ರಾಯಚೂರಿನಲ್ಲಿ 79 ಟನ್ ಯೂರಿಯಾ ಬ್ಲಾಕ್ ನಲ್ಲಿ ಸೇಲ್!
ರಾಯಚೂರು, ಜುಲೈ 29: ರಾಜ್ಯಾದ್ಯಂತ ರೈತರು ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ. ಇಂತಹ ಸಂದರ್ಭದಲ್ಲೇ ಕೃಷಿಗೆ ಅತೀ ಅವಶ್ಯಕವಾಗಿರುವ ಯೂರಿಯಾ ಗೊಬ್ಬರದ ಕೊರತೆ ರಾಜ್ಯದೆಲ್ಲೆಡೆ ಇದೆ. ಈ ವೇಳೆ ರಾಯಚೂರು ಜಿಲ್ಲೆಯಲ್ಲಿ 79 ಟನ್ ಯೂರಿಯಾ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡಲಾಗಿದೆ. ಈ ಬಗ್ಗೆ ಜಿಲ್ಲೆಯ ರೈತರು ರಾಯಚೂರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ರಾಯಚೂರಿನ ಕಲ್ಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋಡೌನ್ಗೆ ಹೋಗಬೇಕಿದ್ದ ಯೂರಿಯಾ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ರಾಯಚೂರು ಜಿಲ್ಲಾ ಕೇಂದ್ರದ ಆರ್ಎಪಿಎಂಸಿಯಿಂದ ಜೂನ್…

