Headlines

ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಜೀವ ಬೆದರಿಕೆ ಸಂದೇಶ!

ಕಾರವಾರ, ಜುಲೈ 18: ಮಾಜಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ಈ ಬಗ್ಗೆ ಅನಂತಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿಯವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೂನ್‌ 24ರಂದು ಅನಂತ ಕುಮಾರ್ ಹೆಗಡೆ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಬಂದಿತ್ತು. ನ್ಯಾಯಾಲಯದ ಅನುಮತಿ ಮೇರೆಗೆ ಶುಕ್ರವಾರ (ಜು.18) ದೂರು ದಾಖಲಿಸಲಾಗಿದೆ. ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅನಂತ ಕುಮಾರ್…

Read More

ಆಗಸ್ಟ್ 11 ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ

ಬೆಂಗಳೂರು, ಜುಲೈ 18: ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ ಆರಂಭವಾಗಲಿದೆ. ಇದರಂತೆ ಇತ್ತ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಸಹ ಆಗಸ್ಟ್ 11ರಿಂದ ಆರಂಭವಾಗಲಿದೆ. ಈ ಬಗ್ಗೆ ರಾಜ್ಯಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್ 11ರಿಂದ ಆಗಸ್ಟ್ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಇನ್ನು ಆಗಸ್ಟ್ 11ರಂದು ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಒಟ್ಟು 12 ದಿನಗಳ ಪೈಕಿ 8…

Read More

ಶಾಲೆಗಳಿಗೆ ಬಾಂಬ್ ಬೆದರಿಕೆ ಗಂಭೀರವಾಗಿ ಪರಿಗಣಿಸಿದ್ದೇವೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು, ಜುಲೈ 18: ನಗರದ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ ಮಾಹಿತಿ ಬಂದಿರುವುದನ್ನು ಲಘುವಾಗಿ ಪರಿಗಣಿಸುವುದಿಲ್ಲ. ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಶಾಲೆಗಳಿಗೆ ಬೆದರಿಕೆ ಕರೆ ಬಂದಿದ್ದು, ಬಾಂಬ್‌ ಬೆದರಿಕೆಯ ಅನೇಕ ಇ-ಮೇಲ್‌ಗಳೂ ಬಂದಿವೆ. ಇವುಗಳನ್ನು ಮೊದಲು ಪರಿಶೀಲನೆ ಮಾಡುತ್ತೇವೆ. ಯಾವುದನ್ನೂ ಲಘುವಾಗಿ ತೆಗೆದುಕೊಳ್ಳುವುದಿಲ್ಲ. ಏಕೆ ಈ ರೀತಿ ಮಾಹಿತಿ ಬರುತ್ತದೆ ಎಂಬುದನ್ನು ಪರಿಶೀಲಿಸುತ್ತೇವೆ. ಆನಂತರ ವಾಸ್ತವ ಏನೆಂಬುದು ಗೊತ್ತಾಗಲಿದೆ ಎಂದರು. ಪ್ರತಿ…

Read More

ಅಲ್ಪಸಂಖ್ಯಾತ ಇಲಾಖೆಯ ಅನುದಾನ ದುರ್ಬಳಕೆ ಆರೋಪ: ಸಚಿವ ಜಮೀರ್ ಗೆ ಪ್ರಾಸಿಕ್ಯೂಶನ್ ಭೀತಿ..!

ಸಚಿವ ಜಮೀರ್ ಅಹ್ಮದ್ ಅವರು ತಮ್ಮ ವಸತಿ ಮತ್ತು ಅಲ್ಪಸಂಖ್ಯಾತ ಇಲಾಖೆಯಲ್ಲಿ ಅನುದಾನ ದುರ್ಬಳಕೆ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿತ್ತು. ಸದ್ಯ ದೂರಿನ ಬಗ್ಗೆ ಸ್ಪಷ್ಟನೆ ಕೇಳಿರುವ ರಾಜ್ಯಪಾಲರು ಕೆಲ ದಾಖಲೆಗಳ ಬಗ್ಗೆ ಮಾಹಿತಿ ಕೇಳಿದ್ದಾರೆ. ಒಂದು ವೇಳೆ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ರೆ ಸಚಿವ ಜಮೀರ್​​ಗೆ ಸಂಕಷ್ಟ ಎದುರಾಗಲಿದೆ. ಅಲ್ಪಸಂಖ್ಯಾತ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇದೇ ಅಸ್ತ್ರ…

