Headlines

ಮುಡಾ ಕೇಸ್: ಸೆ.26 ರವರೆಗೆ ಜಿ.ಟಿ.ದಿನೇಶ್ ಕುಮಾರ್ ಇಡಿ ಕಸ್ಟಡಿಗೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿರುವ ಮುಡಾ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 9 ದಿನ ಇ.ಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ದಿನೇಶ್‌ ಕುಮಾರ್ ಅವರನ್ನು ಇ.ಡಿ ಅಧಿಕಾರಿಗಳು ಇಂದು ಮಂಗಳವಾರ (ಸೆ.16) ಬಂಧಿಸಿದ್ದರು. ಬುಧವಾರ ಸಂಜೆ 4.30ಕ್ಕೆ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರ ಮುಂದೆ ತೆರೆದ ನ್ಯಾಯಾಲಯದಲ್ಲಿ…

Read More

ಶಾಸಕ ಮುನಿರತ್ನ ವಿರುದ್ಧ ಸಾಮೂಹಿಕ ಅತ್ಯಾಚಾರ ಆರೋಪ: ಬಿ.ರಿಪೋರ್ಟ್ ಹಿನ್ನೆಲೆ ಅರ್ಜಿ ವಜಾ

ಬೆಂಗಳೂರು, ಸೆ.17: ಸಾಮೂಹಿಕ ಅತ್ಯಾಚಾರ ಆರೋಪ ಸಂಬಂಧ ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ವಿಶೇಷ ತನಿಖಾ ದಳವು (ಎಸ್‌ಐಟಿ) ವಿಚಾರಣಾಧೀನ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್‌ ಸಲ್ಲಿಸಿರುವುದರಿಂದ ಈ ಸಂಬಂಧದ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ. ಯಶವಂತಪುರದ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮುನಿರತ್ನ, ವಸಂತ ಕುಮಾರ್‌, ಚನ್ನಕೇಶವ್‌ ಮತ್ತು ಕಮಲ್‌ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ಏಕಸದಸ್ಯ ಪೀಠ ಬುಧವಾರ ಈ ಆದೇಶ ನೀಡಿತು….

Read More

ಮಾಜಿ ಸಿಎಂ ಡಿ.ವಿ ಸದಾನಂದಗೌಡ ಬ್ಯಾಂಕ್‌ ಖಾತೆ ಹ್ಯಾಕ್‌: 3 ಲಕ್ಷ ರೂ ದೋಚಿದ ಸೈಬರ್‌ ಕಳ್ಳರು

ಬೆಂಗಳೂರು, ಸೆ.17 : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಮೂರು ಬ್ಯಾಂಕ್ ಖಾತೆಗಳನ್ನು ಸೈಬರ್ ಅಪರಾಧಿಗಳು ಹ್ಯಾಕ್ ಮಾಡಿ ಸುಮಾರು 3 ಲಕ್ಷ ರೂ. ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮದಿನಾಚರಣೆಯ ಅಂಗವಾಗಿ ನಗರದಲ್ಲಿನ ಆರ್‌ಎಂವಿ ಎಕ್ಸ್‌ಟೆನ್ಷನ್ ಬಿಬಿಎಂಪಿ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ನಡೆದ 75 ಪೌರ ಕಾರ್ಮಿಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಸದಾನಂದ ಗೌಡ, ತಮಗೆ ಸಂಭವಿಸಿದ ವಂಚನೆ ಕುರಿತು ವಿವರಿಸಿದರು. “ನಿನ್ನೆ ನನ್ನ ಮೂರು ಖಾತೆಗಳನ್ನು…

Read More

ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಹಿನ್ನೆಲೆ: ನಾಳೆ ರಾಜನಹಳ್ಳಿಯಲ್ಲಿ ವಾಲ್ಮೀಕಿ ಸಮುದಾಯದ ಸಭೆ

