Headlines

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ರೇಡ್

ಬೆಂಗಳೂರು, ಜುಲೈ 29: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಮಂಗಳವಾರ ನಸುಕಿನ ಜಾವ ಲೋಕಾಯುಕ್ತ ದಾಳಿ ನಡೆದಿದೆ. ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಹಾಗೂ ಇತರ ಆಸ್ತಿಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರಿನ ಎರಡು ಕಡೆ ಕೋಕಾ ಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗದಲ್ಲಿಯೂ ದಾಳಿ ನಡೆದಿದೆ. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಓಂಪ್ರಕಾಶ್ ಮನೆ, ಕಂದಾಯ ಅಧಿಕಾರಿ ಎನ್​.ವೆಂಕಟೇಶ್​​ ಮನೆಯಲ್ಲಿ ಪರಿಶೀಲನೆ ನಡೆಯುತ್ತಿದೆ.

ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೂಡ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ಹಾಸನ ‌ನಗರದ ಚನ್ನಪಟ್ಟಣ ಹೌಸಿಂಗ್ ಬೋರ್ಡ್‌ನಲ್ಲಿರುವ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ಮನೆಗಳ ಮೇಲೆ ದಾಳಿ ಮಾಡಲಾಗಿದೆ.
ಇದೇ ರೀತಿ ಕೊಡಗು ಜಿಲ್ಲೆ ಕುಶಾಲನಗರದ ಫಾರ್ಮ್‌ಹೌಸ್ ಮೇಲೂ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಲೋಕಾಯುಕ್ತ ಎಸ್​​​ಪಿ ಸ್ನೇಹ ನೇತೃತ್ವದಲ್ಲಿ ದಾಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟಿಹೆಚ್​ಒ ಡಾ.ವೆಂಕಟೇಶ್ ಅವರ ಯರಗುಂಟೇಶ್ವರ ಬಡಾವಣೆಯ ಮನೆ ಮೇಲೆ ದಾಳಿ ನಡೆದಿದೆ. ಆದಿವಾಲ ಗ್ರಾಮದ ಮನೆ, ಕ್ಲಿನಿಕ್‌ ಮೇಲೆ‌ ದಾಳಿ ಮಾಡಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕೂ ಮೀರಿದ ಆಸ್ತಿ, ಹಣ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಎಸ್​​​ಪಿ ವಾಸುದೇವರಾಮ್, ಡಿವೈಎಸ್​​ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಇಂಜಿನಿಯರ್ ಎಂ.ಆಂಜನೇಯ ಮೂರ್ತಿ ಮನೆ, ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಎಂ.ಆಂಜನೇಯ ಮೂರ್ತಿ ಗೌರಿಬಿದನೂರು ತಾಲೂಕಿನ ಕಿರಿಯ ಇಂಜಿನಿಯರ್ ಆಗಿದ್ದಾರೆ. ಆಂಜನೇಯಮೂರ್ತಿ ಅವರ ಯಲಹಂಕದ ಮನೆ, ಜಕ್ಕೂರು ಕಾಂಪ್ಲೇಕ್ಸ್, ತುಮಕೂರು, ಮಧುಗಿರಿ ಸೇರಿದಂತೆ ಗೌರಿಬಿದನೂರು ಕಚೇರಿಗಳ ಮೇಲೆಯೂ ದಾಳಿ ನಡೆದಿದೆ. 4 ತಂಡಗಳಾಗಿ ಲೋಕಾಯುಕ್ತ ಅಧಿಕಾರಿಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್​​​ಪಿ ಜೆ.ಕೆ ಆ್ಯಂಟೋಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ವಾರದ ಹಿಂದಷ್ಟೇ ರಾಜ್ಯ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಸರ್ಕಾರಿ ಅಧಿಕಾರಿಗಳು ಕೂಡಿಟ್ಟಿದ್ದ ಅಕ್ರಮ ಸಂಪತ್ತನ್ನು ವಶಪಡಿಸಿಕೊಂಡಿದ್ದರು. ಬೆಂಗಳೂರು, ಮೈಸೂರು, ಕೊಪ್ಪಳ ಸೇರಿದಂತೆ ಅನೇಕ ಕಡೆಗಳಲ್ಲಿ ದಾಳಿ ನಡೆದಿತ್ತು. ಚಿನ್ನದ ಬಿಸ್ಕತ್​ಗಳು, ಚಿನ್ನಾಭರಣಗಳು, ಬೆಳ್ಳಿಯ ಆಭರಣಗಳು, ಬೆಳ್ಳಿಯ ಬಟ್ಟಲು, ಬೆಳ್ಳಿ ತಟ್ಟೆ, ಬೆಳ್ಳಿಯ ದೀಪ, ಕಂತೆ ಕಂತೆ ನಗದು ಸೇರಿದಂತೆ ಅಪಾರ ಪ್ರಮಾಣದ ಅಕ್ರಮ ಸಂಪತ್ತನ್ನು ಲೋಕಾಯುಕ್ತ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!