Headlines

ಧರ್ಮಸ್ಥಳ ಕೇಸ್: ಅನಾಮಿಕನನ್ನು ವಶಕ್ಕೆ ಪಡೆಯಲು ಎಸ್ಐಟಿ ಚಿಂತನೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಅನಾಮಿಕ ನೀಡಿರುವ ದೂರಿನಂತೆ ನಡೆಸಲಾಗುತ್ತಿದ್ದ ಉತ್ಖನನವನ್ನು ಸದ್ಯಕ್ಕೆ ಸ್ಥಗಿತಗೊಳಿಸಿರುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಸೋಮವಾರ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಎಸ್​ಐಟಿ ಅನಾಮಿಕನನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ದೂರಿನ ಮೇಲೆಯೇ ಸದ್ಯ ಅನುಮಾನ ವ್ಯಕ್ತವಾದ ಕಾರಣ ಆತನನ್ನು ವಶಕ್ಕೆ ಪಡೆಯಲು ಎಸ್​ಐಟಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ದೂರುದಾರ ಅನಾಮಿಕನನ್ನು ಸುಪರ್ದಿಗೆ ಪಡೆದು ವಿಚಾರಣೆಗೆ ಒಳಪಡಿಸಿದರೆ ಹೆಚ್ಚಿನ ಮಾಹಿತಿ ದೊರೆಯುವ ಸಾಧ್ಯತೆ ಇರುವುದರಿಂದ ಈ ಕ್ರಮಕ್ಕೆ ಎಸ್​ಐಟಿ ಮುಂದಾಗಿದೆ…

Read More

“ಧರ್ಮಸ್ಥಳ ಕೇಸ್ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ: ಸಿಬಿಐ-ಎನ್ಐಎ ತನಿಖೆಗೆ ಒತ್ತಾಯಿಸಿದ ಜನಾರ್ದನ ರೆಡ್ಡಿ”

ಬೆಂಗಳೂರು, ಆಗಸ್ಟ್​ 19: ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದೆ ತಮಿಳುನಾಡಿನ ಕಾಂಗ್ರೆಸ್​ ಸಂಸದ ಹಾಗೂ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ‌ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಸದ ಸಸಿಕಾಂತ್ ಸೆಂಥಿಲ್ ಮೂಲಕ ಧರ್ಮಸ್ಥಳ ಕೇಸ್ ಮಾಡಿಸುತ್ತಿದ್ದಾರೆ ಎಂದರು. ಕೋರ್ಟ್ ಮೊರೆ ಹೋಗುವೆ ಎಂದ ಜನಾರ್ದನ ರೆಡ್ಡಿ!ಮುಸುಕುಧಾರಿಯೂ ಕೂಡ ತಮಿಳುನಾಡು ಮೂಲದವನು. ಮುಸುಕುಧಾರಿ ಇಷ್ಟು ವರ್ಷ…

Read More

ಉಪರಾಷ್ಟ್ರಪತಿ ಚುನಾವಣೆ: ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಆಯ್ಕೆ

ನವದೆಹಲಿ, ಆಗಸ್ಟ್ 19: ಮುಂದಿನ ಸೆಪ್ಟೆಂಬರ್ 19 ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ನೇತೃತ್ವದ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಸುದರ್ಶನ್‌ ರೆಡ್ಡಿ ಅವರು ಅಭ್ಯರ್ಥಿಯಾಗಿದ್ದಾರೆ. ಇದರಿಂದಾಗಿ ದೇಶದ 2ನೇ ಅತ್ಯುನ್ನತ ಹುದ್ದೆಯಾದ ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲು ವೇದಿಕೆ ಬಹುತೇಕ ಸಿದ್ಧಗೊಂಡಂತಾಗಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಇಂಡಿಯಾ ಮೈತ್ರಿಕೂಟಗಳ ಸಭೆಯಲ್ಲಿ ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿರುವ ಸುದರ್ಶನ್‌ ರೆಡ್ಡಿ ಅವರನ್ನು ಕಣಕ್ಕಿಳಿಸಲು ಸಭೆ ಒಮತದ ತೀರ್ಮಾನವನ್ನು ಕೈಗೊಂಡಿತು. ಇನ್ನೊಂದು ವಿಶೇಷವೆಂದರೆ…

