Headlines

ಸಮೀಕ್ಷೆ ವೇಳೆ ಹಿಂದೂ ಜಾತಿ ಹೆಸರಿನ ಜೊತೆಗೆ ಕ್ರೈಸ್ತ ಹೆಸರು, ಹೊಸ ಜಾತಿ ಸೇರ್ಪಡೆ ಕೈಬಿಡಲು ಸಿಎಂ ಸೂಚನೆ

ಬೆಂಗಳೂರು, ಸೆ.19: ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಜನರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಶುರುವಾಗಲಿದೆ. ಆದರೇ, ಜಾತಿಯ ಕಾಲಂನಲ್ಲಿ ಕುರುಬ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ದಲಿತ ಕ್ರಿಶ್ಚಿಯನ್ ಎಂದೆಲ್ಲಾ ಉಲ್ಲೇಖ ಮಾಡಲಾಗಿತ್ತು. ಹಿಂದೂ ಧರ್ಮದ ವಿವಿಧ ಜಾತಿಗಳಿಂದ ಕ್ರಿಶ್ಚಿಯನ್ ಧರ್ಮದ ಮತಾಂತರವಾದವರು ಹಿಂದೂ ಜಾತಿಯ ಜೊತೆಗೆ ಕ್ರಿಶ್ಚಿಯನ್ ಧರ್ಮದ ಹೆಸರಿನಿಂದಲೂ ಕರೆದುಕೊಳ್ಳಲು ಸಮೀಕ್ಷೆಯ ಕಾಲಂನಲ್ಲಿ ಅವಕಾಶ ನೀಡಲಾಗಿತ್ತು. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇಲ್ಲದೇ ಇರೋ ಹೊಸ ಜಾತಿಗಳನ್ನೇ ಈ ಸಮೀಕ್ಷೆ ವೇಳೆ ಹುಟ್ಟು ಹಾಕಲಾಗಿದೆ…

Read More

ಬೆಂಗಳೂರು ಮಳೆ ಹಾನಿ ಪ್ರದೇಶ ಪರಿಶೀಲನೆ: ತಕ್ಷಣ ಕ್ರಮಕ್ಕೆ ಸೂಚನೆ ನೀಡಿದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಇಂದು ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಮಳೆಯಿಂದಾಗಿ ಹಾನಿಯುಂಟಾದ ಸ್ಥಳಗಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್‍ನಲ್ಲಿ ಜಲಾವೃತವಾಗುವುದದನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿ, ಬಳಿಕ ಹೆಚ್.ಎಸ್.ಆರ್ 6ನೇ ಸೆಕ್ಟರ್ (ಮಂಗಮ್ಮನ ಪಾಳ್ಯ ಮುಖ್ಯ ರಸ್ತೆ ಬಳಿ) ಮೆಟ್ರೋ ಕಾಮಗಾರಿಯ ಮೀಡಿಯನ್ ಸರಿಯಾಗಿ ಅಳವಡಿಸದೇ ಇರುವುದು, ಅನುಪಯುಕ್ತ ಮೆಟಿರಿಯಲ್ ಅನ್ನು ಕೂಡಲೆ ತೆರವುಗೊಳಿಸಬೇಕು….

Read More

ಧರ್ಮಸ್ಥಳ ಕೇಸ್: ಅಸ್ಥಿಪಂಜರ ಜೊತೆಗೆ ಸಿಕ್ಕ ಐಡಿ ಕಾರ್ಡ್ ರಹಸ್ಯ ಬಹಿರಂಗ!

ಮಂಗಳೂರು, ಸೆ.18: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರ, ತಲೆ ಬುರುಡೆ ಹಾಗೂ ಮೂಳೆಗಳ ಯಾರದ್ದು ಎಂಬ ಪ್ರಶ್ನೆ ಮೂಡಿದೆ. ಹೀಗಿರುವಾಗಲೇ ಧರ್ಮಸ್ಥಳದ ಬಂಗ್ಲೆಗುಡ್ಡೆದಲ್ಲಿ ಶೋಧಕ್ಕೆ ರೋಚಕ ತಿರುವು ಸಿಕ್ಕಿದೆ. ಬುರುಡೆ ಮತ್ತು ಅಸ್ಥಿಪಂಜರದ ಬಳಿ ಒಂದು ಐಡಿ ಕಾರ್ಡ್​ ಸಿಕ್ಕಿದ್ದು, ಅದು ಯು.ಬಿ.ಅಯ್ಯಪ್ಪ ಎಂಬುವರ ಐಟಿ ಕಾರ್ಡ್ ಎನ್ನುವುದು ಸಹ ಪತ್ತೆಯಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದ ನಿವಾಸಿ ಅಯ್ಯಪ್ಪ ಎನ್ನುವರು 2017ರಲ್ಲಿ ಕಾಣೆಯಾಗಿದ್ದರು. ಇದೀಗ ಅವರ…

