ಎಲ್ಲಾ ಶಾಸಕರಿಗೂ 50 ಕೋಟಿ ನೀಡಲು ಅನುದಾನ ಲಭ್ಯವಿಲ್ಲ: ಸಿಎಂ ಆರ್ಥಿಕ ಸಲಹೆಗಾರ
ಹುಬ್ಬಳ್ಳಿ, ಜು.21: ರಾಜ್ಯದ ಎಲ್ಲಾ ಶಾಸಕರ ಕ್ಷೇತ್ರಗಳಿಗೂ ತಲಾ 50 ಕೋಟಿ ರೂ. ಅನುದಾನ ನೀಡುವ ಸಂದರ್ಭದಲ್ಲಿ ನಡೆದ ಚರ್ಚೆಯನ್ನು ಸಿಎಂ ಆರ್ಥಿಕ ಸಲಹೆಗಾರರಾಗಿರುವ ಬಸವರಾಜರಾಯರೆಡ್ಡಿ ಬಹಿರಂಗಪಡಿಸಿದ್ದಾರೆ. ಇಂದು ನಗರದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ತಯಾರಿಕೆಯ ವೇಳೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಎಲ್ಲಾ ಶಾಸಕರಿಗೂ ತಲಾ 50 ಕೋಟಿ ರೂ.ಗಳನ್ನು ನೀಡುವ ಇಂಗಿತ ವ್ಯಕ್ತಪಡಿಸಿದ್ದರು. ಆ ಸಂದರ್ಭದಲ್ಲಿ ನಾನು ಕೂಡ ಇದ್ದೆ. ಎಲ್ಲಾ ಶಾಸಕರಿಗೂ ತಲಾ…

