Headlines

”ಜಲ ಸಂಚಯ ಜನ ಭಾಗಿದಾರಿ” ಅಭಿಯಾನ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ

ಮಂಡ್ಯ.ಅ.4:- ಜಲ ಶಕ್ತಿ ಅಭಿಯಾನದ ಅಂಗವಾಗಿ “ಜಲ ಸಂಚಯ ಜನ ಭಾಗಿದಾರಿ  (JSJB)”  ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ‍್ಟೀಯ ಪ್ರಶಸ್ತಿ ದೊರೆತಿದೆ. ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವ ಹಾಗೂ ನೀರಿನ ಸಮಸ್ಯೆ ನಿವಾರಿಸಲು ಕೈಗೊಂಡ ಜಲಶಕ್ತಿ ಅಭಿಯಾನದ ಚಟುವಟಿಕೆಗಳನ್ನು ಯಶಸ್ವಿಯಾಗಿ ಹಾಗೂ ಪರಿಣಾಮಕಾರಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ಪ್ರಶಸ್ತಿಯ ಜೊತೆಗೆ 25 ಲಕ್ಷ ರೂ ನಗದು ಬಹುಮಾನವನ್ನು ನೀಡಲಾಗುತ್ತಿದೆ. ಮೈಸೂರು ವಿಭಾಗದ…

Read More

ಜಾತಿ ಗಣತಿ ಸಮೀಕ್ಷೆ ನಿರ್ಲಕ್ಷ್ಯ ಮಾಡಿದರೆ ಕಠಿಣ ಕ್ರಮ: ಸಿಎಂ ಎಚ್ಚರಿಕೆ

ಬೆಂಗಳೂರು, ಸೆ.26: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸದೇ ಕರ್ತವ್ಯ ಲೋಪ ಎಸಗುವವರು ಹಾಗೂ ದತ್ತಾಂಶ ಸಂಗ್ರಹದಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಿಂದ ಹಿರಿಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆ ಕಾಂತರಾಜು ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಮೀಕ್ಷೆಯಲ್ಲಿ ಪೂರ್ಣ ಪ್ರಮಾಣದ ಮಾಹಿತಿ ಕಲೆ ಹಾಕಿರಲಿಲ್ಲ. ಆಯೋಗ…

Read More

ಕೊನೆಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ರವಾನಿಸಿದ ಕೈ ಹೈಕಮಾಂಡ್!

ಬೆಂಗಳೂರು, ಸೆ.24: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿಗಮ-ಮಂಡಳಿಗೆ ಕೊನೆಗೂ ನೇಮಕವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ‌.ಕೆ ಶಿವಕುಮಾರ್ ಅವರು ಸಿಡಬ್ಲ್ಯೂಸಿ ಸಭೆಗೆಂದು ಬಿಹಾರ ರಾಜ್ಯಕ್ಕೆ ತೆರಳಿದ ಸಂದರ್ಭದಲ್ಲೇ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದೆ. 39 ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರಿಗೆ ಕಾಂಗ್ರೆಸ್ ಹೈಕಮಾಂಡ್‌ ಇಂದು ಅಂತಿಮ ಮುದ್ರೆ ಹಾಕಿ ಇಂದು (ಸೆಪ್ಟೆಂಬರ್ 24) ಪಟ್ಟಿಯನ್ನು ರಾಜ್ಯಕ್ಕೆ ರವಾನೆ ಮಾಡಿದೆ. ಇನ್ನು ಬಿಜೆಪಿ ‌ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ…

Read More

200 ರೂ. ಸಿನಿಮಾ ಟಿಕೆಟ್ ದರ ಆದೇಶಕ್ಕೆ ತಡೆಯಾಜ್ಞೆ ಬೆನ್ನಲ್ಲೇ 700 ರೂ.ಗೆ ಏರಿದ ಟಿಕೆಟ್ ದರ!

