Headlines

ಅರಣ್ಯ ಪ್ರದೇಶಗಳಲ್ಲಿ ಇನ್ನು‌ ದನ-ಕರು, ಕುರಿ-ಮೇಕೆ ಮೇಯಿಸುವುದು ನಿಷೇಧ!

ಬೆಂಗಳೂರು, ಜುಲೈ 22: ಕರ್ನಾಟಕದಲ್ಲಿರುವ ಅರಣ್ಯ ಪ್ರದೇಶದೊಳಗೆ ದನಕರು , ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ…

Read More

17 ಲಕ್ಷ ಜನರಿಗೆ ತುಂಗಭದ್ರಾ ಕುಡಿಯುವ ನೀರಿನ ಸೌಲಭ್ಯ; ಸಿಎಂ ಸಿದ್ದರಾಮಯ್ಯ

ತುಮಕೂರು, ಜುಲೈ 21: ಜಿಲ್ಲೆಯ ಪಾವಗಡ ವಿಧಾನಸಭಾ ಕ್ಷೇತ್ರದ ಜನರು ಇಂದು ಸುವರ್ಣ ಅಕ್ಷರಗಳಲ್ಲಿಎ ಬರೆದಿಡುವ ಕ್ಷಣವಾಗಿದೆ, 2529 ಕೋಟಿ ವೆಚ್ಚದಲ್ಲಿ ಪಾವಗಡ, ಮೊಳಕಾಲ್ಮೂರು, ಚಳ್ಳಕೆರೆ, ಕೂಡ್ಲಿಗಿ,ಹಾಗೂ ಹರಪನಹಳ್ಳಿ ತಾಲ್ಲೂಕುಗಳ ಜನರಿಗೆ ಕುಡಿಯುವ ನೀರು ನೀಡಲಾಗುತ್ತಿದೆ, ಪ್ಲೋರೈಡ್ ನೀರಿನಿಂದ ಹಲವು ರೋಗಗಳು ಬರುತ್ತಿದ್ದವು ಇದರ ನಿವಾರಣೆಗೆ 200 ಕಿ.ಮೀ ದೂರದಿಂದ ಕುಡಿಯುವ ನೀರು ತಂದು ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಾವಗಡ ಪಟ್ಟಣದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ…

Read More

ಎಲ್ಲಾ ಶಾಸಕರಿಗೂ 50 ಕೋಟಿ ನೀಡಲು ಅನುದಾನ ಲಭ್ಯವಿಲ್ಲ: ಸಿಎಂ ಆರ್ಥಿಕ ಸಲಹೆಗಾರ

ಹುಬ್ಬಳ್ಳಿ, ಜು.21: ರಾಜ್ಯದ ಎಲ್ಲಾ ಶಾಸಕರ ಕ್ಷೇತ್ರಗಳಿಗೂ ತಲಾ 50 ಕೋಟಿ ರೂ. ಅನುದಾನ ನೀಡುವ ಸಂದರ್ಭದಲ್ಲಿ ನಡೆದ ಚರ್ಚೆಯನ್ನು ಸಿಎಂ ಆರ್ಥಿಕ ಸಲಹೆಗಾರರಾಗಿರುವ ಬಸವರಾಜರಾಯರೆಡ್ಡಿ ಬಹಿರಂಗಪಡಿಸಿದ್ದಾರೆ. ಇಂದು ನಗರದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ತಯಾರಿಕೆಯ ವೇಳೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಎಲ್ಲಾ ಶಾಸಕರಿಗೂ ತಲಾ 50 ಕೋಟಿ ರೂ.ಗಳನ್ನು ನೀಡುವ ಇಂಗಿತ ವ್ಯಕ್ತಪಡಿಸಿದ್ದರು. ಆ ಸಂದರ್ಭದಲ್ಲಿ ನಾನು ಕೂಡ ಇದ್ದೆ. ಎಲ್ಲಾ ಶಾಸಕರಿಗೂ ತಲಾ…

Read More

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್!

ನವದೆಹಲಿ, ಜುಲೈ 21: ಮುಡಾ ಹಗರಣ ಸಂಬಂಧ ಕೇಂದ್ರ ಜಾರಿ ನಿರ್ದೇಶನಾಲಯ ತನಿಖೆ ವಿಚಾರದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಸುಪ್ರೀಂಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಅವರಿಗೆ ಕೇಂದ್ರ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇ.ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ಇಡಿಯನ್ನು ರಾಜಕೀಯವಾಗಿ ಬಳಸಿಕೊಳ್ಳುವ…

