಗಳನ್ನು ಪರಿಷ್ಕರಿಸಿದ್ದು, ನಾಳೆ ಆಗಸ್ಟ್ 1 ರಿಂದಲೇ ನೂತನ ದರ ಜಾರಿಗೆ ಬರಲಿದೆ. ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋರಿಕ್ಷಾ ಮೀಟರ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಕನಿಷ್ಠ ದರ ಮೊದಲ 2 ಕಿ.ಮೀ.ಗೆ ತಲಾ 36 ರೂ. ನಿಗದಿಪಡಿಸಿದ್ದು, ಆಟೋರಿಕ್ಷಾದಲ್ಲಿ ಮೂವರು ಪ್ರಯಾಣಿಕರಿಗೆ ಪ್ರಯಾಣಿಸಲು ಅವಕಾಶವಿದೆ. ಕಾಯುವಿಕೆ ದರವು ಮೊದಲ 5 ನಿಮಿಷ ಉಚಿತವಾಗಿದೆ. ಅನಂತರ ಪ್ರತಿ 15…