Read More

ಧರ್ಮಸ್ಥಳದ ಬಗ್ಗೆ ಯೂಟ್ಯೂಬರ್ ಗಳು ಅಪಪ್ರಚಾರ ನಡೆಸಿದರೆ ಕಾನೂನು ಕ್ರಮ: ಗೃಹ ಸಚಿವರ ಎಚ್ಚರಿಕೆ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿರುವ ಅಸಹಜ ಸಾವು ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಗಂಭೀರವಾದ ಮಾತುಕತೆಗಳು ನಡೆದಿದ್ದು ರಾಜ್ಯಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರವೇ ನಡೆಯುತ್ತಿದೆ. ಇದರ ನಡುವೆ ಗೃಹ ಸಚಿವ ಪರಮೇಶ್ವರ್ ಅವರು ಯೂಟ್ಯೂಬರ್​ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅವರು ಹೇಳಿದ್ದಿಷ್ಟು…“ಯಾರೇ ಯೂಟ್ಯೂಬರ್​ಗಳಾದರೂ, ಯಾವುದೇ ಯೂಟ್ಯೂಬ್ ಆದರೂ ಇರಲಿ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಬಾರದು. ಒಂದು ವೇಳೆ ಧರ್ಮಸ್ಥಳ ಕ್ಷೇತ್ರದ ಕುರಿತು ಕೆಟ್ಟದಾಗಿ ಮಾತನಾಡಿರುವುದು, ಅಪಪ್ರಚಾರ ಮಾಡಿರುವುದು ಕಂಡುಬಂದಲ್ಲಿ ಅಂತವರ…

Read More

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಬೆಂಗಳೂರಿನಲ್ಲಿ ಜಾಗ ಖರೀದಿಸಿದ ಸುದೀಪ್

ಬೆಂಗಳೂರು, ಆಗಸ್ಟ್ 18: ಸಾಹಸಸಿಂಹ ವಿಷ್ಣುವರ್ಧನ್ ಅವರ ಸಮಾಧಿ ಇತ್ತೀಚೆಗೆ ನೆಲಸಮ ಆಯಿತು. ಇದರಿಂದ ಅಭಿಮಾನಿಗಳಿಗೆ ತೀವ್ರ ಬೇಸರ ಉಂಟಾಯಿತು. ವಿಷ್ಣು ಅಭಿಮಾನಿಗಳಲ್ಲಿ ಒಬ್ಬರಾಗಿರುವ ನಟ ಸುದೀಪ್ ಅವರಿಗೆ ಕೂಡ ನೋವಾಗಿದೆ. ವಿಷ್ಣುವರ್ಧನ್ ಸ್ಮಾರಕ ಬೆಂಗಳೂರಿನಲ್ಲಿ ನಿರ್ಮಾಣ ಆಗಬೇಕು ಎಂಬ ಆಸೆ ಅಭಿಮಾನಿಗಳಿಗೆ ಇದೆ. ಅದಕ್ಕಾಗಿ ವಿಷ್ಣು ಅಭಿಮಾನಿಗಳು ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದಾರೆ. ಕಿಚ್ಚ ಸುದೀಪ್ ಅವರು ವಿಷ್ಣು ಸ್ಮಾರಕ ನಿರ್ಮಾಣಕ್ಕಾಗಿ ಕೆಂಗೇರಿ ಬಳಿ ಅರ್ಧ ಎಕರೆ ಜಾಗವನ್ನು ಖರೀದಿ ಮಾಡಿದ್ದಾರೆ. ಆ ಬಗ್ಗೆ ವೀರಕಪುತ್ರ ಶ್ರೀನಿವಾಸ್ ಅವರು…

Read More

ಅಧಿವೇಶನ ಮುಗಿದ ಕೂಡಲೇ ಅನರ್ಹ ಬಿಪಿಎಲ್ ಕಾರ್ಡ್ ರದ್ದು: ಆಹಾರ ಸಚಿವ ಮುನಿಯಪ್ಪ

ಬೆಂಗಳೂರು, ಆಗಸ್ಟ್ 18: ವಿಧಾನಮಂಡಲದ ಅಧಿವೇಶನ ಮುಗಿದ ಕೂಡಲೇ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಯಲಿದೆ ಎಂದು ಆಹಾರ ಸಚಿವ ಮುನಿಯಪ್ಪ ವಿಧಾನಪರಿಷತ್‌ನಲ್ಲಿಂದು ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಸೋಮವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ ಕಾಂಗ್ರೆಸ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಪಿಎಲ್ ಕಾರ್ಡ್ ಗೊಂದಲ ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದರು. ಬಳಿಕ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಸಿಗುತ್ತಿಲ್ಲ….

Read More

ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಪ್ರತೀ ಸೋಮವಾರ ಸಾರ್ವಜನಿಕ ಕುಂದುಕೊರತೆ ಸಭೆ : ಕೆ.ಆರ್ ನಂದಿನಿ 

ಮಂಡ್ಯ.ಆ18:- ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಪ್ರತೀ ಸೋಮವಾರ ಸಾರ್ವಜನಿಕರ ಕುಂದುಕೊರತೆ ಸಭೆಗಳನ್ನು ಆಯೋಜಿಸುವಂತೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಸೂಚಿಸಿದ್ದ ಹಿನ್ನಲೆಯಲ್ಲಿ ಇಂದು ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ಆಯೋಜಿಸಲಾಗಿರುತ್ತದೆ. ಸಾರ್ವಜನಿಕರು ಸರ್ಕಾರಿ ಕೆಲಸಗಳಿಗೆ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಹಾಗೂ ನಿಗಧಿತ ಅವಧಿಯೊಳಗೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತೀ ಸೋಮವಾರ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ಆಯೋಜಿಸುವಂತೆ ಜಿಲ್ಲೆಯ…