ರಾಜ್ಯದ ಕುರುಬ ಸಮುದಾಯವನ್ನು ಎಸ್‌.ಟಿ. ಪಟ್ಟಿಗೆ ಸೇರ್ಪಡೆ ಮಾಡುವ ಪ್ರಕ್ರಿಯೆಗೆ ವೇಗ ಸಿಕ್ಕಿದೆ. ಈ ಬಗ್ಗೆ ನಿನ್ನೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ನಡೆಯಬೇಕಾಗಿದ್ದ ಸಭೆಯನ್ನು ಮುಂದೂಡಲಾಗಿದೆ. ಆದರೇ, ಕುರುಬ ಸಮುದಾಯ ಈ ಹಿಂದಿನಿಂದಲೂ ತಮ್ಮನ್ನು ಎಸ್‌.ಟಿ. ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಹೋರಾಟ ಮಾಡುತ್ತಿದೆ. ಈಗಾಗಲೇ ಜೇನು ಕುರುಬ, ಕಾಡು ಕುರುಬ ಸಮುದಾಯಗಳು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾಗಿ ಎಸ್‌ಟಿ ಮೀಸಲಾತಿ ಲಾಭ ಪಡೆಯುತ್ತಿವೆ.ಈಗ ಕುರುಬ ಸಮುದಾಯವನ್ನು ಎಸ್‌.ಟಿ. ಪಟ್ಟಿಗೆ ಸೇರ್ಪಡೆ ಮಾಡುವುದಕ್ಕೆ ನಿರೀಕ್ಷೆಯಂತೆ ವಾಲ್ಮೀಕಿ ನಾಯಕ ಸಮುದಾಯದಿಂದ…

Read More

ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ನಿರ್ದೇಶಕ ನಾಗಭರಣಗೆ ಆಹ್ವಾನ

ಮಂಡ್ಯ.ಸೆ.17:- ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ: ಕುಮಾರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರುಗಳು ಇಂದು ಬೆಂಗಳೂರಿನ ಖ್ಯಾತ ಚಲನಚಿತ್ರ ನಿರ್ದೇಶಕ ನಾಗಭರಣ ಅವರ ಕಚೇರಿಗೆ ಭೇಟಿ ನೀಡಿ ಅವರನ್ನು ಸೆಪ್ಟೆಂಬರ್ 25 ರಂದು ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸುವಂತೆ ಆತ್ಮೀಯವಾಗಿ ಆಹ್ವಾನಿಸಿದರು.

Read More

ಧರ್ಮಸ್ಥಳ ಪ್ರಕರಣ: ಬುರುಡೆ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ

ಮಂಗಳೂರು, ಸೆಪ್ಟೆಂಬರ್ 16: ಧರ್ಮಸ್ಥಳದ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾ ಮಾಡಿದೆ. ಚಿನ್ನಯ್ಯ ಜೈಲು ಸೇರಿದ ಮೇಲೆ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ಜಾಮೀನು ನೀಡದಂತೆ ಎಸ್​ಐಟಿ ಪರ ವಕೀಲ ದಿವ್ಯರಾಜ್ ಹೆಗ್ಡೆ ಪುತ್ತೂರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು. ಎರಡು ಕಡೆಯಿಂದ ವಾದ-ಪ್ರತಿವಾದ ಆಲಿಸಿದ ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶ ವಿಜಯೇಂದ್ರ ಅವರು ಚಿನ್ನಯ್ಯನ ಜಾಮೀನು ಅರ್ಜಿ ವಜಾ ಮಾಡಿ ಇಂದು (ಸೆಪ್ಟೆಂಬರ್ 16)…

Read More

ಸೆ. 17 ರಂದು ಯತ್ನಾಳ್–ಈಶ್ವರಪ್ಪ ರವರಿಂದ ಜೆಸಿಬಿ ರ‍್ಯಾಲಿ

ದಾವಣಗೆರೆ: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಬುಧವಾರ (ಸೆ.17) ಚನ್ನಗಿರಿಯ ಮರಡಿ ಗ್ರಾಮಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸುಮಾರು 30 ಕಿ.ಮೀ ದೂರದ ಬೈಕ್ ಹಾಗೂ ಕಾರು ರ‍್ಯಾಲಿ ಏರ್ಪಡಿಸಲಾಗಿದೆ. ವಿಶೇಷವಾಗಿ, ಈ ಬಾರಿ ಬೈಕ್ ಮತ್ತು ಕಾರುಗಳ ಮುಂಭಾಗದಲ್ಲಿ ಜೆಸಿಬಿ ವಾಹನವನ್ನು ಸಂಚರಿಸಲು ತೀರ್ಮಾನಿಸಲಾಗಿದೆ. ಮರಡಿ ಗ್ರಾಮದಲ್ಲಿ ನಡೆಯುತ್ತಿರುವ ಮಹಾಗಣಪತಿ ಮಹೋತ್ಸವ ಮತ್ತು ಧರ್ಮ ಜಾಗೃತಿ ಸಭೆಯ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಭಾಗವಹಿಸುತ್ತಿದ್ದಾರೆ….

