ಬೆಂಗಳೂರು, ಆ.24: ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಆರೋಗ್ಯ ಹದಗೆಟ್ಟಿದಂತಿದೆ. ಯಾಕಂದ್ರೆ ಅವರ ಫೋಟೋವನ್ನು ನೋಡುತ್ತಿದ್ದರೆ ಕೈಗಳು ಸಣ್ಣದಾಗಿದ್ದು, ಮುಖದಲ್ಲಿ ಕಾಂತಿ ಕಾಣಿಸುತ್ತಿಲ್ಲ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ತೀವ್ರ ಚರ್ಚೆಗಳಾಗುತ್ತಿವೆ. ಇನ್ನು ಈ ಸಂಬಂದ ಇದೀಗ ಸ್ವತಃ ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಆರೋಗ್ಯ ಚೆನ್ನಾಗಿದೆ, ಯಾರೂ ಆತಂಕ ಪಡಬೇಕಿಲ್ಲ. ಕೊನೆ ಉಸಿರಿರುವವರೆಗೂ ಜನಸೇವೆಗೆ ಬದುಕನ್ನ ಮುಡಿಪಿಟ್ಟಿದ್ದಾರೆ. ದೇವೇಗೌಡರು ಸಹ ರಾಜಕೀಯದಿಂದ ವಿಶ್ರಾಂತಿ ತೆಗೆದುಕೊಂಡಿಲ್ಲ. ದೇವೇಗೌಡರ ಕುಟುಂಬಕ್ಕೆ ಜನರೇ ರಾಜಕೀಯ ಶಕ್ತಿ ತುಂಬಿದ್ದಾರೆ. ಅದನ್ನ ಜನರಿಗೆ ವಾಪಸ್ ಧಾರೆ ಎರೆಯುವ ಕೆಲಸ ಮಾಡಬೇಕಿದೆ. ತಂದೆಯ ಸಣ್ಣಪುಟ್ಟ ಏರುಪೇರಾಗಿದ್ದು ಸತ್ಯ, ಆದ್ರೆ ಈಗ ಚೇತರಿಕೆಯಾಗುತ್ತಿದೆ. ಇದರ ಮಧ್ಯೆ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಪ್ರತಿನಿತ್ಯ ಇಲಾಖೆಯ ಸಭೆಗಳನ್ನು ಮಾಡುತ್ತಿದ್ದಾರೆ ಎಂದು ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಈ ಮೂಲಕ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿರುವುದನ್ನು ಪುತ್ರ ನಿಖಿಲ್ ಹೌದೆಂದು ಪರೋಕ್ಷವಾಗಿ ಒಪ್ಪಿಕೊಂಡರು.

