ಪರಪ್ಪನ ಅಗ್ರಹಾರ ಸೇರೊ ಮುನ್ನ ಲುಕ್ ಬದಲಾಯಿಸಿದ ದರ್ಶನ್!
ಬೆಂಗಳೂರು, ಆಗಸ್ಟ್ 16: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ತೂಗುದೀಪ್, ಪವಿತ್ರಾಗೌಡ ಹಾಗೂ ಇನ್ನೂ ಕೆಲವರು ಮತ್ತೆ ಬಂಧನಕ್ಕೆ ಒಳಗಾಗಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ. ಹೀಗೆ ನ್ಯಾಯಾಂಗ ಬಂಧನಕ್ಕೆ ಕಳಿಸುವ ಮುಂಚೆ ಎಲ್ಲ ಆರೋಪಿಗಳ ಚಿತ್ರಗಳು, ಬೆರಳಚ್ಚು ತೆಗೆದುಕೊಂಡು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಕೊಂಡಿದ್ದರು. ನ್ಯಾಯಾಂಗ ಬಂಧನಕ್ಕೆ ಕಳಿಸುವ ಮುಂಚೆ ತೆಗೆದುಕೊಂಡಿದ್ದ…

