ಬೆಂಗಳೂರು, ಜುಲೈ 25: ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ 2ನೇ ಬಾರಿ ಜಾಮೀನು ಪಡೆಯಲು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಫಲರಾಗಿದ್ದಾರೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ನ್ಯಾ. ಎಸ್.ಜಿ.ಭಟ್ ಅವರು ಇಂದು ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧಿತ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
ಇದರಿಂದ ಅನೇಕ ಲೈಂಗಿಕ ದೌರ್ಜನ್ಯ ಪ್ರಕರಣಗಳ ಆರೋಪಗಳ ಪ್ರಕರಣಗಳಲ್ಲಿ ಎ1 ಆರೋಪಿಯಾಗಿ ಕಳೆದ 14 ತಿಂಗಳಿನಿಂದ ಜೈಲಿನಲ್ಲಿ ಬಂಧನಕ್ಕೊಳಗಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಇದೀಗ ಜೈಲುವಾಸವೇ ಗತಿಯಾಗಿದೆ.

