Headlines

ಶಾಸಕ ಸತೀಶ್ ಸೈಲ್ ಮನೆಯಲ್ಲಿ ಇಡಿ ರೇಡ್: ಕೋಟ್ಯಂತರ ರೂ. ನಗದು, ಕೆಜಿಗಟ್ಟಲೆ ಚಿನ್ನ ಜಪ್ತಿ!

ಕಾರವಾರ, ಆಗಸ್ಟ್ 15: ಉತ್ತರಕನ್ನಡ ಜಿಲ್ಲೆಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದಲ್ಲಿ ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ 2 ದಿನಗಳಿಂದ ಶೋಧ ಕಾರ್ಯ ನಡೆಸಿದ್ದರು. ಈ ಶೋಧದ ವೇಳೆ ಇಡಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆಹಚ್ಚಿದ್ದಾರೆ. ಶಾಸಕ ಸತೀಶ್ ಸೈಲ್ ಮನೆ ಮತ್ತು ಬ್ಯಾಂಕ್ ಖಾತೆಯಲ್ಲಿದ್ದ 1.68 ಕೋಟಿ ರೂಪಾಯಿ ನಗದು ಮತ್ತು ಅಂದಾಜು 6,20,45,319 ರೂ. ಮೌಲ್ಯದ 6.75 ಕೆ‌ಜಿ ಚಿನ್ನವನ್ನು…

Read More

ಟಿ.ಬಿ ಡ್ಯಾಂನ 7 ಗೇಟ್ ಗಳಲ್ಲಿ ಭಾರಿ ಸೋರಿಕೆ: ಸಚಿವ ಶಿವರಾಜ್ ತಂಗಡಗಿ

ಹೊಸಪೇಟೆ, ಆಗಸ್ಟ್ 15: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 7 ಗೇಟ್​ಗಳು ಬೆಂಡ್ ಆಗಿವೆ ಎಂದು ಡ್ಯಾಂ ಸೇಫ್ಟಿ ರೀವಿವ್ ಕಮಿಟಿ ವರದಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಕೊಪ್ಪಳದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ತುಂಗಭದ್ರಾ ಜಲಾಶಯದ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್​ ಸೇರಿದಂತೆ 7 ಗೇಟ್​ಗಳು ಬೆಂಡ್ ಆಗಿವೆ. ಇದರಲ್ಲಿ, 6 ಗೇಟ್​ಗಳನ್ನು…

Read More

ದರ್ಶನ್ ಸೇರಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಜೈಲು ಕೈದಿ ಸಂಖ್ಯೆಗಳು ಹಂಚಿಕೆ

ಬೆಂಗಳೂರು, ಆಗಸ್ಟ್ 15 – ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತವಾದ ನಟ ದರ್ಶನ್ ಮತ್ತು ಇತರ ಆರೋಪಿಗಳು ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸುಪ್ರೀಂ ಕೋರ್ಟ್ ಆಗಸ್ಟ್ 14ರಂದು ದರ್ಶನ್ ಸೇರಿದಂತೆ ಏಳು ಮಂದಿಯ ಜಾಮೀನು ರದ್ದುಪಡಿಸಿದ ನಂತರ, ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು, ಕೋರ್ಟ್ ಮುಂದೆ ಹಾಜರುಪಡಿಸಿದರು. ಬಂಧಿತರಿಗೆ ತಕ್ಷಣವೇ ವಿಚಾರಣಾಧೀನ ಕೈದಿ (Undertrial Prisoner) ಸಂಖ್ಯೆಗಳು ನೀಡಲಾಗಿದ್ದು, ಪವಿತ್ರಾ ಗೌಡ (ಕೇಸಿನ ಎ1 ಆರೋಪಿ)ಗೆ 7313 ಸಂಖ್ಯೆ, ದರ್ಶನ್ಗೆ 7314, ನಾಗರಾಜ್ಗೆ 7315, ಲಕ್ಷ್ಮಣಗೆ 7316 ಮತ್ತು ಪ್ರದೋಷ್ಗೆ 7317 ಸಂಖ್ಯೆಗಳು…

