ಕೆ.ಎನ್. ರಾಜಣ್ಣ ಬಿಜೆಪಿ ಸೇರ್ಪಡೆಗೆ ಪ್ರಯತ್ನ: ಕಾಂಗ್ರೆಸ್ ಶಾಸಕರೊಬ್ಬರ ಸ್ಫೋಟಕ ಆರೋಪ
ಕಾರಣವಿಲ್ಲದೆ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ವಜಾಗೊಂಡ ಮಧುಗಿರಿ ಕ್ಷೇತ್ರದ ಹಾಲಿ ಹಿರಿಯ ಶಾಸಕ ಕೆ.ಎನ್ ರಾಜಣ್ಣ ಬಗ್ಗೆ ಕಾಂಗ್ರೆಸ್ ಶಾಸಕರೊಬ್ಬರು ಸ್ಫೋಟಕ ಸುದ್ದಿ ನೀಡಿದ್ದಾರೆ. ರಾಜ್ಯದ ಕೈ ಸರ್ಕಾರದಿಂದ ವಜಾಗೊಂಡ ಶಾಸಕ ಕೆ.ಎನ್ ರಾಜಣ್ಣ ಅವರು ಇದೀಗ ಬಿಜೆಪಿಗೆ ಸೇರಲು ಅರ್ಜಿ ಹಾಕಿಕೊಂಡಿದ್ದಾರೆ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ಇಂದು ಹೇಳಿಕೆ ನೀಡಿದ ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಹೇಳಿದ್ದಿಷ್ಟು: “ಕೆ.ಎನ್ ರಾಜಣ್ಣ ತಮ್ಮ ಮಾತಿನಿಂದಲೇ…

