ಜನೌಷಧ ಕೇಂದ್ರ ಸ್ಥಗಿತಕ್ಕೆ ಹೈಕೋರ್ಟ್ ತಡೆ, ರಾಜ್ಯಸರ್ಕಾರಕ್ಕೆ ಕಪಾಳಮೋಕ್ಷ!
ಬೆಂಗಳೂರು, ಜುಲೈ 8: ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ರಾಜ್ಯಸರ್ಕಾರ ಸ್ಥಗಿತಗೊಳಿಸಿತ್ತು. ಇದಕ್ಕೆ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಅಲ್ಲದೇ ರಾಜ್ಯದ ಕಾಂಗ್ರೆಸ್ ಸರ್ಕಾರದ ಈ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು (ಜುಲೈ 8) ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ, ಮುಂದಿನ ವಿಚಾರಣೆವರೆಗೂ ಅರ್ಜಿದಾರರ…