Read More

12ನೇ ಬಾರಿ ಭಾರತದ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್ 15: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ನಿಮಿತ್ತ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ದೇಶವನ್ನು ಉದ್ದೇಶಿಸಿ ಪ್ರಧಾನಿಗಳು ಭಾಷಣ ಮಾಡಲಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ಬೆಳಗ್ಗೆ ರಾಜ್​ಘಾಟ್​​ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಭೇಟಿ ನೀಡಿದ್ದರು. ಬಳಿಕ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಕೆ ಮಾಡಿದರು. ಇದಾದ ಮೇಲೆ ಕೆಂಪು ಕೋಟೆ ಕಡೆಗೆ ಆಗಮಿಸಿದರು. ಈ ವೇಳೆ ರಕ್ಷಣಾ ಸಚಿವರು ಪ್ರಧಾನಿಗಳನ್ನು ಸ್ವಾಗತ…

Read More

ಇದು ಖಾಲಿ ಟ್ರಂಕ್, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ: ಡಿಸಿಎಂ ಆರೋಪ

ಬೆಂಗಳೂರು, ಆಗಸ್ಟ್ 14: ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ? ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ ಇರುವವನು. ನನಗೆ ಧರ್ಮಾಧಿಕಾರಿಗಳ ಮೇಲೂ ನಂಬಿಕೆ ಇದೆ. ಅವರ ಆಚಾರ ವಿಚಾರಗಳ…

Read More

ರೇಣುಕಾಸ್ವಾಮಿ ಕೊಲೆ ಕೇಸ್: ಮತ್ತೆ ಜೈಲು ಸೇರುತ್ತಿರುವ ದರ್ಶನ್ ಮುಂದಿರುವ ಆಯ್ಕೆಗಳಿವು…

ಬೆಂಗಳೂರು, ಆಗಸ್ಟ್ 14: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ್, ನಟಿ ಪವಿತ್ರಾಗೌಡ ಹಾಗೂ ಇತರೆ ಕೆಲ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಷರತ್ತುಬದ್ಧ ಜಾಮೀನು ಆದೇಶವನ್ನು ಸುಪ್ರೀಂಕೋರ್ಟ್ ಇಂದು ರದ್ದುಗೊಳಿಸಿ ತೀರ್ಪು ನೀಡಿದೆ. ಇದರಿಂದ ನಟ ದರ್ಶನ್, ನಟಿ ಪವಿತ್ರಾಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳು ಮತ್ತೊಮ್ಮೆ ಜೈಲು ಸೇರುತ್ತಿದ್ದಾರೆ. ಅದರಲ್ಲೂ ನಟ ದರ್ಶನ್​ಗೆ ಎಲ್ಲರಿಗಿಂತಲೂ ತುಸು ಮುಂಚಿತವಾಗಿ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಇಂದು ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದ್ದು, ರೇಣುಕಾಸ್ವಾಮಿ…

