Headlines

ಕಾಂಗ್ರೆಸ್ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ, ಖಾರದ ಪುಡಿ ಎರಚಿ ಚಾಕುವಿನಿಂದ ದಾಳಿ; ಜಮೀನು ವಿಚಾರವೇ ಕಾರಣ ಶಂಕೆ!

ಚಾಮರಾಜನಗರ, ಮೇ 8: ಜಿಲ್ಲೆಯ ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಹೊಂಗನೂರು ಗ್ರಾಮದ ಲಾಂಗ್ ಮಹದೇವ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಜಮೀನು ವಿಚಾರವಾಗಿ ಮಾತನಾಡಬೇಕಿದೆ ಎಂದು ಕರೆ ಮಾಡಿ ಅವರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ ಆರೋಪಿಗಳು, ಬಳಿಕ ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಮೊದಲು ಮಹದೇವ ಅವರ ಕಣ್ಣಿಗೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು, ನಂತರ ಚಾಕುವಿನಿಂದ ಮುಖ ಹಾಗೂ ಕುತ್ತಿಗೆ ಭಾಗಕ್ಕೆ ಚುಚ್ಚಿ ಗಂಭೀರವಾಗಿ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಹಲ್ಲೆಯಿಂದ ಗಾಯಗೊಂಡಿದ್ದ ಮಹದೇವ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!