Headlines

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನದ ದಾಖಲೆ ನನ್ನ ಬಳಿಯಿದೆ: ಡಿಸಿಎಂ ಡಿ.ಕೆ.ಶಿ ಬಾಂಬ್

ರಾಹುಲ್ ಗಾಂಧಿ ಅವರು ಮಾಡಿರುವ ಆರೋಪ ನಿಜ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾನದಲ್ಲಿಯೂ ಗೋಲ್ಮಾಲ್ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಾಂಬ್ ಸಿಡಿಸಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ನವದೆಹಲಿಯಲ್ಲಿ ಇಂದು ಪ್ರತಿಕ್ರಿಯಿಸಿದ ಅವರು, ನಾನು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಒಪ್ಪುತ್ತೇನೆ. ನಾನು ಕೂಡ ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತನಿಖೆ ನಡೆಸಿದ್ದೇನೆ. ಅಲ್ಲಿ ಅನೇಕ ಗೋಲ್ಮಾಲ್‌ಗಳು ನಡೆದಿವೆ. ಈ ಬಗ್ಗೆ ಸದ್ಯಕ್ಕೆ ನಾನು ಹೆಚ್ಚು ವಿಚಾರ ಪ್ರಸ್ತಾಪ ಮಾಡುವುದಿಲ್ಲ. ಮುಂದೆ ಈ ವಿಚಾರವಾಗಿ ಮಾತನಾಡುತ್ತೇನೆ ಎಂದರು.

ಮಾತು ಮುಂದುವರೆಸಿದ ಡಿಸಿಎಂ ಡಿ.ಕೆ.ಶಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವುದು ನಿಜ, ರಾಹುಲ್ ಗಾಂಧಿಯವರು ಮತಗಳ್ಳತನ ನಡೆದಿದೆ ಎಂದು ಅಸಲಿ ಸತ್ಯ ಹೇಳಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತಗಳ್ಳತನ ನಡೆದ ಬಗ್ಗೆ ನನ್ನ ಬಳಿ ಎಲ್ಲಾ ದಾಖಲೆಗಳಿವೆ, ಸದ್ಯದಲ್ಲೇ ಆ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ನೀಡುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಆದರೆ ಡಿ.ಕೆ ಶಿವಕುಮಾರ್ ಅವರ ಈ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾರರು 2024 ರ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮ ಮತದಾನ ನಡೆದೇ ಇಲ್ಲ. ಇಲ್ಲಿ ಡಾ.ಸಿ.ಎನ್ ಮಂಜುನಾಥ್ ಅವರು ಮೂರುವರೆ ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವುದು ಪಾರದರ್ಶಕವಾಗಿದೆ. ಲೋಕಸಭಾ ಚುನಾವಣೆ ಮುಗಿದು ಒಂದುವರೆ ವರ್ಷದ ಬಳಿಕ ರಾಹುಲ್ ಗಾಂಧಿ ಮತ್ತು ಡಿ.ಕೆ ಶಿವಕುಮಾರ್ ಅವರು ದಿಢೀರನೆ ಈಗ ದಾಖಲೆ ತೋರಿಸದೆ ಕೇವಲ ರಾಜಕೀಯ ಲಾಭಕ್ಕಾಗಿ ಬೆಂಗಳೂರು ಗ್ರಾಮಾಂತರ ಲೋ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!