ಬೆಂಗಳೂರು, ಸೆ.24: ರಾಜ್ಯಸರ್ಕಾರ ಸಿನಿಮಾ ಥಿಯೇಟರ್ ಗಳಿಗೆ ನಿಗದಿಪಡಿಸಿದ್ದ 200 ರೂಪಾಯಿ ಟಿಕೆಟ್ ದರ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೇ ಸಿನಿಮಾ ಟಿಕೆಟ್ ಬೆಲೆ ಗಗನಕ್ಕೇರಿದೆ. ನಿನ್ನೆಯಷ್ಟೇ ಹೈಕೋರ್ಟ್ ನ ಜಸ್ಟೀಸ್ ರವಿ ಹೊಸಮನಿ ಅವರ ಪೀಠವು 200 ರೂಪಾಯಿ ಟಿಕೆಟ್ ದರ ಜಾರಿಗೆ ತಡೆಯಾಜ್ಞೆ ನೀಡಿತ್ತು. ಇದಾದ ಬಳಿಕ ಇಂದು ರಾಜ್ಯದ ಸಿನಿಮಾ ಥಿಯೇಟರ್, ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ಟಿಕೆಟ್ ದರ ಗಗನಕ್ಕೇರಿದೆ.ಬೆಂಗಳೂರಲ್ಲಿ ತೆಲುಗು ಚಿತ್ರದ ಟಿಕೆಟ್ ಬೆಲೆ 700 ರೂಪಾಯಿಗೆ ಏರಿಕೆಯಾಗಿದೆ. ಸಿಂಗಲ್…

Read More

ಸೌಜನ್ಯ ಕೇಸ್: ನಾನೇ ಸಾಕ್ಷಿ ಎಂದಿದ್ದ ಮಹಿಳೆಯ ಅಸಲಿ ವಿಷಯ ಬಹಿರಂಗ!

ಮಂಡ್ಯ, ಸೆ.24: ಸೌಜನ್ಯ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್​ ಸಿಕ್ಕಿದೆ. ಸೌಜನ್ಯ ಅತ್ಯಾಚಾರ ಕಣ್ಣಾರೆ ಕಂಡಿದ್ದೆ ಎಂದು ದೂರು ಕೊಟ್ಟಿದ್ದ ಮಂಡ್ಯ (Mandya) ಮೂಲದ ಮಹಿಳೆ ಬಗ್ಗೆ ಆಕೆಯ ಸಹೋದರನೇ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. TV9 ಜೊತೆ ಮಾತನಾಡಿರುವ ಮಹಿಳೆಯ ಸಹೋದರ ಶಿವಕೆಂಪಯ್ಯ, ಆಕೆ ಹೇಳಿದ್ದೆಲ್ಲ ಬರೀ ಸುಳ್ಳು. ಅವಳ ಹಿಂದೆ ಯಾರೋ ನಿಂತು ಈ ರೀತಿ ಹೇಳಿಸುತ್ತಿದ್ದು, ಸೌಜನ್ಯಗೆ ನ್ಯಾಯ ಕೊಡಿಸುವ ಯಾವ ಉದ್ದೇಶವೂ ಆಕೆಗೆ ಇಲ್ಲ ಎಂದಿದ್ದಾರೆ. ನನ್ನ ಸಹೋದರಿ 16 ವರ್ಷ ಇದ್ದಾಗಲೇ…

Read More

ಶೇ.50 ಸಚಿವರ ಬದಲಾವಣೆಯೊಂದಿಗೆ ನವೆಂಬರ್ ನಲ್ಲಿ ಸಂಪುಟ ಪುನಾರಚನೆ: ಸಲೀಂ ಅಹ್ಮದ್

ನವದೆಹಲಿ, ಸೆ.22: ರಾಜ್ಯ ರಾಜಕೀಯದಲ್ಲಿ ಸದ್ದಿಲ್ಲದೇ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನವೆಂಬರ್ ಗೆ ಎರಡುವರೆ ವರ್ಷ ಪೂರ್ಣಗೊಳಿಸುತ್ತದೆ. ಹೀಗಾಗಿ ನವೆಂಬರ್‌ನಲ್ಲಿ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಇದಕ್ಕೆ ಪೂರಕವೆಂಬಂತೆ ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು, ಕರ್ನಾಟಕದಲ್ಲಿ ನವೆಂಬರ್ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆಯಾಗಲಿದೆ. ಈ ವೇಳೆ ಶೇ.50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದರು. ಸಚಿವ ಸ್ಥಾನದಿಂದ ಹೊರ ಬಂದವರಿಗೆ…

Read More

ದಸರಾ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ

ಮೈಸೂರು,ಸೆ.22:- ಮೈಸೂರು ದಸರಾ ಮಹೋತ್ಸವದಲ್ಲಿ ಪ್ರವಾಸಿಗರಿಗೆ ಅತ್ಯಂತ ಆಕರ್ಷಣೀಯವಾದ ದಸರಾ ಫಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ನಗರದ ಕುಪ್ಪಣ್ಣ ಪಾರ್ಕ್ ನಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಆಯೋಜಿಸಲಾಗಿರುವ ದಸರಾ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಸರ್ಕಾರದ ಸಚಿವರೊಂದಿಗೆ ಕೆಲ ಕಾಲ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಗಾಂಧಿ ಮಂಟಪ: ಈ ಬಾರಿ ಜಂಬೂಸವಾರಿ ದಿನವೇ ಗಾಂಧಿ ಜಯಂತಿ ಇರುವ ಕಾರಣ ಮಹಾತ್ಮ ಗಾಂಧಿಯವರ…

