ಬೆಂಗಳೂರಿನಲ್ಲಿ ಕೊಯಮತ್ತೂರು ಬಾಂಬ್ ಸ್ಫೋಟದ ಆರೋಪಿ ಅರೆಸ್ಟ್!
ವಿಜಯಪುರ, ಜುಲೈ 10: ತಮಿಳುನಾಡಿನ ಕೊಯಮತ್ತೂರಿನಲ್ಲಿ 1998ರಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ರಾಜ್ಯದ ವಿಜಯಪುರದಲ್ಲಿ ಬಂಧಿಸಲಾಗಿದೆ. ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಿದ್ದಿಕಿ ರಾಜ್ನನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ. ಸ್ಫೋಟ ಬಳಿಕ ತಮಿಳುನಾಡಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ಸಿದ್ದಿಕಿರಾಜ್ ಕಳೆದ 27 ವರ್ಷಗಳಿಂದ ಬೇರೆ ಬೇರೆ ಸ್ಥಳಗಳಲ್ಲಿ ಅಡಗಿಕೊಂಡಿದ್ದನು. ಕೊನೆಗೆ ವಿಜಯಪುರ ನಗರದಲ್ಲಿ ಗುಪ್ತವಾಗಿ ಠಿಕಾಣಿ ಹೂಡಿದ್ದನು. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವನಾದ ಸಿದ್ದಿಕಿರಾಜ್ 1998ರಲ್ಲಿ ಕೊಯಮತ್ತೂರಿನಲ್ಲಿ ನಡೆದ ಸರಣಿ…