Read More

ಧರ್ಮಸ್ಥಳ ಭಾಗದ ಅಸಹಜ ಸಾವು-ನಾಪತ್ತೆಯಾದವರ ಕೇಸ್ ಗಳನ್ನು ಎಸ್ಐಟಿಗೆ ವಹಿಸಿದ ರಾಜ್ಯಸರ್ಕಾರ

ಬೆಂಗಳೂರು, ಜುಲೈ 20: ಧರ್ಮಸ್ಥಳ ಭಾಗದಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು ಹಾಗೂ ಅಸ್ವಾಭಾವಿಕ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳನ್ನು ಡಿಜಿಪಿ ಮಟ್ಟದ ಹಿರಿಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖೆಗೊಳಪಡಿಸುವುದಾಗಿ ರಾಜ್ಯಸರ್ಕಾರ ತಿಳಿಸಿದೆ. ಗೃಹ ಇಲಾಖೆಯಿಂದ ಹೊರಡಿಸಲಾಗಿರುವ ಆದೇಶದ ಅನುಸಾರ ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಪೊಲೀಸ್‌‍ ಮಹಾ ನಿರ್ದೇಶಕ ಡಾ. ಪ್ರಣವ್ ಮೊಹಾಂತಿ ನೇತೃತ್ವದಲ್ಲಿ 4 ಐಪಿಎಸ್‌‍ ಅಧಿಕಾರಿಗಳ ಎಸ್‌‍ಐಟಿ ರಚಿಸಲಾಗಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ…

Read More

ಸಣ್ಣ ವ್ಯಾಪಾರಿಗಳಿಗೆ GST ಗೊಂದಲಕ್ಕೆ ಕೇಂದ್ರವೇ ಹೊಣೆ: ಸಿಎಂ

ಬೆಂಗಳೂರು, ಜುಲೈ 20: ಸಣ್ಣ ವ್ಯಾಪಾರಿಗಳಿಗೆ ಜಿಎಸ್‌‍ಟಿ ತೆರಿಗೆಯ ನೋಟಿಸ್‌‍ ನೀಡಿರುವ ಸಂಬಂಧ ಪಟ್ಟಂತೆ ರಾಜ್ಯಸರ್ಕಾರ ಯಾವುದೇ ಜವಾಬ್ದಾರಿ ಹೊಂದಿಲ್ಲ . ಕೇಂದ್ರಸರ್ಕಾರವೇ ಹೊಣೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ವರದಿಗಾರರೊಂದಿಗೆ ಮಾತನಾಡಿರುವ ಅವರು, ಜಿಎಸ್‌‍ಟಿ ಕಾಯ್ದೆ ಮಾಡಿರುವುದು ಕೇಂದ್ರ ಸರ್ಕಾರ. ಜಿಎಸ್‌‍ಟಿ ಕೌನ್ಸಿಲ್‌ ಕೂಡ ರಾಜ್ಯ ಸರ್ಕಾರದ ಅಧೀನದಲ್ಲಿ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರವೇ ಹೊಣೆಗಾರಿಕೆ ಹೊಂದಿದೆ ಎಂದರು. ರಾಜ್ಯಸರ್ಕಾರದಿಂದ ಸಣ್ಣ ವ್ಯಾಪಾರಿಗಳಿಗೆ ಅನುಕೂಲ ಮಾಡಲು ಯಾವುದಾದರೂ ಅವಕಾಶಗಳು ಇದ್ದರೆ ಅದರ ಬಗ್ಗೆ…

Read More

KRIDL ನಲ್ಲಿ ಭಾರಿ ಅಕ್ರಮ: ಲೋಕಾಯುಕ್ತಕ್ಕೆ ದೂರು

ಕೊಪ್ಪಳ, ಜುಲೈ 20: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣ ಸಾಕಷ್ಟು ಸದ್ದು ಮಾಡಿದ್ದು, ಈ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ತಲೆದಂಡ ಕೂಡಾ ಆಗಿತ್ತು. ಅಂತಹದ್ದೇ ಇನ್ನೊಂದು ಹಗರಣ ಕೊಪ್ಪಳದ ಕೆಐಆರ್‌ಡಿಎಲ್ ನಲ್ಲಿ ನಡೆದಿದೆ. ಈ ಹಗರಣದಲ್ಲಿ ಭಾಗಿಯಾದ ಇಬ್ಬರು ಅಧಿಕಾರಿಗಳ ವಿರುದ್ದ ಕೊಪ್ಪಳ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. 96 ಕಾಮಗಾರಿಗಳಲ್ಲಿ 72 ಕೋಟಿ ಸರ್ಕಾರಿ ಹಣವನ್ನ ದುರ್ಬಳಕೆ ಮಾಡಿರೋ ಬಗ್ಗೆ ಅಧಿಕಾರಿಗಳು ದಾಖಲೆಗಳನ್ನ ಸಲ್ಲಿಕೆ ಮಾಡಿದ್ದಾರೆ. 2019 ರಿಂದ 2025…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಹ್ಲಿ ಅಭಿಮಾನಿಗಳ ಕ್ಷಮೆ ಕೇಳಬೇಕೆಂದ ಮಾಜಿ ಮಹಿಳಾ ಡಿವೈಎಸ್ಪಿ

