Headlines

ಚಂದನ್ ಆತ್ಮಹತ್ಯೆ ಬೆದರಿಕೆಯ ಹಿಂದಿನ ರಹಸ್ಯವೇನು!?

ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ : ನನ್ನ ಸಾವಿಗೆ ಸೆನ್ ಡಿವೈಸ್ಪಿ ಪವನ್ ಕುಮಾರ್ ಕಾರಣ ಎಂದು ಆರೋಪಿಸಿ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾನೆ. ಬೆಂಗಳೂರು ಮೂಲದ ಬ್ಯಾಡ್ಮಿಂಟನ್ ಕೋಚ್ ಆಗಿರುವ ಚಂದನ್ ಗಂಭೀರ ಆರೋಪ ಮಾಡಿ ವಿಡಿಯೊ ಹರಿಯಬಿಟ್ಟಿದ್ದು ಇದರ ರಹಸ್ಯವೆ ಮಾನವೀಯತೆಗೆ ಬೆಂಕಿ ಇಟ್ಟ ಕಥೆಯಾಗಿದೆ. ಕೋಚರ್ ಚಂದನ್ ಹೇಳುವಂತೆ, ನಾನು ಅವರಿಗೆ ಫ್ರೀ ಕೋಚಿಂಗ್ ಕೊಟ್ಟಿದ್ದೇನೆ, ಅವರ ಬಳಿ ಸಾಲವಾಗಿ ಹಣ ಕೂಡ ಪಡೆದಿದ್ದೇನೆ. ಇದೀಗ ನನಗೆ ತುಂಬಾ ಕಿರುಕುಳ…

Read More

ಹಾಸನ‌ ಬಳಿ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ 10 ಕ್ಕೆ ಏರಿಕೆ!

ಹಾಸನ, ಸೆ.13: ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿ ಗ್ರಾಮದ ಬಳಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್ ಹರಿದು ನಡೆದಿದ್ದ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಇಂದು ಶನಿವಾರ ಈ ದುರಂತದಲ್ಲಿ ಬೆಳಿಗ್ಗೆಯವರೆಗೂ 9 ಮಂದಿ ಸಾವನ್ನಪ್ಪಿದ್ದರು.ಇದೇ ದುರಂತದಲ್ಲಿ ಹಾಸನ ತಾಲ್ಲೂಕಿನ ಶಿವಯ್ಯನ ಕೊಪ್ಪಲು ಗ್ರಾಮದ ಯುವಕ 26 ವರ್ಷದ ಚಂದನ್ ಗಂಭೀರ ಸ್ಥಿತಿಯಲ್ಲಿ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ. ದುರಾದೃಷ್ಟವಶಾತ್ ಟ್ರಕ್ ಹರಿದಿದ್ದರಿಂದ ಚಂದನ್ ಬ್ರೇನ್ ಡೆಡ್ ಸ್ಥಿತಿಯಲ್ಲಿತ್ತು. ಹೀಗಾಗಿ ಚಂದನ್ ನನ್ನು…

Read More

ಏಷ್ಯಾ ಕಪ್ ಮಹಿಳಾ ಹಾಕಿ‌: ಫೈನಲ್ ತಲುಪಿದ ಭಾರತ

ಬೀಜಿಂಗ್, ಸೆ.13: ಹಾಕಿ ಏಷ್ಯಾಕಪ್‌ ಸೂಪರ್-4 ಸುತ್ತಿನಲ್ಲಿ ಜಪಾನ್ ವಿರುದ್ಧದ ಪಂದ್ಯವನ್ನು 1-1 ಗೋಲುಗಳಿಂದ ಡ್ರಾದಲ್ಲಿ ಅಂತ್ಯಗೊಳಿಸಿರುವ ಭಾರತೀಯ ಮಹಿಳಾ ಹಾಕಿ ತಂಡ ಟೂರ್ನಿಯಲ್ಲಿ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತವು ಬ್ಯೂಟಿ ಡಂಗ್‌ಡಂಗ್ (7 ನೇ ನಿಮಿಷ) ಅವರ ಅದ್ಭುತ ಗೋಲಿನೊಂದಿಗೆ ಆರಂಭಿಕ ಮುನ್ನಡೆ ಸಾಧಿಸಿತು, ಆದರೆ ಜಪಾನ್‌ನ ಶಿಹೋ ಕೊಬಯಕಾವಾ (58 ನೇ ನಿಮಿಷ) ಕೊನೆಯ ಕ್ಷಣಗಳಲ್ಲಿ ಗೋಲು ಗಳಿಸಿ ಸ್ಕೋರ್ ಅನ್ನು ಸಮಬಲಗೊಳಿಸಿದರು. ಈ ಡ್ರಾದೊಂದಿಗೆ, ಭಾರತ…

