ಧರ್ಮಸ್ಥಳ ಪ್ರಕರಣ: ಬುರುಡೆ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ
ಮಂಗಳೂರು, ಸೆಪ್ಟೆಂಬರ್ 16: ಧರ್ಮಸ್ಥಳದ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾ ಮಾಡಿದೆ. ಚಿನ್ನಯ್ಯ ಜೈಲು ಸೇರಿದ ಮೇಲೆ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ಜಾಮೀನು ನೀಡದಂತೆ ಎಸ್ಐಟಿ ಪರ ವಕೀಲ ದಿವ್ಯರಾಜ್ ಹೆಗ್ಡೆ ಪುತ್ತೂರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು. ಎರಡು ಕಡೆಯಿಂದ ವಾದ-ಪ್ರತಿವಾದ ಆಲಿಸಿದ ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶ ವಿಜಯೇಂದ್ರ ಅವರು ಚಿನ್ನಯ್ಯನ ಜಾಮೀನು ಅರ್ಜಿ ವಜಾ ಮಾಡಿ ಇಂದು (ಸೆಪ್ಟೆಂಬರ್ 16)…

