Headlines

ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಿಕೊಳ್ಳಿ: ಡಿ.ಸಿಗೆ ಅರಣ್ಯಾಧಿಕಾರಿ ಪತ್ರ

ಬೆಂಗಳೂರು, ಆ.29: ನಗರದ ಹೊರವಲಯದಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಈ ಜಾಗದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಆಗಬೇಕು ಎಂದು ವಿಷ್ಣುವರ್ಧನ್ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಡಿಸಿಗೆ ಅರಣ್ಯ ಅಧಿಕಾರಿ ಪತ್ರ ಬರೆದಿದ್ದಾರೆ. ಇದೀಗ ಈ ಪತ್ರ ವೈರಲ್ ಆಗಿದೆ. ಈ ಪತ್ರದಲ್ಲಿ ನಿಯಮ ಉಲ್ಲಂಘನೆ ಬಗ್ಗೆ ಬರೆಯಲಾಗಿದೆ. ಆಗಸ್ಟ್ 22ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಅವರು ಈ ಬಗ್ಗೆ ಬೆಂಗಳೂರು…

Read More

ಎಚ್.ಡಿ.ಕೆ ಹೊಗಳಿ ಕೈ ಸರ್ಕಾರದ ವಿರುದ್ಧವೇ ಕಿಡಿಕಾರಿದ ಹಿರಿಯ ಸಚಿವ!!!

ವಿಜಯಪುರ, ಆ.28: ರಾಜ್ಯದ ಕಾಂಗ್ರೆಸ್​ ಸರ್ಕಾರ ಇತ್ತೀಚಿಗೆ ಒಂದಲ್ಲ ಒಂದು ವಿವಾದಕ್ಕೀಡಾಗಿ ಮುಜುಗರ ಅನುಭವಿಸುತ್ತಿದೆ. ಮೈಸೂರಿನ ಚಾಮುಂಡಿ ಬೆಟ್ಟ, ಧರ್ಮಸ್ಥಳ ಪ್ರಕರಣ ಹಾಗೂ ಪಂಚ ಗ್ಯಾರಂಟಿಗಳ ಬಗ್ಗೆ ಓರ್ವ ಹಿರಿಯ ಸಚಿವ ಅಸಮಾಧಾನ ವ್ಯಕ್ತಪಡಿಸಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅನುದಾನ ವಿಚಾರವಾಗಿ ಹೀಗೆ ಹಿರಿಯ ಸಚಿವರೊಬ್ಬರು ಬಹಿರಂಗವಾಗಿ ಹೇಳಿಕೆ ನೀಡಿರುವುದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಇರುಸು-ಮುರುಸು ಉಂಟಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಕೈ ಸರ್ಕಾರದ ಒಂದು ಭಾಗವಾಗಿರುವ ಸಚಿವರೇ ಸಿಡಿದೆದ್ದಿದ್ದಾರೆ. ಏಕೆಂದರೆ…

Read More

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಬೀದಿ ನಾಯಿಗಳಿಗೆ ಊಟ ಹಾಕುವಂತಿಲ್ಲ!

ಬೆಂಗಳೂರು, ಆ.27: ಇನ್ನು ಮುಂದೆ ನಗರದಲ್ಲಿ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಅಲ್ಲಿ ಊಟ ಹಾಕುವುದಕ್ಕೆ ನಿಷೇಧ ಹೇರಲಾಗಿದೆ. ಏಕೆಂದರೆ ಸುಪ್ರೀಂಕೋರ್ಟ್‌ ತೀರ್ಪು ಆಧರಿಸಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿಶೇಷ ಆಯುಕ್ತ ವಿಕಾಸ್‌‍ ಕಿಶೋರ್‌ ಸುರಲ್ಕರ್‌ ತಿಳಿಸಿದ್ದಾರೆ. ನಗರದಲ್ಲಿ ಎಲ್ಲೆಂದರಲ್ಲಿ ಊಟ ಹಾಕುವ ಬದಲು ಬೀದಿ ನಾಯಿಗಳಿಗೆ ಊಟ ಹಾಕಲೆಂದೇ ಬಿಬಿಎಂಪಿ ನಿಗದಿಪಡಿಸಿರುವ ಜಾಗಗಳಲ್ಲೇ ಊಟ ಹಾಕಬೇಕು ಎಂದು ಅವರು ಸೂಚನೆ ನೀಡಿದ್ದಾರೆ. ನಗರದ ಸುಮಾರು 50 ಸಾವಿರಕ್ಕೂ ಹೆಚ್ಚು ರಸ್ತೆಗಳ ಕೊನೆಯಲ್ಲಿ ಬೀದಿ…

