ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪೋಸ್ಟ್ ಹಾಗೂ ಪ್ರಚೋದನಕಾರಿ ಹೇಳಿಕೆ: ಕಾನೂನು ಕ್ರಮದ ಎಚ್ಚರಿಕೆ ನೀಡಿದ ಚಾಮರಾಜನಗರ ಎಸ್ಪಿ
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪದಬಳಕೆ, ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮುತ್ತುರಾಜು ಎಂ. ಅವರು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಹಿನ್ನೆಲೆಯಲ್ಲಿ, ಕೊಳ್ಳೆಗಾಲ ಪೊಲೀಸರು ದೂರು ದಾಖಲಿಸಿಕೊಂಡು ಓರ್ವ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದರ…

