ಮಹಾರಾಷ್ಟ್ರ ಪೊಲೀಸರ ಭರ್ಜರಿ ದಾಳಿ ಬೆನ್ನಲ್ಲೇ ಬೆಂಗಳೂರಿನ ಮೂವರು ಪೊಲೀಸ್ ಅಧಿಕಾರಿಗಳ ತಲೆದಂಡ!
ಬೆಂಗಳೂರು, ಡಿ.29 : ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ನಗರದ ಮೂರು ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕೊತ್ತನೂರು ಠಾಣೆಯ ಚೇತನ್ ಕುಮಾರ್, ಅವಲಹಳ್ಳಿ ಠಾಣೆಯ ರಾಮಕೃಷ್ಣಾರೆಡ್ಡಿ ಮತ್ತು ಬಾಗಲೂರು ಠಾಣೆಯ ಶಬರೀಶ್ ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ. ಈ ಅಧಿಕಾರಿಗಳ ವ್ಯಾಪ್ತಿಯಲ್ಲಿ ಬೃಹತ್ ಡ್ರಗ್ಸ್ ತಯಾರಿಕಾ ಘಟಕಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಉತ್ತರ ಜಿಲ್ಲೆಯ ಬಾಗಲೂರಿನ ಸ್ಪಂದನಾ…