Read More

ಬೇಕರಿ, ಕಾಂಡಿಮೆಂಟ್ಸ್, ಅಂಗಡಿಗಳಿಗೆ ನೋಟಿಸ್: ಮತ್ತೊಂದು ಅಪ್ ಡೇಟ್ ನೀಡಿದ ವಾಣಿಜ್ಯ ತೆರಿಗೆ ಇಲಾಖೆ

ಬೆಂಗಳೂರಿನ ಬೇಕರಿಗಳು, ಕಾಂಡಿಮೆಂಡ್ಸ್, ಚಹಾ/ಕಾಫಿ ಅಂಗಡಿಗಳಿಗೆ ತೆರಿಗೆ ನೋಟಿಸ್ ನೀಡಿದ್ದ ವಾಣಿಜ್ಯ ತೆರಿಗೆ ಇಲಾಖೆ, ಆನಂತರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿತ್ತು. ವಾರ್ಷಿಕ ವಹಿವಾಟು 1.5 ಕೋಟಿ ರೂ.ಗಿಂತ ಕಡಿಮೆ ಇದ್ದರೆ ಅಂತಹ ವರ್ತಕರು ಕೇವಲ ಶೇ.1 ರಷ್ಟು ಮಾತ್ರ ತೆರಿಗೆ ಪಾವತಿಸಬಹುದು. ಕಂಪೋಸಿಷನ್ ಟ್ಯಾಕ್ಸ್ ಸ್ಕೀಮ್ ಆಯ್ಕೆ ಮಾಡಿ ವಿನಾಯಿತಿ ಪಡೆಯಬಹುದು ಎಂದಿತ್ತು. ಇದೀಗ ತೆರಿಗೆ ಇಲಾಖೆ ಈ ಬಗ್ಗೆ ಮತ್ತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಬಾರಿಯೂ ವಾಣಿಜ್ಯ ತೆರಿಗೆ ನೋಟಿಸ್ ಬಗ್ಗೆ…

Read More

ಹರಪನಹಳ್ಳಿ ಶಾಸಕಿ ಕಚೇರಿಯಲ್ಲಿ ಕಳ್ಳತನ!

ಹರಪನಹಳ್ಳಿ ಶಾಸಕಿ ಕಚೇರಿಯಲ್ಲಿ ಕಳ್ಳತನ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಕಾಶಿ ಸಂಗಮೇಶ ಬಡಾವಣೆಯಲ್ಲಿರುವ ಶಾಸಕಿ ಲತಾ ಮಲ್ಲಿಕಾರ್ಜುನ್ ಕಚೇರಿಯಲ್ಲಿ ಬೀಗ ಮುರಿದು ಕಳ್ಳತನ ಮಾಡಲಾಗಿದೆ. 2.50 ಲಕ್ಷ ರೂ., 10.80 ಲಕ್ಷ ರೂ. ಮೌಲ್ಯದ ಚಿನ್ನ ಕಳುವು ಮೊನ್ನೆ ಗುರುವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ. ಕಳ್ಳರು ಲಾಕರ್ ಮುರಿದು 2 ಲಕ್ಷದ 50 ಸಾವಿರ ರೂಪಾಯಿ ಹಣ ಹಾಗೂ 10.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ…

Read More

ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಆರ್.ಸಿ.ಬಿ ಹೊಣೆ: ಹೈಕೋರ್ಟ್ ಆದೇಶದಂತೆ ವರದಿ ಬಹಿರಂಗ

