ಡ್ರಗ್ಸ್ ದಂಧೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಗೃಹ ಸಚಿವರ ಖಡಕ್ ಸೂಚನೆ
ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾನುವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ಅವರು, ಕರ್ತವ್ಯ ಲೋಪ ಎಸಗುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಶಿಸ್ತುಕ್ರಮ ಜರುಗಿಸುವ ಎಚ್ಚರಿಕೆ ನೀಡಿದರು. ಪೊಲೀಸ್ ಅಧಿಕಾರಿಗಳಿಗೆ ಕ್ಲಾಸ್ ”ನೂರಾರು ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದೇವೆ ಎಂದು ನಿಮ್ಮ ಬೆನ್ನು ನೀವೇ ತಟ್ಟಿಕೊಂಡರೆ ಸಾಲದು….