Read More

ಭಟ್ಕಳದ ಕಾಡಿನಲ್ಲಿ ಸಿಕ್ಕಿದ್ದ ದನಗಳ ಅಸ್ಥಿಪಂಜರಗಳ ಕೇಸ್ ಭೇದಿಸಿದ ಪೊಲೀಸರು

ಕಾರವಾರ, ಸೆ.18: ಉತ್ತರಕನ್ನಡ ಜಿಲ್ಲೆಯ ಭಟ್ಕಳ ಅರಣ್ಯ ಪ್ರದೇಶದಲ್ಲಿ ದನಗಳ ರಾಶಿ ರಾಶಿ ಅಸ್ಥಿಪಂಜರಗಳು ಸಿಕ್ಕಿದ್ದ ಪ್ರಕರಣವನ್ನು ಕೊನೆಗೂ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲವು ಊರುಗಳಲ್ಲಿ ಕದ್ದ ಗೋವುಗಳನ್ನು ಭಟ್ಕಳಕ್ಕೆ ತಂದು ಮಾಂಸಕ್ಕಾಗಿ ಕಡಿದ ನಂತರ ಉಳಿದ ಮೂಳೆಗಳನ್ನು ಅರಣ್ಯದಲ್ಲಿ ಹಾಕಿ ಪರಾರಿಯಾಗುತಿದ್ದರು ಎಂಬುದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಿರುವ ಪೊಲೀಸರು, ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಭಟ್ಕಳದ ಮಗ್ದೂಂ ಕಾಲೂನಿ ಬಳಿಯ ಬೆಳ್ನೆ ಗ್ರಾಮದ ಸರ್ವೆ ನಂಬರ್ 74 ರ ಭಾಗದಲ್ಲಿ…

Read More

ಜಾತಿ ಸಮೀಕ್ಷೆ ಮೂಲಕ ಹಿಂದೂ ಸಮಾಜ ದುರ್ಬಲಗೊಳಿಸಲು ರಾಜ್ಯ ಸರಕಾರ ಯತ್ನ:  ಬಿಜೆಪಿ ಮುಖಂಡ   ಡಾ.ಸುಶ್ರುತಗೌಡ ಆರೋಪ

ಮೈಸೂರು,ಸೆಪ್ಟೆಂಬರ್ 18 :  ಕರ್ನಾಟಕ ಹಿಂದುಳಿದ ಆಯೋಗ  ಕೈಗೆತ್ತಿಕೊಂಡಿರುವ   ಜಾತಿ ಗಣತಿಯನ್ನು ಹಿಂದುಳಿದ ಸಮಾಜಗಳ ಸಬಲೀಕರಣದ ಬದಲಿಗೆ  ಹಿಂದೂ ಧರ್ಮವನ್ನು ದುರ್ಬಲಗೊಳಿಸಲು ರಾಜ್ಯ ಸರಕಾರ ಅದರಲ್ಲೂ ಮುಖ್ಯವಾಗಿ  ಕಾಂಗ್ರೆಸ್ ಹೈಕಮಾಂಡ್   ದುರ್ಬಳಕೆ ಮಾಡಿಕೊಳ್ಳುತ್ತಿವೆ  ಎಂದು ಚಾಮರಾಜಕ್ಷೇತ್ರದ ಬಿಜೆಪಿ ಮುಖಂಡರಾದ ಡಾ.ಸುಶ್ರುತಗೌಡ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕ್ರೈಸ್ತ ಹಾಗು ಇಸ್ಲಾಂ ಧರ್ಮಗಳಿಗೆ, ಹಿಂದೂ ಧರ್ಮದಿಂದ  ಮತಾಂತರಗೊಂಡವರಿಗೆ  ಅವರ ಮೂಲ  ಜಾತಿಯನ್ನು ನಮೂದಿಸಲು ಅವಕಾಶ ನೀಡಿ, ಹಿಂಬಾಗಿಲ ಮೂಲಕ ಮೀಸಲಾತಿಯನ್ನು ದುರ್ಬಳಕೆ…

Read More

ಮುಡಾ ಕೇಸ್: ಸೆ.26 ರವರೆಗೆ ಜಿ.ಟಿ.ದಿನೇಶ್ ಕುಮಾರ್ ಇಡಿ ಕಸ್ಟಡಿಗೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿರುವ ಮುಡಾ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 9 ದಿನ ಇ.ಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ದಿನೇಶ್‌ ಕುಮಾರ್ ಅವರನ್ನು ಇ.ಡಿ ಅಧಿಕಾರಿಗಳು ಇಂದು ಮಂಗಳವಾರ (ಸೆ.16) ಬಂಧಿಸಿದ್ದರು. ಬುಧವಾರ ಸಂಜೆ 4.30ಕ್ಕೆ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರ ಮುಂದೆ ತೆರೆದ ನ್ಯಾಯಾಲಯದಲ್ಲಿ…

