ತಮ್ಮ ಜಾಮೀನು ರದ್ದುಗೊಳಿಸಬಾರದೆಂದು ಸುಪ್ರೀಂಕೋರ್ಟಿಗೆ ಲಿಖಿತ ಕಾರಣಗಳನ್ನು ನೀಡಿದ ದರ್ಶನ್
ಸರ್ಕಾರವು ಸಹ ಲಿಖಿತ ಕಾರಣಗಳನ್ನು ಸುಪ್ರೀಂಕೋರ್ಟ್ಗೆ ನೀಡಿದ್ದು, ದರ್ಶನ್ ಹಾಗೂ ಪವಿತ್ರಾ ಅವರುಗಳು ರೇಣುಕಾ ಸ್ವಾಮಿಯ ಅಪಹರಣ ಮತ್ತು ಕೊಲೆಯಲ್ಲಿ ಸಕ್ರಿಯರಾಗಿ ಭಾಗಿ ಆಗಿದ್ದರು ಎಂದು ಆರೋಪಿಸಿದೆ. ಇದೀಗ ದರ್ಶನ್ ಪರ ವಕೀಲರು ನೀಡಿರುವ ಲಿಖಿತ ಕಾರಣಗಳಲ್ಲಿ, ದರ್ಶನ್ ಅವರ ಬಂಧನದ ಪ್ರಕ್ರಿಯೆ ಬಗ್ಗೆ ಪ್ರಶ್ನೆ ಮಾಡಲಾಗಿದೆ. ದರ್ಶನ್ ರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು, ಬೆಂಗಳೂರಿನಲ್ಲಿ FIR ದಾಖಲು, ಬಂಧನಕ್ಕೆ ಕಾರಣವನ್ನು ಸಂಜೆ 6:30 ರವರೆಗೂ ಲಿಖಿತವಾಗಿ ನೀಡಿರುವುದಿಲ್ಲ. ಬಂಧನಕ್ಕೆ ಕಾರಣಗಳನ್ನು ನೀಡದೆ ಇರುವುದು ಕಾನೂನು ಉಲ್ಲಂಘನೆ ಎಂದಿದ್ದಾರೆ….