Read More

ಯಶ್ ತಾಯಿ ಪೇಮೆಂಟ್ ಕೊಟ್ಟಿಲ್ಲ: ಕೊತ್ತಲವಾಡಿ ಚಿತ್ರದ ಸಹಕಲಾವಿದ ಆರೋಪ

ಕೆಜಿಎಫ್ ಸ್ಟಾರ್ ಯಶ್ ತಾಯಿ ಪುಷ್ಪ ಅವರ ನಿರ್ಮಾಣದ ಕೊತ್ತಲವಾಡಿ ಸಿನಿಮಾದಲ್ಲಿ ನಟಿಸಿದ್ದ ಕಲಾವಿದರಿಗೆ ಪೇಮೆಂಟ್ ಆಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಪೇಮೆಂಟ್ ವಿಚಾರವಾಗಿ ಸಹ ಕಲಾವಿದರೊಬ್ಬರು ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಕೊತ್ತಲವಾಡಿ ಸಿನಿಮಾದಲ್ಲಿ ನಟಿಸಿರುವ ನಮಗೆ ಸಂಭಾವನೆ ಬಂದಿಲ್ಲ ಸಹ ನಟ ಮಹೇಶ್ ಗುರು ಆರೋಪ ಮಾಡಿದ್ದಾರೆ. ಫೇಸ್ಬುಕ್‌ನಲ್ಲಿ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಈಗ ನೋಡಿದ್ರೆ ವಿಡಿಯೋ ಡಿಲೀಟ್ ಆಗಿದೆ. ನಿರ್ಮಾಪಕಿ ಪುಷ್ಪ ಅವರ ಗಮನಕ್ಕೆ ತರೋದಕ್ಕೆ ಮಹೇಶ್ ವೀಡಿಯೋ ಮಾಡಿದ್ದರು….

Read More

ಸೆ. 17 ರಿಂದ ಅ. 2 ರವರೆಗೆ ಗ್ರಾಮೀಣ ಸಮುದಾಯದಲ್ಲಿ ಸ್ವಚ್ಛೋತ್ಸವ: ಕೆ.ಆರ್.ನಂದಿನಿ

ಮಂಡ್ಯ.ಸೆ.16:– ಜಿಲ್ಲೆಯ ಎಲ್ಲಾ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಅಂಗವಾಗಿ ಸ್ವಚ್ಛತಾ ಹೀ ಸೇವಾ ಅಥವಾ ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಜನಾಂದೋಲನವನ್ನು ಹಮ್ಮಿಕೊಂಡಿದ್ದು, ಈ ಪ್ರಯುಕ್ತ ಸ್ವಚ್ಛತಾ ಹೀ ಸೇವಾ 2025 ಅಭಿಯಾನವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ *”ಸ್ವಚೋತ್ಸವ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಪ್ರತಿ ವರ್ಷ ಅಕ್ಟೋಬರ್ 2ರಂದು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು…

Read More

ಶಾಸಕ ಸ್ಥಾನ ಕಳೆದುಕೊಂಡಿದ್ದ ಕೆ.ವೈ ನಂಜೇಗೌಡಗೆ ತಾತ್ಕಾಲಿಕ ರಿಲೀಫ್!

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್​ ಆದೇಶ ನೀಡಿದೆ. ಜೊತೆಗೆ ಮರು ಮತ ಎಣಿಕೆಗೆ ಸೂಚನೆ ನೀಡಿದೆ. ಇನ್ನು ಇದೇ ವೇಳೆ ನಂಜೇಗೌಡ ಪರ ವಕೀಲೆ ನಳಿನಾ ಮಾಯಗೌಡ ಅವರು ಈ ತೀರ್ಪಿಗೆ ಮಧ್ಯಂತರ ತಡೆ ನೀಡಬೇಕೆಂದು ಮನವಿ ಮಾಡಿದ್ದು, ಇದಕ್ಕೆ ಕೋರ್ಟ್ ಸಹ ಪುರಸ್ಕರಿಸಿ 1ತಿಂಗಳುಗಳ…

Read More
error: Content is protected !!