ಉಡುಪಿ, ಜುಲೈ 19: ‘ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್​ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಪೊಲೀಸ್ ಇಲಾಖೆಯಲ್ಲಿನ ರಾಜಕೀಯವೇ ಕಾರಣ. ಆದರೆ, ಸರ್ಕಾರ ಹೈಕೋರ್ಟ್​​ಗೆ ಸಲ್ಲಿಸಿರುವ ವರದಿಯಲ್ಲಿ ವಿರಾಟ್ ಕೊಹ್ಲಿ ಅವರನ್ನು ಆರೋಪಿ ಸ್ಥಾನದಲ್ಲಿ ಉಲ್ಲೇಖಿಸಲಾಗಿದೆ. ಕೊಹ್ಲಿಯನ್ನು ಜೈಲಿಗೆ ಕಳುಹಿಸಲು ಸಂಚು ರೂಪಿಸಲಾಗಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಕೊಹ್ಲಿ ಅಭಿಮಾನಿಗಳ ಕ್ಷಮೆಯಾಚಿಸಬೇಕು’ ಎಂದು ಮಾಜಿ ಡಿವೈಎಸ್​​ಪಿ ಅನುಪಮಾ ಶೆಣೈ ಆಗ್ರಹಿಸಿದ್ದಾರೆ. ಇದಷ್ಟೇ ಅಲ್ಲದೆ, ಬೆಂಗಳೂರಿನ ಕೆ.ಜೆ ಹಳ್ಳಿ ಮತ್ತು ಡಿ.ಜೆ ಹಳ್ಳಿ ಗುಂಪುಗಳ ನೆರವು ಪಡೆದು…

Read More

ಕ್ಯಾಂಟೀನ್‌ಗೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ: ಯುವತಿ ಸಾವು!

ಬೆಂಗಳೂರು, ಜುಲೈ 19: ನಗರದಲ್ಲಿ ಆಗಾಗ ಬಿಎಂಟಿಸಿ ಬಸ್‌ ಅಪಘಾತಕ್ಕೆ ಈಡಾಗುತ್ತಲೇ ಇವೆ. ಈ ನಡುವೆ ನಿನ್ನೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಪೀಣ್ಯ 2ನೇ ಹಂತದ ಬಳಿ ಕ್ಯಾಂಟೀನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವತಿ ಸಾವಿಗೀಡಾಗಿ, ಹಲವರು ಗಾಯಗೊಂಡಿದ್ದಾರೆ. ಬಿಎಂಟಿಸಿ ನಿರ್ವಹಿಸುತ್ತಿದ್ದ ಎಲೆಕ್ಟ್ರಿಕ್ ಬಸ್ ನಿನ್ನೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಬದಿಯ ಕ್ಯಾಂಟೀನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ಗಾಯಗೊಂಡಿದ್ದಾರೆ.ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ಹೇಳಲಾಗಿದ್ದು, ಇದರಲ್ಲಿ ಓರ್ವ ಯುವತಿ ಸಾವಿಗೀಡಾಗಿದ್ದಾರೆ…

Read More

ಕನ್ನಡ ಧ್ವಜಕ್ಕೆ ಮತ್ತೆ ಹಕ್ಕು ಮಂಡಿಸಿ ಕೇಂದ್ರಕ್ಕೆ ಪತ್ರ ಬರೆದ ರಾಜ್ಯಸರ್ಕಾರ

ಬೆಂಗಳೂರು, ಜುಲೈ 19: ರಾಜ್ಯಸರ್ಕಾರ ಕನ್ನಡ ಧ್ವಜಕ್ಕೆ ಧ್ವಜಕ್ಕೆ ಮತ್ತೆ ಹಕ್ಕು ಮಂಡಿಸಿದೆ. ಹಳದಿ-ಕೆಂಪು ಬಾವುಟಕ್ಕೆ ಅಧಿಕೃತ ಮಾನ್ಯತೆ ಕೊಡುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 2017 ರಲ್ಲೇ ಬಾವುಟ ಅಧಿಕೃತ ಕೋರಿ ಕೇಂದ್ರಕ್ಕೆ ಅಂದಿನ ಸಿದ್ದರಾಮಯ್ಯ ಸರ್ಕಾರ ಮನವಿ ಸಲ್ಲಿಸಿತ್ತು. ಇದೀಗ ಮತ್ತೊಮ್ಮೆ ಪತ್ರ ಬರೆಯುವ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದೆ. ಪತ್ರ ಬರೆದಿರುವ ಬಗ್ಗೆ ಟಿವಿ9 ಗೆ ಸಚಿವ ಶಿವರಾಜ್ ತಂಗಡಗಿ ಮಾಹಿತಿ ನೀಡಿದ್ದಾರೆ….

Read More
error: Content is protected !!