Headlines

ಬಿಎಂಟಿಸಿ-ಕೆ.ಎಸ್.ಆರ್.ಟಿ.ಸಿ ಸೇರಿ 4 ನಿಗಮಗಳಿಂದ ಆಗಸ್ಟ್ 5 ರಂದು ಸಾರಿಗೆ ಮುಷ್ಕರಕ್ಕೆ ಕರೆ

ಬೆಂಗಳೂರು, ಜುಲೈ 16: ರಾಜ್ಯದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಂದಿನ ಆಗಸ್ಟ್​ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳ ಸಾರಿಗೆ ನೌಕರರು ಈ ಮುಷ್ಕರಕ್ಕೆ ಮುಂದಾಗಿದ್ದಾರೆ. ಕಳೆದ ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು. ಆದರೆ…

Read More

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಲು ಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು, ಜುಲೈ 15: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ಬಿ.ಎಂ.ಪಾರ್ವತಿ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜು.15) ಖಾಸಗಿ ದೂರು ವಿಚಾರಣೆ ನಡೆಯಿತು. ವಿಚಾರಣೆಗೂ ಮುನ್ನ ಲೋಕಾಯುಕ್ತ ತನಿಖಾಧಿಕಾರಿ ಈವರೆಗಿನ ತನಿಖಾ ಪ್ರಗತಿ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದರು. ಈ ವೇಳೆ, ದೂರುದಾರ ಸ್ನೇಹಮಯಿ ಕೃಷ್ಣ ಅವರು, “ತಾವು ಸಲ್ಲಿಸಿದ ದಾಖಲೆಗಳನ್ನು ಲೋಕಾಯುಕ್ತ…

Read More

ಪಂಚಭೂತಗಳಲ್ಲಿ ಅಭಿನಯ ಸಾಮ್ರಾಜ್ಞಿ ಬಿ‌.ಸರೋಜಾದೇವಿ ಲೀನ

ಬೆಂಗಳೂರು/ಚನ್ನಪಟ್ಟಣ, ಜುಲೈ 15: ಹಲವು ದಶಕಗಳ ಕಾಲ ಬಹುಭಾಷೆಗಳಲ್ಲಿ ನಟಿಸಿದ್ದ ಕನ್ನಡದ ಮೊಟ್ಟಮೊದಲ ಸೂಪರ್‌ ಸ್ಟಾರ್‌ ನಟಿ ಪ್ರತಿಷ್ಠಿತ ಪದಭೂಷಣ ಪ್ರಶಸ್ತಿ ಪುರಸ್ಕೃತೆ ಬಿ.ಸರೋಜಾದೇವಿ ಅವರು ಪಂಚಭೂತಗಳಲ್ಲಿ ಇಂದು ಲೀನವಾದರು. ಕುಟುಂಬ ಸದಸ್ಯರ ಆಕ್ರಂದನ, ಅಭಿಮಾನಿಗಳ ಭಾರ ಹೃದಯದ ನಡುವೆಯೇ ವಯೋಸಹಜತೆಯಿಂದ ನಿಧನರಾಗಿದ್ದ ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಸ್ವಗ್ರಾಮ ದಶವಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿಸಲಾಯಿತು. ಅವರ ಪುತ್ರ ಗೌತಮ್‌ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿಕೊಟ್ಟರು.: ಸುಮಾರು…

Read More

ರೈತರ ಹೋರಾಟಕ್ಕೆ ಮಣಿದ ರಾಜ್ಯಸರ್ಕಾರದಿಂದ ದೇವನಹಳ್ಳಿ ಭೂಸ್ವಾಧೀನ ರದ್ದು!

ಬೆಂಗಳೂರು, ಜುಲೈ 15: ಕೃಷಿ ಭೂಮಿಯನ್ನು ಸ್ವಾಧೀನ ಮಾಡುವ ಕ್ರಮಕ್ಕೆ ವಿರೋಧಿಸಿ ನೊಂದ ರೈತರು ನಡೆಸಿದ ಸತತ ಹೋರಾಟಕ್ಕೆ‌ ಕೊನೆಗೂ ಮಣಿದಿರುವ ರಾಜ್ಯಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸ್ಥಾಪನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಟ್ಟು ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಅಧಿಸೂಚನೆಯನ್ನು ರದ್ದುಪಡಿಸಿದೆ. ಇದರಿಂದಾಗಿ ಕಳೆದ ಹಲವು ತಿಂಗಳಿನಿಂದ ತಮ್ಮ ಜಮೀನು ಉಳಿಸಿಕೊಳ್ಳಲು ಪ್ರತಿಭಟನೆ ನಡೆಸುತ್ತಿದ್ದ ಅನ್ನದಾತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಸಿಎಂ…

Read More

ಶಕ್ತಿ ಯೋಜನೆಗೆ 12 ಸಾವಿರದ 800 ಕೋಟಿ ಅನುದಾನ: ಪಿ. ರವಿಕುಮಾರ್

ಮಂಡ್ಯ.ಜು.14:- ರಾಜ್ಯಾದ್ಯಂತ ಪಂಚ ಗ್ಯಾರಂಟಿಗಳು ಎರಡೂ ವರ್ಷಗಳನ್ನು ಪೂರೈಸಿದೆ. ಶಕ್ತಿ ಯೋಜನೆ ಒಂದಕ್ಕೆ 12 ಸಾವಿರದ 800 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಅವರು ತಿಳಿಸಿದರು. ಇಂದು (ಜು.14) ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ದಿ ಕಾರ್ಯಕ್ರಮಗಳ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಶಕ್ತಿ ಯೋಜನೆ…