Read More

ಕೆ.ಎನ್ ರಾಜಣ್ಣಗೆ ಬಿಜೆಪಿ ಸೇರಲು ‌ಆಹ್ವಾನವಿತ್ತ ಶ್ರೀರಾಮುಲು

ಬೆಂಗಳೂರು, ಆಗಸ್ಟ್ 14: ರಾಜ್ಯದ ಕಾಂಗ್ರೆಸ್‌ ಸರ್ಕಾರದಿಂದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರನ್ನು ವಜಾಗೊಂಡ ಕೆ.ಎನ್‌. ರಾಜಣ್ಣ ಹಾಗೂ ಅವರ ಮಗ ಎಂಎಲ್‌ಸಿ ರಾಜೇಂದ್ರ ಅವರನ್ನು ಭೇಟಿಯಾದ ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಸಚಿವ ಸತೀಶ್‌ ಜಾರಕಿಹೊಳಿ ಅವರೊಂದಿಗೆ ಕಾಂಗ್ರೆಸ್‌ ಶಾಸಕರ ತಂಡ ರಾಜಣ್ಣ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿ ನಂತರ ಈ ಬೆಳವಣಿಗೆ ನಡೆದಿದೆ. ಇಡೀ ಸಮುದಾಯ ಮತ್ತು ಅದರ ನಾಯಕರು ನಿಮ್ಮೊಂದಿಗಿದ್ದಾರೆ, ಬಿಜೆಪಿಗೆ ಬನ್ನಿ. ನೀವು…

Read More

ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ದರ್ಶನ್ ಜಾಮೀನು ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಮತ್ತಿತರ ಆರೋಪಿಗಳು ಹೈಕೋರ್ಟ್ ನೀಡಿದ್ದ ಜಾಮೀನನ್ನು ಕರ್ನಾಟಕ ಸರ್ಕಾರ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ, 2025 ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ದರ್ಶನ್, ಪವಿತ್ರಾ ಗೌಡ ಹಾಗೂ ಮೂವರು ಸೇರಿದಂತೆ ಏಳೂ ಜನ ಆರೋಪಿಗಳ ಜಾಮೀನು ರದ್ದುಗೊಳಿಸಿ ಆದೇಶ ನೀಡಿದೆ. ಈ ತೀರ್ಪಿನಿಂದ ದರ್ಶನ್ ಮತ್ತು ಇತರ ಆರೋಪಿಗಳು ಜೈಲು ಸೇರಬೇಕಾಗಿದೆ.

Read More

ಮುಜರಾಯಿ ದೇಗುಲಗಳಲ್ಲಿ ಆಗಸ್ಟ್ 15 ರಿಂದ ಪ್ಲಾಸ್ಟಿಕ್ ಬಳಸುವಂತಿಲ್ಲ

ಬೆಂಗಳೂರು, ಆಗಸ್ಟ್ 15: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಇದೇ ಆಗಸ್ಟ್ 15ರಿಂದ ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‌ಗೆ ತಿಳಿಸಿದ್ದಾರೆ. ನಿನ್ನೆ ವಿಧಾನಪರಿಷತ್ ಕಲಾಪದಲ್ಲಿ ಸದಸ್ಯ ಮಧುಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಜರಾಯಿ ಇಲಾಖೆಯು ಆಗಸ್ಟ್ 15ರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್‌ ನಿಷೇಧ ಮಾಡಿ, ಆದೇಶ ಹೊರಡಿಸಲಾಗುವುದು. ಬಳಕೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. ದೇವಸ್ಥಾನದ…

Read More

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಜಾಮೀನು ಭವಿಷ್ಯ ನಾಳೆ ಸುಪ್ರೀಂಕೋರ್ಟ್ ನಲ್ಲಿ ನಿರ್ಧಾರ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ತೂಗುದೀಪ್ ಹಾಗೂ ನಟಿ ಪವಿತ್ರಾಗೌಡ ಅವರಿಗೆ ನೀಡಲಾಗಿದ್ದ ಕರ್ನಾಟಕ ಹೈಕೋರ್ಟ್ ನ ಜಾಮೀನು ರದ್ದುಗೊಳಿಸಬೇಕೆಂದು ಸುಪ್ರೀಂಕೋರ್ಟಿಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಗಿದಿದ್ದು, ನಾಳೆ ಗುರುವಾರ ತೀರ್ಪು ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಪವಿತ್ರಾಗೌಡ ಅವರಿಗೆ ನಾಳೆ ಬಹಳ ಮಹತ್ವದ ದಿನವಾಗಿದ್ದು, ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಈಗಾಗಲೇ ಸುಪ್ರೀಂಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಬೇಕೆಂದು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ…

Read More
error: Content is protected !!