ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಕಳುಹಿಸಿದ್ದ ಮೂವರ ಬಂಧನ
ಬೆಂಗಳೂರು, ಆಗಸ್ಟ್ 2: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳುಹಿಸಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರು ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಹಾಕಿ ಸವಾಲ್ ಹಾಕಿದ್ದರು. ಬಳಿಕ ಈ ಬಗ್ಗೆ ನಟಿ ರಮ್ಯಾ ದೂರು ನೀಡುವ ವೇಳೆ 43 ಅಕೌಂಟ್‌ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ಐಪಿ ಅಡ್ರೆಸ್ ಆಧರಿಸಿ ಪ್ರಕರಣದಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ…