Read More

ಹಾಸನ ದುರಂತ: ಹಿಮ್ಸ್ ಗೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ, ಜೆಡಿಎಸ್ ನಿಂದ ತಲಾ 1 ಲಕ್ಷ ರೂ. ಪರಿಹಾರ ಘೋಷಣೆ

ಹಾಸನ ತಾಲ್ಲೂಕಿನ ಮೊಸಳೆ ಹೊಸಹಳ್ಳಿ ಗ್ರಾಮದ ಬಳಿ ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ ಇಂದು ಶನಿವಾರ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಹಾಸನದ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ನೀಡಿದರು. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ದೇವೇಗೌಡ ಘೋಷಣೆ ಮಾಡಿದರು. ಗಂಭೀರವಾಗಿ ಗಾಯಗೊಂಡವರಿಗೆ 25 ಸಾವಿರ ರೂ., ಸ್ವಲ್ಪ…

Read More

ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಹರಿದ ಟ್ರಕ್: 8 ಗಣೇಶ ಭಕ್ತರು ದುರ್ಮರಣ!

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ವೇಗವಾಗಿ ಬಂದ ಟ್ರಕ್ ಹರಿದು 8 ಮಂದಿ ಗಣೇಶ ಭಕ್ತರು ಸಾವನ್ನಪ್ಪಿದ ದುರ್ಘಟನೆ ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಗ್ರಾಮದ ಬಳಿ ನಡೆದಿದೆ. ಇಂದು ಶುಕ್ರವಾರ ರಾತ್ರಿ ಈ ದುರಂತ ಘಟಿಸಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ 20 ಕ್ಕೂ ಹೆಚ್ಚಿನ ಗಣೇಶ ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆ ಮತ್ತು ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಭೀಕರ ಅಪಘಾತದ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ…

Read More

ನೇಪಾಳದ ಹೊಸ ಪ್ರಧಾನಿಯಾಗಿ ಸುಶೀಲಾ ಕರ್ಕಿ ಆಯ್ಕೆ!

ನೇಪಾಳ ದೇಶದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡಿದ್ದಕ್ಕೆ ಉದ್ರಿಕ್ತ ಯುವ ನೇಪಾಳ ಯುವ ಸಮುದಾಯ ರಾಜಧಾನಿ ಕಠ್ಮಂಡುವಿನಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಕಾರಣಕ್ಕೆ ಪ್ರಧಾನಿಯಾಗಿದ್ದ ಕೆ.ಪಿ‌ ಶರ್ಮಾ ಓಲಿ ರಾಜೀನಾಮೆ ನೀಡಿದ್ದರು.ಇದರಿಂದ ನೇಪಾಳ ಗಲಭೆಯಲ್ಲಿ ಅಲ್ಲಿನ ಸರ್ಕಾರವೇ ಸಂಪೂರ್ಣವಾಗಿ ಪತನವಾಗಿತ್ತು‌. ಆನಂತರ ಬಹಳ ಯೋಚನೆ ಮಾಡಿ ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ನೇಪಾಳದ ಹೊಸ ಪ್ರಧಾನಿಯನ್ನಾಗಿ ಆಯ್ಕೆ ಮಾಡಲಾಗಿದೆ.ಸುಶೀಲಾ ಕರ್ಕಿ ಅವರು ಇಂದು ಶುಕ್ರವಾರ ಸೆಪ್ಟೆಂಬರ್ 12 ರ ರಾತ್ರಿ 9:15 ಕ್ಕೆ…

Read More

ನನಗೆ ಮನೆಯೇ ಇಲ್ಲ, ಸಮೀರ್ ಎಂ.ಡಿ ಅಂದ್ರೆ ಬಾಡಿಗೆಗೆ ಮನೆ ಕೊಡ್ತಿಲ್ಲ!