ಬೆಂಗಳೂರು, ಜುಲೈ 17: ಕರ್ನಾಟಕ ಸರ್ಕಾರವನ್ನು ಭಾರೀ ಮುಜುಗರಕ್ಕೆ ಸಿಲುಕಿಸಿದ್ದ ಜೂನ್‌ 4ರ ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ದುರಂತಕ್ಕೆ 11 ಆರ್.ಸಿ‌.ಬಿ ಅಭಿಮಾನಿಗಳು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡ ಘಟನೆಗೆ ಇದೀಗ ಏನು? ಯಾರು? ಕಾರಣ, ಹೊಣೆ? ಎಂದು ತನಿಖಾ ವರದಿಯಿಂದ ಬಹಿರಂಗವಾಗಿದೆ. ಹೌದು, ಹೈಕೋರ್ಟ್ ಅನುಮತಿಯ ಮೇರೆಗೆ ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ದುರಂತಕ್ಕೆ ವಿಜಯೋತ್ಸವ ಮೆರವಣಿಗೆ ಆಯೋಜಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಹೊಣೆ ಎಂದು ನ್ಯಾಯಾಂಗ ತನಿಖಾ ವರದಿ ತಿಳಿಸಿದೆ. ಕಳೆದ ಜೂನ್ 4…

Read More

ಮುಟ್ಟುಗೋಲು ಹಾಕಿರುವ ಮುಡಾ ಸೈಟ್ ಮಾಹಿತಿ ಬಹಿರಂಗಪಡಿಸಿ: ಇ.ಡಿಗೆ ಸ್ನೇಹಮಯಿ ಕೃಷ್ಣ ಪತ್ರ

ಮೈಸೂರು, ಜುಲೈ 17: ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಮುಡಾ ಹಗರಣದ ತನಿಖೆ ನಡೆಸುತ್ತಿರುವ ಕೇಂದ್ರ ಜಾರಿ ನಿರ್ದೇಶನಾಲಯಕ್ಕೆ ಇತ್ತೀಚೆಗೆ ಮತ್ತಷ್ಟು ಮಹತ್ವದ ಅಂಶಗಳು ತಿಳಿದುಬಂದಿತ್ತು. ಮೊದಲಿಗೆ ಸುಮಾರು 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದ ಇ.ಡಿ, ನಂತರ ಮತ್ತೆ 92 ಸೈಟ್​ಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಒಬ್ಬನೇ ವ್ಯಕ್ತಿಗೆ ಅಕ್ರಮವಾಗಿ 30 ರಿಂದ 40 ನಿವೇಶನಗಳನ್ನು ಹಂಚಿಕೆ ಮಾಡಿರುವುದನ್ನು ಇತ್ತೀಚೆಗೆ ಪತ್ತೆಮಾಡಿತ್ತು. ಇದೀಗ, ಮುಟ್ಟುಗೋಲು ಹಾಕಿಕೊಂಡಿರುವ 252 ಸೈಟುಗಳ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ…

Read More

ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿ ಶಾಸಕ ಕೆ.ವೈ ನಂಜೇಗೌಡರಿಗೆ ಶಾಕ್ ಕೊಟ್ಟ ಇ.ಡಿ!

ಕೋಲಾರ, ಜುಲೈ 17: ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರ ಆಸ್ತಿಯನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ. ಶಾಸಕ ಕೆ.ವೈ.ನಂಜೇಗೌಡ ಹಾಗೂ ಇತರರಿಗೆ ಸೇರಿದ ಒಟ್ಟು 1.32 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿದೆ. 2023ರಲ್ಲಿ ಕೋಮುಲ್ ನೇಮಕಾತಿ ಹಗರಣ ಸಂಬಂಧ 1.32 ಕೋಟಿ ರೂ. ಮೌಲ್ಯದ ಸ್ಥಿರ-ಚರಾಸ್ತಿಯನ್ನು ಜಪ್ತಿ ಮಾಡಿದೆ. ಈ ಬಗ್ಗೆ ಇಡಿ ಎಕ್ಸ್​​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. 2023ರ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ (KOMUL)…

Read More

ಭೂಒತ್ತುವರಿ ಆರೋಪ: ನ್ಯಾಯಾಂಗ ನಿಂದನೆ ಕೇಸ್ ನಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ.ಗೆ ರಿಲೀಫ್

ನವದೆಹಲಿ, ಜುಲೈ 17: ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ಹಿಂದಿನ ರಾಮನಗರ…

Read More
error: Content is protected !!