Read More

ನಾಳೆ ಮೇರು ನಟಿ ಬಿ. ಸರೋಜಾದೇವಿ ಅಂತ್ಯಸಂಸ್ಕಾರ

ಬೆಂಗಳೂರು, ಜುಲೈ 14: ಕನ್ನಡ ಚಿತ್ರರಂಗದ ಮೇರು ನಟಿ ಬಿ.ಸರೋಜಾದೇವಿ ಅವರ ಅಂತ್ಯಸಂಸ್ಕಾರ ನಾಳೆ (ಜುಲೈ 15)ರಂದು ಮಂಡ್ಯ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶಾವರದಲ್ಲಿ ನೆರವೇರಲಿದೆ. ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದ ಸರೋಜಾದೇವಿ ಅವರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11.30ರ ವರೆಗೆ ಏರ್ಪಡಿಸಲಾಗಿದ್ದು, ನಂತರ ದಶಾವರದಲ್ಲಿ ತಾಯಿ ಸಮಾಧಿ ಪಕ್ಕದಲ್ಲಿ ನೆರವೇರಲಿದೆ. ಸರೋಜಾದೇವಿ ಪುತ್ರ ಗೌತಮ್ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದು, ನಾಳೆ ಬೆಳಿಗ್ಗೆ 11.30ರ ನಂತರ ಪಾರ್ಥಿವ ಶರೀರವನ್ನು ಚನ್ನಪಟ್ಟಣಕ್ಕೆ ಕರೆದೊಯ್ಯಲಾಗುವುದು. ಅಲ್ಲಿ ದಶಾವರದ…

Read More

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಮರಣಮೃದಂಗ: ನ್ಯಾಯಾಂಗ ತನಿಖಾ ವರದಿಯಲ್ಲಿ ಸತ್ಯ ಬಯಲು!

ಬೆಂಗಳೂರು, ಜುಲೈ 12: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿ 2025ನೇ ವರ್ಷದ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಈ‌ ದುರಂತದ ತನಿಖಾ ವರದಿ ಬಹಿರಂಗವಾಗಿದೆ. ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ತನಿಖಾ ವರದಿಯಲ್ಲಿ ಸ್ಫೋಟಕ ಅಂಶಗಳು ಬಯಲಾಗಿವೆ. ಕಾಲ್ತುಳಿತ ದುರಂತಕ್ಕೆ ಆರ್​​ಸಿಬಿ, ಡಿಎನ್​ಎ ಮತ್ತು ಕೆಎಸ್​ಸಿಎ ಕಾರಣ ಎಂದು…

Read More

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಮರಣಮೃದಂಗ: ತನಿಖಾ ವರದಿ ಸಲ್ಲಿಸಿದ ನ್ಯಾ. ಮೈಕಲ್ ಡಿ. ಕುನ್ಹಾ

ಬೆಂಗಳೂರು, ಜುಲೈ 11: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆ ನಡೆಸಿರುವ ನಿವೃತ್ತ ನ್ಯಾ. ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ…

Read More

ಮಾಜಿ ಸಭಾಪತಿ ಎನ್.ತಿಪ್ಪಣ್ಣ ನಿಧನಕ್ಕೆ ಗಣ್ಯರ ಸಂತಾಪ

ಬಳ್ಳಾರಿ, ಜುಲೈ 11: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಧಾನಪರಿಷತ್‌ ಮಾಜಿ ಸಭಾಪತಿ, ಹಿರಿಯ ಮುತ್ಸದ್ಧಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌.ತಿಪ್ಪಣ್ಣ (98) ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ತಿಪ್ಪಣ್ಣ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಬಳ್ಳಾರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಅವರ ಸ್ವಗ್ರಾಮ ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ತಿಪ್ಪಣ್ಣ ಅವರ ಪಾರ್ಥಿವ ಶರೀರದ…

Read More

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಸುರೇಶ್-ಭೀಮಾ ನಾಯ್ಕ್ ಪೈಪೋಟಿ

ಬಳ್ಳಾರಿ,ಜುಲೈ 11: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ನಾನೂ ಕೂಡ ಆಕಾಂಕ್ಷಿ ಎಂದು ಹೇಳುವ ಮೂಲಕ ಹಾಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್‌ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಪೈಪೋಟಿ ನೀಡಲಾರಂಭಿಸಿದ್ದಾರೆ. ಈಗಾಗಲೇ ಒಂದು ಅವಧಿಗೆ ಕೆಎಂಎಫ್‌ ಅಧ್ಯಕ್ಷರಾಗಿ ಅಧಿಕಾರ ಪೂರ್ಣಗೊಳಿಸಿರುವ ಭೀಮಾನಾಯಕ್‌ 2ನೇ ಅವಧಿಗೂ ಮತ್ತೊಮೆ ಅಧ್ಯಕ್ಷ ಸ್ಥಾನ ಗಿಟ್ಟಿಸಲು ಪ್ರಯತ್ನ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯ ಹಗರಿಬೊಮನಹಳ್ಳಿ ಕ್ಷೇತ್ರದ ಮಾಜಿ ಶಾಸಕರಾಗಿರುವ ಭೀಮಾನಾಯಕ್‌ ಕಳೆದ ಬಾರಿ ಕೆಎಂಎಫ್ ಅಧ್ಯಕ್ಷರಾಗಿ ತಮ್ಮ ರಾಜಕೀಯ ಭವಿಷ್ಯ ಕಂಡುಕೊಂಡಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ…

Read More
error: Content is protected !!