ಯಶ್ ತಾಯಿ ಪೇಮೆಂಟ್ ಕೊಟ್ಟಿಲ್ಲ: ಕೊತ್ತಲವಾಡಿ ಚಿತ್ರದ ಸಹಕಲಾವಿದ ಆರೋಪ
ಕೆಜಿಎಫ್ ಸ್ಟಾರ್ ಯಶ್ ತಾಯಿ ಪುಷ್ಪ ಅವರ ನಿರ್ಮಾಣದ ಕೊತ್ತಲವಾಡಿ ಸಿನಿಮಾದಲ್ಲಿ ನಟಿಸಿದ್ದ ಕಲಾವಿದರಿಗೆ ಪೇಮೆಂಟ್ ಆಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಪೇಮೆಂಟ್ ವಿಚಾರವಾಗಿ ಸಹ ಕಲಾವಿದರೊಬ್ಬರು ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಕೊತ್ತಲವಾಡಿ ಸಿನಿಮಾದಲ್ಲಿ ನಟಿಸಿರುವ ನಮಗೆ ಸಂಭಾವನೆ ಬಂದಿಲ್ಲ ಸಹ ನಟ ಮಹೇಶ್ ಗುರು ಆರೋಪ ಮಾಡಿದ್ದಾರೆ. ಫೇಸ್ಬುಕ್‌ನಲ್ಲಿ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಈಗ ನೋಡಿದ್ರೆ ವಿಡಿಯೋ ಡಿಲೀಟ್ ಆಗಿದೆ. ನಿರ್ಮಾಪಕಿ ಪುಷ್ಪ ಅವರ ಗಮನಕ್ಕೆ ತರೋದಕ್ಕೆ ಮಹೇಶ್ ವೀಡಿಯೋ ಮಾಡಿದ್ದರು….