Read More

ಅನನ್ಯಾ ಭಟ್ ನಾಪತ್ತೆ ದೂರು ವಾಪಸ್ ಹಿಂಪಡೆಯುವೆ, ತಪ್ಪಾಯ್ತು ಬಿಟ್ಟುಬಿಡಿ ಸಾರ್: ಸೌಜನ್ಯಾ ಭಟ್ ಕಣ್ಣೀರು

ಮಂಗಳೂರು, ಆ.27: ನನ್ನ ಮಗಳು 20 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾಳೆಂದು ಸುಜಾತಾ ಭಟ್ ನೀಡಿದ್ದ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಅನನ್ಯಾ ಭಟ್ ನಾಪತ್ತೆ ಪ್ರಕರಣ ಸಂಬಂಧ ತಾಯಿ ಸುಜಾತಾ ಭಟ್ ನೀಡಿರುವ ದೂರನ್ನು ಎಸ್​ಐಟಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ‘ಅನನ್ಯ’ವಾದ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದ್ದಾರೆ. ಇದರ ನಡುವೆ ಮಾಸ್ಕ್​ ಮ್ಯಾನ್ ಬಂಧನ, ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ದಾಳಿ ಬೆನ್ನಲ್ಲೇ ಸುಜಾತಾ ಭಟ್, ನಿನ್ನೆ(ಆಗಸ್ಟ್​ 26) ಬೆಳಗಿನ ಜಾವ…

Read More

ಬೆಂಗಳೂರಿನಲ್ಲಿ ಬುಧವಾರ ಪ್ರಾಣಿ ಬಲಿ-ಮಾಂಸ ಮಾರಾಟ ನಿಷೇಧ

ಬೆಂಗಳೂರು, ಆ.26: ಗಣೇಶ ಚತುರ್ಥಿಯ ವೇಳೆ ಬುಧವಾರ ಬೆಂಗಳೂರಿನಾದ್ಯಂತ ಪ್ರಾಣಿ ಬಲಿ, ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳು ಎರಡೂ ಮುಚ್ಚಲ್ಪಟ್ಟಿರಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಮತ್ತೊಂದೆಡೆ, ಗೌರಿ ಗಣೇಶ ಹಬ್ಬದ ಸಂಬ್ರಮ ಬೆಂಗಳೂರಿನಲ್ಲಿ ಕಳೆಗಟ್ಟಿದೆ. ಕೆ.ಆರ್​ ಮಾರುಕಟ್ಟೆಯಲ್ಲಿ ಹೂವು-ಹಣ್ಣು ಖರೀದಿ ಭರಾಟೆ ಜೋರಾಗಿದೆ. ಗಣೇಶ ಚತುರ್ಥಿ ಆಚರಣೆಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಈಗಾಗಲೇ ಮಾರ್ಗಸೂಚಿಗಳನ್ನು, ಬಿಡುಗಡೆ…

Read More

ಧರ್ಮಸ್ಥಳ ಕೇಸ್: ಯೂಟ್ಯೂಬರ್ ಸಮೀರ್ ಖಜಾನೆಗೆ ಕೈಹಾಕಿದ ಪೊಲೀಸರು!

