ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಜೊತೆ ವ್ಯವಹಾರ: ಕುಸುಮಾ ಹನುಮಂತರಾಯಪ್ಪ ಮೇಲೂ ಇಡಿ ದಾಳಿ!
ಬೆಂಗಳೂರು, ಆಗಸ್ಟ್ 22: ಚಿತ್ರದುರ್ಗ ಕೈ ಶಾಸಕ ಹಾಗೂ ಹಿರಿಯ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಅವರ ಮೇಲೆ ನಡೆಯುತ್ತಿರುವ ತನಿಖೆಯ ಮುಂದುವರೆದ ಭಾಗವಾಗಿ ಕೇಂದ್ರ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಗರದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪ ಅವರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ನಗರದ ಮುದ್ದಿನಪಾಳ್ಯ ರಸ್ತೆಯಲ್ಲಿರುವ ಕೈ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರ ನಿವಾಸಕ್ಕೆ ಇಂದು ಬೆಳಗ್ಗೆ 4.30ರ ಸುಮಾರಿಗೆ ಇ.ಡಿ ಅಧಿಕಾರಿಗಳು 2…

