ನಕಲಿ ನಂದಿನಿ ತುಪ್ಪ ತಯಾರಿಕಾ ಜಾಲ ಭೇದಿಸಿದ ಸಿಸಿಬಿ ಪೊಲೀಸರು: ನಾಲ್ವರು ಅರೆಸ್ಟ್
ಬೆಂಗಳೂರು,ನ.15: ಕೆಎಂಎಫ್ ನ ಜನಪ್ರಿಯ ಬ್ರಾಂಡ್ ನಂದಿನಿ ತುಪ್ಪವನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಬೇಧಿಸಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹೊರ ರಾಜ್ಯದಲ್ಲಿ ಕಲಬೆರೆಕೆ ತುಪ್ಪವನ್ನು ತಯಾರಿಸಿ ನಕಲಿ ನಂದಿನಿ ಬ್ರಾಂಡ್‌ನ ಸ್ಯಾಚೆಟ್ ಮತ್ತು ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿ ಬೆಂಗಳೂರು ನಗರದಾದ್ಯಂತ ಮಾರಾಟ ಮಾಡುತ್ತಿದ್ದರು.ಈ ಬೃಹತ್ ಜಾಲದ ಬೆನ್ನು ಹತ್ತಿತ ಪೊಲೀಸರು ನಾಲ್ವರನ್ನು ಬಂಧಿಸುವ ಜೊತೆಗೆ 1,26,95,200 ರೂ. ವೌಲ್ಯದ 8136 ಲೀಟರ್ ನಂದಿನಿ ಬ್ರಾಂಡ್‌ನ ಕಲಬೆರೆಕೆ ತುಪ್ಪ ಹಾಗೂ ಸರಬರಾಜು ಮಾಡುತ್ತಿದ್ದ 4 ವಾಹನಗಳನ್ನು ವಶ…