ಮಂಗಳೂರು, ಆ.25: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನೇ ತೋಡಿದ ಗುಂಡಿಗೆ ಬಿದ್ದಿರುವ ಬುರುಡೆ ಚಿನ್ನಯ್ಯನ ವಿಚಾರಣೆ ತೀವ್ರಗೊಳಿಸಲಾಗಿದೆ.ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನ ಪೂರ್ವಾಪರ ಕೆದಕುತ್ತಿದ್ದಾರೆ. ಇದೀಗ ಎಸ್ಐಟಿ ತನಿಖೆ ಧರ್ಮಸ್ಥಳ, ಬೆಳ್ತಂಗಡಿಯಿಂದ ಮಂಡ್ಯ ಮತ್ತು ತಮಿಳುನಾಡಿಗೂ ವಿಸ್ತರಿಸುತ್ತಿದೆ. ಮತ್ತೊಂದೆಡೆ ಧರ್ಮಸ್ಥಳದ ಪ್ರಕರಣ ಸಂಬಂಧ ವಿಡಿಯೋ ಮಾಡಿ ಭಾರೀ ಸುದ್ದಿಯಾಗಿದ್ದ ಯುಟ್ಯೂಬರ್ ಸಮೀರ್ ಎಂ.ಡಿ ವಿಚಾರಣೆ ಸಹ ತೀವ್ರಗೊಂಡಿದೆ. ನಿನ್ನೆ(ಆಗಸ್ಟ್​ 24) ಮೊದಲ ದಿನ ವಿಡಿಯೋ ಸಂಬಂಧ ಹತ್ತಾರು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡಿದ್ದರು. ಆದ್ರೆ, 2ನೇ ದಿನದ ವಿಚರಣೆಯಲ್ಲಿ…

Read More

ಸೆಪ್ಟಂಬರ್‌ 1 ರಿಂದ ಬಿಜೆಪಿ ಧರ್ಮಸ್ಥಳ ಚಲೋ ಕಾರ್ಯಕ್ರಮ

ಬೆಂಗಳೂರು, ಆ.25: ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ಹಿಂದೂಗಳ ಮನಸಿನಲ್ಲಿ ಉಂಟಾಗಿರುವ ಅನುಮಾನವನ್ನು ಹೋಗಲಾಡಿಸುವ ದೃಷ್ಟಿಯಿಂದ ಸೆಪ್ಟಂಬರ್‌ 1 ರಿಂದ ಬಿಜೆಪಿ ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಮ್ಮ ಧರ್ಮಸ್ಥಳ ಚಲೋ ಹಿಂದೂಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ.ಇದರಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು.ನಾವು ಬಾಯಿ ಮುಚ್ಚಿಕೊಂಡಿರಲು ಕಾಂಗ್ರೆಸ್‌‍ ನವರಲ್ಲ. ಈ ಸರ್ಕಾರವನ್ನು ಬಗ್ಗಿಸುವ ಶಕ್ತಿ ಹಿಂದೂಗಳಿಗೆ ಇದೆ ಎಂದು ಎಚ್ಚರಿಕೆ ಕೊಟ್ಟರು. ಧರ್ಮಸ್ಥಳ ವಿರುದ್ಧ ಆರೋಪ ಬಂದಾಗ…

