ಡಿಸಿಎಂ ಡಿ.ಕೆ ಶಿವಕುಮಾರ್ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಸಂದೇಶ
ಬೆಂಗಳೂರು, ಜುಲೈ 27: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕಚೇರಿ ಹಾಗೂ ದೇವನಹಳ್ಳಿಯಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಸಂದೇಶ ಬಂದಿದೆ. ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಪರಿಶೀಲನೆ ನಡೆಸಿದರು. ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆಯಲ್ಲಿ ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ಗೊತ್ತಾಗಿದೆ. ಬಾಂಬ್ ಬೆದರಿಕೆ ಸಂದೇಶದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. bhagwanthmann@yandex.com ಮೇಲ್‌ನಿಂದ ಬಾಂಬ್ ಬೆದರಿಕೆ…