Read More

ಟ್ರಂಪ್ ಗೆ ಉಕ್ರೇನ್ ನಾಗರಿಕರು ಬಹಳ ಕೃತಜ್ಞರಾಗಿರಬೇಕು: ಝೆಲೆನ್ಸ್ಕಿ

ವಾಷಿಂಗ್ಟನ್, ಆ.18: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅಮೆರಿಕ ಅಧ್ಯಕ್ಷರನ್ನು ಭೇಟಿ ಮಾಡಲು ವಾಷಿಂಗ್ಟನ್ ತಲುಪಿದ್ದಾರೆ. ಉಕ್ರೇನ್, ರಷ್ಯಾ ಮತ್ತು ಅಮೆರಿಕಕ್ಕೆ ನಿರ್ಣಾಯಕ ದಿನವಾಗಿದೆ. ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​​ ಭೇಟಿಗೂ ಮುನ್ನ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾತನಾಡಿದ್ದು, ನಮ್ಮ ಜನರು ಸದಾ ಟ್ರಂಪ್​ಗೆ ಕೃತಜ್ಞರಾಗಿರಬೇಕು ಎಂದು ಹೇಳಿದ್ದಾರೆ. ಸುಮಾರು 4 ವರ್ಷಗಳಿಂದ ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಮುಂದಿನ ತಿರುವು ಏನಾಗಲಿದೆ ಎಂಬುದನ್ನು ಇಂದು ನಿರ್ಧರಿಸಲಾಗುತ್ತದೆ. ಟ್ರಂಪ್ ಮೊದಲು ರಷ್ಯಾ…

Read More

ಧರ್ಮಸ್ಥಳ ಪ್ರಕರಣದ ದೂರುದಾರನ ಹೆಸರು ಗೃಹ ಸಚಿವರಿಂದ ಬಹಿರಂಗ!!!

ಬೆಂಗಳೂರು, ಆಗಸ್ಟ್ 18: ಧರ್ಮಸ್ಥಳ ಸುತ್ತಮುತ್ತ ನೂರಾರು ಜನರನ್ನು ಕೊಲೆ ಮಾಡಿ ಶವಗಳನ್ನು ಕಾಣದ ರೀತಿಯಲ್ಲಿ ಹೂತಿಡಲಾಗಿದೆ ಎಂದು ಆರೋಪಿಸಿ ಎಸ್ಐಟಿ ತನಿಖಾ ತಂಡಕ್ಕೆ ತಲೆನೋವಾಗಿರುವ ಅನಾಮಿಕ ದೂರುದಾರನ ಹೆಸರನ್ನು ಇಂದು ಖುದ್ದು ಗೃಹ ಸಚಿವ ಪರಮೇಶ್ವರ್ ಸದನದ ಮುಂದೆ ಬಹಿರಂಗಪಡಿಸಿದ್ದಾರೆ. ಸದನದ ಮುಂದೆ ಗೃಹ ಸಚಿವರು ಹೇಳಿದ್ದಿಷ್ಟು:“ಹಿಂದೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಓರ್ವ ದೂರು ಕೊಟ್ಟಿದ್ದನು. ಈ ವ್ಯಕ್ತಿ ತನ್ನ ದೂರಿನಲ್ಲಿ ತನಗೆ ನಿರಂತರವಾಗಿ ಜೀವ ಬೆದರಿಕೆಯೊಡ್ಡಿ ಶವ ಹೂತಿಟ್ಟ ಬಗ್ಗೆ ತಿಳಿಸಿದ್ದ. ಈ…

Read More

ಹಳದಿ ಮಾರ್ಗದ ಮೆಟ್ರೋ ಮಾರ್ಗ ಸೋಮವಾರದಿಂದ ಕಾರ್ಯಾರಂಭ

ಬೆಂಗಳೂರು, ಆ.17: ಮೊನ್ನೆ ಸ್ವಾತಂತ್ರ್ಯ ದಿನ ರಜೆ, ನಿನ್ನೆ ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಹಳದಿ ಮಾರ್ಗದ ರೈಲು ಸಂಚಾರವನ್ನು ಸೋಮವಾರದಂದು (ಆ.18) ಒಂದು ದಿನ ಬೇಗ ಆರಂಭಿಸಲು ನಿರ್ಧರಿಸಿದೆ. ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳುಬೆಳಿಗ್ಗೆ 5:00 ಗಂಟೆಗೆ…

Read More
error: Content is protected !!