Read More

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಪುತ್ರ ನಿಖಿಲ್ ರಿಂದ ಮಾಹಿತಿ…

ಬೆಂಗಳೂರು, ಆ.24: ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಆರೋಗ್ಯ ಹದಗೆಟ್ಟಿದಂತಿದೆ. ಯಾಕಂದ್ರೆ ಅವರ ಫೋಟೋವನ್ನು ನೋಡುತ್ತಿದ್ದರೆ ಕೈಗಳು ಸಣ್ಣದಾಗಿದ್ದು, ಮುಖದಲ್ಲಿ ಕಾಂತಿ ಕಾಣಿಸುತ್ತಿಲ್ಲ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ತೀವ್ರ ಚರ್ಚೆಗಳಾಗುತ್ತಿವೆ. ಇನ್ನು ಈ ಸಂಬಂದ ಇದೀಗ ಸ್ವತಃ ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಆರೋಗ್ಯ ಚೆನ್ನಾಗಿದೆ, ಯಾರೂ ಆತಂಕ ಪಡಬೇಕಿಲ್ಲ. ಕೊನೆ ಉಸಿರಿರುವವರೆಗೂ ಜನಸೇವೆಗೆ ಬದುಕನ್ನ ಮುಡಿಪಿಟ್ಟಿದ್ದಾರೆ. ದೇವೇಗೌಡರು ಸಹ ರಾಜಕೀಯದಿಂದ ವಿಶ್ರಾಂತಿ ತೆಗೆದುಕೊಂಡಿಲ್ಲ. ದೇವೇಗೌಡರ ಕುಟುಂಬಕ್ಕೆ ಜನರೇ ರಾಜಕೀಯ…

Read More

ಮನೆಯಲ್ಲೇ ಸುಜಾತಾ ಭಟ್ ವಿಚಾರಣೆ ನಡೆಸಿದ ಎಸ್ಐಟಿ

ಬೆಂಗಳೂರು, ಆ.24: ಅನನ್ಯಾ ಭಟ್‌ ನಾಪತ್ತೆ ಕುರಿತಂತೆ ದಿನಕ್ಕೊಂದು ಗೊಂದಲದ ಹೇಳಿಕೆ ನೀಡಿ ದಾರಿ ತಪ್ಪಿಸುತ್ತಿರುವ ಸುಜಾತಾ ಭಟ್‌ ಅವರನ್ನು ಅವರ ಮನೆಯಲ್ಲೇ ಶೀಘ್ರದಲ್ಲೇ ವಿಚಾರಣೆ ನಡೆಸಲು ಎಸ್‌‍ಐಟಿ ವಿಶೇಷ ತಂಡ ನಿರ್ಧರಿಸಿದೆ. ಸುಜಾತ ಭಟ್‌ ನೆಲೆಸಿರುವ ಬೆಂಗಳೂರಿನ ಬನಶಂಕರಿಯಲ್ಲಿರುವ ಸುಜಾತಾ ಭಟ್ ಅವರ ನಿವಾಸಕ್ಕೆ ಸೂಕ್ತ ಪೊಲೀಸ್‌‍ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಇಲ್ಲವೆ ಒಂದೆರಡು ದಿನಗಳಲ್ಲಿ ಅವರನ್ನು ವಿಚಾರಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಎಸ್ಐಟಿ ವಿಶೇಷ ತಂಡದ ಮೂಲಗಳು ತಿಳಿಸಿವೆ. ಧರ್ಮಸ್ಥಳದ ಸುತ್ತಮುತ್ತ ನೂರಾರು…

Read More

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಕೆ.ಸಿ.ವೀರೇಂದ್ರ ಇಡಿ ಕಸ್ಟಡಿಗೆ

ಬೆಂಗಳೂರು, ಆ.24: ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನು ಅವರನ್ನು ಬೆಂಗಳೂರಿನ 35ನೇ ಸಿಸಿಹೆಚ್ ನ್ಯಾಯಾಲಯ ಆಗಸ್ಟ್ 28ರ ವರೆಗೆ ಕೇಂದ್ರ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದೆ. ಶಾಸಕ ಕೆ.ಸಿ ವೀರೇಂದ್ರ ಅವರನ್ನು 14 ದಿನ ತಮ್ಮ ವಶಕ್ಕೆ ನೀಡುವಂತೆ ಇಡಿ ಮನವಿ ಮಾಡಿತ್ತು. ಆದರೆ ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ವೀರೇಂದ್ರ ಪಪ್ಪಿ ಪರ ವಕೀಲರ ಮನವಿ ಮಾಡಿದರು. ಆಗ…

Read More
error: Content is protected !!