ನಾಳೆ ಮಂಗಳವಾರ ಮಧ್ಯಾಹ್ನ ಜನಗಣತಿ ವರದಿ ಸಮೀಕ್ಷೆಯ ಭವಿಷ್ಯ ನಿರ್ಧರಿಸಲಿರುವ ಹೈಕೋರ್ಟ್
ಬೆಂಗಳೂರು, ಸೆ.22: ರಾಜ್ಯಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಪ್ರಶ್ನಿಸಿ ನಾಲ್ಕೈದು ಸಮುದಾಯಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿವೆ. ಈ ಅರ್ಜಿಗಳನ್ನು ಇಂದು ಹೈಕೋರ್ಟ್ ಸಿಜೆ ಅವರ ಪೀಠ ವಿಚಾರಣೆ ನಡೆಸಿದೆ. ಸರ್ವೇಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದ್ದರು. ಈ ಬಗ್ಗೆ ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ. ಹೀಗಾಗಿ ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಭವಿಷ್ಯ…