Read More

ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ಮೈಸೂರು ದಸರಾಗೆ ಚಾಲನೆ ನೀಡಿದ ಬಾನು ಮುಷ್ತಾಕ್

ಮೈಸೂರು, ಸೆ.22: ವಿಶ್ವಖ್ಯಾತ ಮೈಸೂರು ದಸರಾಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರು ಅಧಿದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಂಪ್ರದಾಯಬದ್ಧವಾಗಿ ದಸರಾಗೆ ವಿದ್ಯುಕ್ತ ಚಾಲನೆ ನೀಡಿದರು.ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ಮತ್ತಿತರ ಗಣ್ಯರೊಂದಿಗೆ ಬಾನು ಮುಷ್ತಾಕ್ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಾಲಯದ ಆವರಣದಲ್ಲಿರುವ ವಿಘ್ನ ನಿವಾರಕ ಗಣೇಶನಿಗೆ ನಮಿಸಿ ನಂತರ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಇದಕ್ಕೂ…

Read More

ನಾಳೆ ಮಂಗಳವಾರ ಮಧ್ಯಾಹ್ನ ಜನಗಣತಿ ವರದಿ ಸಮೀಕ್ಷೆಯ ಭವಿಷ್ಯ ನಿರ್ಧರಿಸಲಿರುವ ಹೈಕೋರ್ಟ್

ಬೆಂಗಳೂರು, ಸೆ.22: ರಾಜ್ಯಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಪ್ರಶ್ನಿಸಿ ನಾಲ್ಕೈದು ಸಮುದಾಯಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿವೆ. ಈ ಅರ್ಜಿಗಳನ್ನು ಇಂದು ಹೈಕೋರ್ಟ್ ಸಿಜೆ ಅವರ ಪೀಠ ವಿಚಾರಣೆ ನಡೆಸಿದೆ. ಸರ್ವೇಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದ್ದರು. ಈ ಬಗ್ಗೆ ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ. ಹೀಗಾಗಿ ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಭವಿಷ್ಯ…

Read More

ಚಡಚಣ ಬ್ಯಾಂಕ್ ದರೋಡೆ ಕೇಸ್: 41.4 ಲಕ್ಷ ರೂ. ನಗದು, 6.54 ಕೆ.ಜಿ ಚಿನ್ನದ ಬ್ಯಾಗ್ ಪತ್ತೆ

ವಿಜಯಪುರ, ಸೆ.19: ಜಿಲ್ಲೆಯ ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಷ್ರದ ಹುಲಜಂತಿ ಗ್ರಾಮದ ಪಾಳು ಬಿದ್ದ ಮನೆಯೊಂದರಲ್ಲಿ ಮೇಲ್ಚಾವಣಿಯಲ್ಲಿ ಬ್ಯಾಗ್‌ ಪತ್ತೆಯಾಗಿದ್ದು, ಈ ಬ್ಯಾಗ್‌ನಲ್ಲಿ ಒಟ್ಟು 41.4 ಲಕ್ಷ ರೂ. ನಗದು ಹಾಗೂ 6.54 ಕೆ.ಜಿ. ಚಿನ್ನಾಭರಣ (136 ಬಂಗಾರದ ಪ್ಯಾಕೇಟ್) ಸಿಕ್ಕಿದೆ. ಮಹಾರಾಷ್ಟ್ರದ ಹುಲಜಂತಿ ಗ್ರಾಮದ ಶೀಟು ಹಾಕಿದ ಪಾಳು ಬಿದ್ದ ಮನೆಯ ಛಾವಣಿಯ ಮೇಲೆ ಚಿನ್ನ ಹಾಗೂ ನಗದು ತುಂಬಿದ ಬ್ಯಾಗ್ ಪತ್ತೆಯಾಗಿದೆ. ಚಡಚಣ ಬ್ಯಾಂಕ್ ದರೋಡೆ ಮಾಡಿದ ಆರೋಪಿಗಳು ಸಾರ್ವಜನಿಕರಿಂದ…

Read More
error: Content is protected !!