Headlines

ಮಾಜಿ ಸಭಾಪತಿ ಎನ್.ತಿಪ್ಪಣ್ಣ ನಿಧನಕ್ಕೆ ಗಣ್ಯರ ಸಂತಾಪ

ಬಳ್ಳಾರಿ, ಜುಲೈ 11: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಧಾನಪರಿಷತ್‌ ಮಾಜಿ ಸಭಾಪತಿ, ಹಿರಿಯ ಮುತ್ಸದ್ಧಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌.ತಿಪ್ಪಣ್ಣ (98) ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ತಿಪ್ಪಣ್ಣ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಬಳ್ಳಾರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಅವರ ಸ್ವಗ್ರಾಮ ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ತಿಪ್ಪಣ್ಣ ಅವರ ಪಾರ್ಥಿವ ಶರೀರದ…

Read More

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಸುರೇಶ್-ಭೀಮಾ ನಾಯ್ಕ್ ಪೈಪೋಟಿ

ಬಳ್ಳಾರಿ,ಜುಲೈ 11: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ನಾನೂ ಕೂಡ ಆಕಾಂಕ್ಷಿ ಎಂದು ಹೇಳುವ ಮೂಲಕ ಹಾಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್‌ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಪೈಪೋಟಿ ನೀಡಲಾರಂಭಿಸಿದ್ದಾರೆ. ಈಗಾಗಲೇ ಒಂದು ಅವಧಿಗೆ ಕೆಎಂಎಫ್‌ ಅಧ್ಯಕ್ಷರಾಗಿ ಅಧಿಕಾರ ಪೂರ್ಣಗೊಳಿಸಿರುವ ಭೀಮಾನಾಯಕ್‌ 2ನೇ ಅವಧಿಗೂ ಮತ್ತೊಮೆ ಅಧ್ಯಕ್ಷ ಸ್ಥಾನ ಗಿಟ್ಟಿಸಲು ಪ್ರಯತ್ನ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯ ಹಗರಿಬೊಮನಹಳ್ಳಿ ಕ್ಷೇತ್ರದ ಮಾಜಿ ಶಾಸಕರಾಗಿರುವ ಭೀಮಾನಾಯಕ್‌ ಕಳೆದ ಬಾರಿ ಕೆಎಂಎಫ್ ಅಧ್ಯಕ್ಷರಾಗಿ ತಮ್ಮ ರಾಜಕೀಯ ಭವಿಷ್ಯ ಕಂಡುಕೊಂಡಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ…

Read More

ಬೆಂಗಳೂರಿನಲ್ಲಿ ಕೊಯಮತ್ತೂರು ಬಾಂಬ್ ಸ್ಫೋಟದ ಆರೋಪಿ‌ ಅರೆಸ್ಟ್!

ವಿಜಯಪುರ, ಜುಲೈ 10: ತಮಿಳುನಾಡಿನ ಕೊಯಮತ್ತೂರಿನಲ್ಲಿ 1998ರಲ್ಲಿ ನಡೆದಿದ್ದ ಸರಣಿ ಬಾಂಬ್​ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ರಾಜ್ಯದ ವಿಜಯಪುರದಲ್ಲಿ ಬಂಧಿಸಲಾಗಿದೆ. ಕೊಯಮತ್ತೂರು ಬಾಂಬ್​ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಿದ್ದಿಕಿ ರಾಜ್​​ನನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ. ಸ್ಫೋಟ ಬಳಿಕ ತಮಿಳುನಾಡಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ಸಿದ್ದಿಕಿರಾಜ್​​ ಕಳೆದ 27 ವರ್ಷಗಳಿಂದ ಬೇರೆ ಬೇರೆ ಸ್ಥಳಗಳಲ್ಲಿ ಅಡಗಿಕೊಂಡಿದ್ದನು. ಕೊನೆಗೆ ವಿಜಯಪುರ ನಗರದಲ್ಲಿ ಗುಪ್ತವಾಗಿ ಠಿಕಾಣಿ ಹೂಡಿದ್ದನು. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವನಾದ ಸಿದ್ದಿಕಿರಾಜ್​ 1998ರಲ್ಲಿ ಕೊಯಮತ್ತೂರಿನಲ್ಲಿ ನಡೆದ ಸರಣಿ…