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಎಸ್ಐಟಿ ತನಿಖೆಗೆ ಒಳಗಾಗಿರುವ ಸಮೀರ್ ಎಂ.ಡಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಯೂಟ್ಯೂಬ್ ವಿಡಿಯೋದಲ್ಲಿ ಮಾತನಾಡಿರುವ ಸಮೀರ್​.. ನನಗೆ ವಿದೇಶದಿಂದ ಫಂಡ್​ ಬಂದಿದೆ ಎಂದು ಆರೋಪ ಮಾಡುತ್ತಿದ್ದಾರೆ. ನನಗೆ ಯಾವುದೇ ಫಂಡ್ ಬಂದಿಲ್ಲ. ಹಣ ತಗೊಂಡಿದ್ದಿದ್ರೆ ತನಿಖೆಯಿಂದ ಎಲ್ಲಾ ಹೊರಗೆ ಬರ್ತಿತ್ತು. ಪೊಲೀಸರಿಗೆ ಎಲ್ಲಾ ಬ್ಯಾಂಕ್ ದಾಖಲೆ ನೀಡಿದ್ದೇನೆ. ಪೊಲೀಸರು ತನಿಖೆ ಮಾಡಲಿ, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡುವವರನ್ನ ಯಾರೂ ಪ್ರಶ್ನೆ ಮಾಡಲ್ಲ ಎಂದು ಆಕ್ರೋಶ…

Read More

ಶ್ರೀರಂಗಪಟ್ಟಣ ದಸರಾ ಲೋಗೋ ಬಿಡುಗಡೆ

ಮಂಡ್ಯ.ಸೆ.12:- ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಲೋಗೋ ವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಗೋ ಬಿಡುಗಡೆಯ ನಂತರ ಮಾತನಾಡಿ ಈ ಬಾರಿಯ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ನಟ ಟಿ.ಎಸ್ ನಾಗಾಭರಣ ಅವರು ನೆರವೇರಿಸಲಿದ್ದಾರೆ ಎಂದರು.  ಈ ಬಾರಿಯ ಕಾರ್ಯಕ್ರಮಗಳನ್ನು ಸಹ ಉತ್ತಮವಾಗಿ ಸಂಘಟಿಸಲಾಗುವುದು. ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೆ. 25 ರಂದು…

Read More

ಸೆ.22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಬೆಂಗಳೂರು, ಸೆ.12: ಬಹು ಚರ್ಚಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಇದೇ ಸೆಪ್ಟೆಂಬರ್ ತಿಂಗಳ 22ರಿಂದ ಅಕ್ಟೋಬರ್ 7ರವರೆಗೆ ಕೈಗೊಳ್ಳಲಾಗುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮನವಿ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ಎಂದೇ ಪರಿಗಣಿಸಲಾಗುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಸಮಗ್ರ ಮಾಹಿತಿ ನೀಡಿದರು. ರಾಜ್ಯದಲ್ಲಿ 2 ಕೋಟಿ ಮನೆಗಳಿದ್ದು, 7 ಕೋಟಿ ಜನಸಂಖ್ಯೆ ಇದೆ. ಎಲ್ಲಾ ಮನೆಗಳ ಸಮೀಕ್ಷೆ ನಡೆಸಲು, ದಸರಾ…

Read More

“ಚಾಮರಾಜನಗರ ನಗರಸಭೆ ಮೇಲೆ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಹಾಗೂ ಅಕ್ರಮಗಳ ಪರಿಶೀಲನೆ”

ಚಾಮರಾಜನಗರ ನಗರಸಭೆ ಕಚೇರಿಯಲ್ಲಿ ಭ್ರಷ್ಟಾಚಾರ, ಕೆಲಸ ವಿಳಂಬ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಕಡತಗಳನ್ನು ಪರಿಶೀಲನೆ ನಡೆಸಿದರು.ಮೈಸೂರು ಹಾಗೂ ಚಾಮರಾಜನಗರ ಲೋಕಾಯುಕ್ತ ಅಧಿಕಾರಿಗಳ ಐದು ತಂಡಗಳು ನಗರಸಭೆಗೆ ದಿಢೀರನೇ ದಾಳಿ ನಡೆಸಿದ್ದು, ಪೌರಾಯುಕ್ತರ ಕಚೇರಿ, ಕಂದಾಯ ಶಾಖೆ, ಆರೋಗ್ಯ ಶಾಖೆ ಸೇರಿದಂತೆ ಇತರೆ ಶಾಖೆಗಳ ಮೇಲೆ ದಾಳಿ ನಡೆಸಿ ಅಲ್ಲಿನ ಕಡತಗಳನ್ನು ಸಂಜೆಯ ವರೆಗೂ ಪರಿಶೀಲನೆ ನಡೆಸಿದ್ದಾರೆ.ಆಯಾ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರಾಯುಕ್ತರಿಂದ ಮಾಹಿತಿ ಪಡೆದುಕೊಂಡ ಲೋಕಾಯುಕ್ತ…

Read More
error: Content is protected !!