Read More

ಶಾಸಕ ಮುನಿರತ್ನ ವಿರುದ್ಧ ಸಾಮೂಹಿಕ ಅತ್ಯಾಚಾರ ಆರೋಪ: ಬಿ.ರಿಪೋರ್ಟ್ ಹಿನ್ನೆಲೆ ಅರ್ಜಿ ವಜಾ

ಬೆಂಗಳೂರು, ಸೆ.17: ಸಾಮೂಹಿಕ ಅತ್ಯಾಚಾರ ಆರೋಪ ಸಂಬಂಧ ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ವಿಶೇಷ ತನಿಖಾ ದಳವು (ಎಸ್‌ಐಟಿ) ವಿಚಾರಣಾಧೀನ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್‌ ಸಲ್ಲಿಸಿರುವುದರಿಂದ ಈ ಸಂಬಂಧದ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ. ಯಶವಂತಪುರದ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮುನಿರತ್ನ, ವಸಂತ ಕುಮಾರ್‌, ಚನ್ನಕೇಶವ್‌ ಮತ್ತು ಕಮಲ್‌ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ಏಕಸದಸ್ಯ ಪೀಠ ಬುಧವಾರ ಈ ಆದೇಶ ನೀಡಿತು….

Read More

ಮಾಜಿ ಸಿಎಂ ಡಿ.ವಿ ಸದಾನಂದಗೌಡ ಬ್ಯಾಂಕ್‌ ಖಾತೆ ಹ್ಯಾಕ್‌: 3 ಲಕ್ಷ ರೂ ದೋಚಿದ ಸೈಬರ್‌ ಕಳ್ಳರು

ಬೆಂಗಳೂರು, ಸೆ.17 : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಮೂರು ಬ್ಯಾಂಕ್ ಖಾತೆಗಳನ್ನು ಸೈಬರ್ ಅಪರಾಧಿಗಳು ಹ್ಯಾಕ್ ಮಾಡಿ ಸುಮಾರು 3 ಲಕ್ಷ ರೂ. ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮದಿನಾಚರಣೆಯ ಅಂಗವಾಗಿ ನಗರದಲ್ಲಿನ ಆರ್‌ಎಂವಿ ಎಕ್ಸ್‌ಟೆನ್ಷನ್ ಬಿಬಿಎಂಪಿ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ನಡೆದ 75 ಪೌರ ಕಾರ್ಮಿಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಸದಾನಂದ ಗೌಡ, ತಮಗೆ ಸಂಭವಿಸಿದ ವಂಚನೆ ಕುರಿತು ವಿವರಿಸಿದರು. “ನಿನ್ನೆ ನನ್ನ ಮೂರು ಖಾತೆಗಳನ್ನು…

Read More

ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಹಿನ್ನೆಲೆ: ನಾಳೆ ರಾಜನಹಳ್ಳಿಯಲ್ಲಿ ವಾಲ್ಮೀಕಿ ಸಮುದಾಯದ ಸಭೆ

ರಾಜ್ಯದ ಕುರುಬ ಸಮುದಾಯವನ್ನು ಎಸ್‌.ಟಿ. ಪಟ್ಟಿಗೆ ಸೇರ್ಪಡೆ ಮಾಡುವ ಪ್ರಕ್ರಿಯೆಗೆ ವೇಗ ಸಿಕ್ಕಿದೆ. ಈ ಬಗ್ಗೆ ನಿನ್ನೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ನಡೆಯಬೇಕಾಗಿದ್ದ ಸಭೆಯನ್ನು ಮುಂದೂಡಲಾಗಿದೆ. ಆದರೇ, ಕುರುಬ ಸಮುದಾಯ ಈ ಹಿಂದಿನಿಂದಲೂ ತಮ್ಮನ್ನು ಎಸ್‌.ಟಿ. ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಹೋರಾಟ ಮಾಡುತ್ತಿದೆ. ಈಗಾಗಲೇ ಜೇನು ಕುರುಬ, ಕಾಡು ಕುರುಬ ಸಮುದಾಯಗಳು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾಗಿ ಎಸ್‌ಟಿ ಮೀಸಲಾತಿ ಲಾಭ ಪಡೆಯುತ್ತಿವೆ.ಈಗ ಕುರುಬ ಸಮುದಾಯವನ್ನು ಎಸ್‌.ಟಿ. ಪಟ್ಟಿಗೆ ಸೇರ್ಪಡೆ ಮಾಡುವುದಕ್ಕೆ ನಿರೀಕ್ಷೆಯಂತೆ ವಾಲ್ಮೀಕಿ ನಾಯಕ ಸಮುದಾಯದಿಂದ…

Read More

ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ನಿರ್ದೇಶಕ ನಾಗಭರಣಗೆ ಆಹ್ವಾನ

ಮಂಡ್ಯ.ಸೆ.17:- ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ: ಕುಮಾರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರುಗಳು ಇಂದು ಬೆಂಗಳೂರಿನ ಖ್ಯಾತ ಚಲನಚಿತ್ರ ನಿರ್ದೇಶಕ ನಾಗಭರಣ ಅವರ ಕಚೇರಿಗೆ ಭೇಟಿ ನೀಡಿ ಅವರನ್ನು ಸೆಪ್ಟೆಂಬರ್ 25 ರಂದು ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸುವಂತೆ ಆತ್ಮೀಯವಾಗಿ ಆಹ್ವಾನಿಸಿದರು.

Read More
error: Content is protected !!