Read More

ಈ ಅವಧಿಯಲ್ಲೇ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ: ನೊಣವಿನಕೆರೆ ಶ್ರೀಗಳ ಸ್ಫೋಟಕ ಭವಿಷ್ಯ!

ದಾವಣಗೆರೆ, ಜುಲೈ 10: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ 5 ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತೇನೆ, 2028ರಲ್ಲೂ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಡಿ.ಕೆ ಶಿವಕುಮಾರ್ ಅವರಿಗೆ ಕೆಲವು ಶಾಸಕರಷ್ಟೇ ಬೆಂಬಲ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇತ್ತ ನೊಣವಿನಕೆರೆಯ ಶ್ರೀ ಶಿವಯೋಗಿಸ್ವರ ಸ್ವಾಮೀಜಿಗಳು ಈ ಅವಧಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸ್ಫೋಟಕ ರಾಜಕೀಯ ಭವಿಷ್ಯ ನುಡಿದಿದ್ದಾರೆ. ಹೌದು, ಈ ಅವಧಿಯಲ್ಲೇ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು…

Read More

GO BACK ನಂದಿನಿ…!

ಇವರ ಹೆಸರು: K R ನಂದಿನಿ.ಊರು: ಮೂಲತಃ ಕೋಲಾರ ಜಿಲ್ಲೆಯವರಾಗಿದ್ದು ಪ್ರಸ್ತುತ ಮಂಡ್ಯ ಜಿಲ್ಲೆಗೆ ಸೊಸೆಯಾಗಿದ್ದಾರೆ.ವಿದ್ಯಾರ್ಹತೆ : ಇದೇ ನಮ್ಮ ಬೆಂಗಳೂರಿನ ಎಂ.ಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದು 2014ನೇ ಬ್ಯಾಚ್ನ UPSC ಯಲ್ಲಿ 849ನೇ ರಾಂಕ್ ಪಡೆದು IRS ಅಧಿಕಾರಿಯಾಗಿ 2016 ರ ವರೆಗೂ ಕಾರ್ಯನಿರ್ವಹಿಸಿದ್ದು ತಮ್ಮ ನಾಲ್ಕನೇ ಅಟೆಂಪ್ಟ್ ನಲ್ಲಿ ಇಡೀ ದೇಶಕ್ಕೇ ಒಂದನೇ ರಾಂಕ್ ಪಡೆದು IAS ಅಧಿಕಾರಿಗಳಾಗಿರುತ್ತಾರೆ ಮತ್ತು ಒಂದು ಹೆಣ್ಣು ದೇಶಕ್ಕೇ ಟಾಪರ್ ಆಗಿ ಬಂದದ್ದು…

Read More

ಸಿಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಎಂಎಲ್‌ಸಿ ರವಿಕುಮಾರ್ ಗೆ ಜಾಮೀನು

ಬೆಂಗಳೂರು, ಜುಲೈ 9: ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ರವಿಕುಮಾರ್​​ ಗೆ ಜಾಮೀನು ಸಿಕ್ಕಿದೆ. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ವೇಳೆ ಸಿಎಸ್​​ ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಳಿಕ ರವಿಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. 1 ಲಕ್ಷ ಬಾಂಡ್, ಒಬ್ಬರು ಶ್ಯೂರಿಟಿ ಒದಗಿಸಲು ಸೂಚನೆ…

Read More

ಹೃದಯಾಘಾತಕ್ಕೆ ರಾಜ್ಯಾದ್ಯಂತ ಒಟ್ಟು 6 ಸಾವು!

ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಪಳಿ ಜೋರಾಗಿ ಮುಂದುವರೆದಿದೆ.ಕಳೆದೊಂದು ದಿನದಲ್ಲಿ ರಾಜ್ಯಾದ್ಯಂತ ಒಟ್ಟು 6 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ 4ನೇ ತರಗತಿ ವಿದ್ಯಾರ್ಥಿ! ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮನೋಜ್ ಕುಮಾರ್ (10), ಮೃತ ದುರ್ದೈವಿ. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ​…

Read More

ಸಿಎಂ-ಡಿಸಿಎಂ ಹೆಸರೇಳಿ ಕೋಟ್ಯಂತರ ರೂ. ವಂಚಿಸಿದ್ದ ಮಹಿಳೆ ಅರೆಸ್ಟ್!

ಬೆಂಗಳೂರು, ಜುಲೆ 9: ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ ಎಂದು ತಿಳಿದುಬಂದಿದ್ದು, ಈ ಸಂಬಂಧ…

Read More

ಐಶ್ವರ್ಯಗೌಡ ಚಿನ್ನ ವಂಚನೆ ಕೇಸ್: ಇ.ಡಿಯಿಂದ ಡಿ.ಕೆ ಸುರೇಶ್ ವಿಚಾರಣೆ

ಬೆಂಗಳೂರು, ಜುಲೈ 8: ಐಶ್ವರ್ಯಗೌಡ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರನ್ನು ಕೇಂದ್ರ ಜಾರಿ ನಿರ್ದೇಶನಾಲಯ 2ನೇ ಬಾರಿಗೆ ವಿಚಾರಣೆಗೊಳಪಡಿಸಿದೆ. ಐಶ್ವರ್ಯಗೌಡ ಹಲವಾರು ಮಂದಿಗೆ ಚಿನ್ನ ವ್ಯಾಪಾರದ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದರು. ಈ ವೇಳೆ ಆಕೆ ತಾವು ಡಿ.ಕೆ.ಸುರೇಶ್‌ರವರ ಸಹೋದರಿ ಎಂದು ಹೇಳಿಕೊಂಡಿದ್ದರು. ನಟರೊಬ್ಬರು ಡಿ.ಕೆ.ಸುರೇಶ್‌ರವರ ಧ್ವನಿಯನ್ನು ಮಿಮಿಕ್ರಿ ಮಾಡಿ ಉದ್ಯಮಿಗಳ ಜೊತೆ ಮಾತನಾಡಿದ್ದರು. ಬಹುಕೋಟಿ ಹಗರಣವನ್ನು ವಿಚಾರಣೆ ನಡೆಸುತ್ತಿರುವ ಕೇಂದ್ರ ಜಾರಿ ನಿರ್ದೇಶನಾಲಯ ಡಿ.ಕೆ.ಸುರೇಶ್‌ರವರಿಗೆ ನೋಟಿಸ್ ನೀಡಿತ್ತು. ಕಳೆದ…

Read More

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಡಿಸಿಎಂ ಚರ್ಚೆ

ನವದೆಹಲಿ, ಜುಲೈ 8: ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಪಾಟೀಲ್‌ರ ಜೊತೆ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ವಕೀಲರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಕೃಷಿ ಸಚಿವ ಚೆಲುವರಾಯಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು, ವಕೀಲರು, ತಂತ್ರಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು.ಮೇಕೆದಾಟು, ಕಳಸಾ ಬಂಡೂರಿ, ಎತ್ತಿನಹೊಳೆ, ಕೃಷ್ಣಾ ಮೇಲ್ದಂಡೆ, ತುಂಗಭದ್ರಾ ಸೇರಿದಂತೆ ಹಲವಾರು ಯೋಜನೆಗಳ ಸ್ಥಿತಿಗತಿ ಹಾಗೂ ಕಾನೂನು ತೊಡಕುಗಳ…

Read More
error: Content is protected !!