Headlines

ಬೇಕರಿ, ಕಾಂಡಿಮೆಂಟ್ಸ್, ಅಂಗಡಿಗಳಿಗೆ ನೋಟಿಸ್: ಮತ್ತೊಂದು ಅಪ್ ಡೇಟ್ ನೀಡಿದ ವಾಣಿಜ್ಯ ತೆರಿಗೆ ಇಲಾಖೆ

ಬೆಂಗಳೂರಿನ ಬೇಕರಿಗಳು, ಕಾಂಡಿಮೆಂಡ್ಸ್, ಚಹಾ/ಕಾಫಿ ಅಂಗಡಿಗಳಿಗೆ ತೆರಿಗೆ ನೋಟಿಸ್ ನೀಡಿದ್ದ ವಾಣಿಜ್ಯ ತೆರಿಗೆ ಇಲಾಖೆ, ಆನಂತರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿತ್ತು. ವಾರ್ಷಿಕ ವಹಿವಾಟು 1.5 ಕೋಟಿ ರೂ.ಗಿಂತ ಕಡಿಮೆ ಇದ್ದರೆ ಅಂತಹ ವರ್ತಕರು ಕೇವಲ ಶೇ.1 ರಷ್ಟು ಮಾತ್ರ ತೆರಿಗೆ ಪಾವತಿಸಬಹುದು. ಕಂಪೋಸಿಷನ್ ಟ್ಯಾಕ್ಸ್ ಸ್ಕೀಮ್ ಆಯ್ಕೆ ಮಾಡಿ ವಿನಾಯಿತಿ ಪಡೆಯಬಹುದು ಎಂದಿತ್ತು. ಇದೀಗ ತೆರಿಗೆ ಇಲಾಖೆ ಈ ಬಗ್ಗೆ ಮತ್ತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಬಾರಿಯೂ ವಾಣಿಜ್ಯ ತೆರಿಗೆ ನೋಟಿಸ್ ಬಗ್ಗೆ…

Read More

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ 6 ತಿಂಗಳ ಎಸ್ಮಾ ಜಾರಿ ಶಾಕ್!

ಬೆಂಗಳೂರು, ಜುಲೈ 18: ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಸರ್ಕಾರದ ಬಾಗಿಲು ಬಡಿದು ಸುಸ್ತಾದ ಕೆಎಸ್​ಆರ್​ಟಿಸಿ, ಬಿಎಂಆರ್​ಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಸಿಬ್ಬಂದಿಗಳು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಆಗಸ್ಟ್ 5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಇದೀಗ ಸಾರಿಗೆ ನೌಕರರಿಗೆ ಕೆಎಸ್ಆರ್​​ಟಿಸಿ ಶಾಕ್ ನೀಡಿದ್ದು, ಪ್ರತಿಭಟನೆ ನಡೆಸದಂತೆ ಕಾರ್ಮಿಕ ಇಲಾಖೆ ಎಸ್ಮಾ ಜಾರಿ ಮಾಡಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ 4 ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಿಗ್ಗೆ 6…

Read More

ಹರಪನಹಳ್ಳಿ ಶಾಸಕಿ ಕಚೇರಿಯಲ್ಲಿ ಕಳ್ಳತನ!

ಹರಪನಹಳ್ಳಿ ಶಾಸಕಿ ಕಚೇರಿಯಲ್ಲಿ ಕಳ್ಳತನ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಕಾಶಿ ಸಂಗಮೇಶ ಬಡಾವಣೆಯಲ್ಲಿರುವ ಶಾಸಕಿ ಲತಾ ಮಲ್ಲಿಕಾರ್ಜುನ್ ಕಚೇರಿಯಲ್ಲಿ ಬೀಗ ಮುರಿದು ಕಳ್ಳತನ ಮಾಡಲಾಗಿದೆ. 2.50 ಲಕ್ಷ ರೂ., 10.80 ಲಕ್ಷ ರೂ. ಮೌಲ್ಯದ ಚಿನ್ನ ಕಳುವು ಮೊನ್ನೆ ಗುರುವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ. ಕಳ್ಳರು ಲಾಕರ್ ಮುರಿದು 2 ಲಕ್ಷದ 50 ಸಾವಿರ ರೂಪಾಯಿ ಹಣ ಹಾಗೂ 10.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ…

Read More

ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಆರ್.ಸಿ.ಬಿ ಹೊಣೆ: ಹೈಕೋರ್ಟ್ ಆದೇಶದಂತೆ ವರದಿ ಬಹಿರಂಗ

ಬೆಂಗಳೂರು, ಜುಲೈ 17: ಕರ್ನಾಟಕ ಸರ್ಕಾರವನ್ನು ಭಾರೀ ಮುಜುಗರಕ್ಕೆ ಸಿಲುಕಿಸಿದ್ದ ಜೂನ್‌ 4ರ ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ದುರಂತಕ್ಕೆ 11 ಆರ್.ಸಿ‌.ಬಿ ಅಭಿಮಾನಿಗಳು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡ ಘಟನೆಗೆ ಇದೀಗ ಏನು? ಯಾರು? ಕಾರಣ, ಹೊಣೆ? ಎಂದು ತನಿಖಾ ವರದಿಯಿಂದ ಬಹಿರಂಗವಾಗಿದೆ. ಹೌದು, ಹೈಕೋರ್ಟ್ ಅನುಮತಿಯ ಮೇರೆಗೆ ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ದುರಂತಕ್ಕೆ ವಿಜಯೋತ್ಸವ ಮೆರವಣಿಗೆ ಆಯೋಜಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಹೊಣೆ ಎಂದು ನ್ಯಾಯಾಂಗ ತನಿಖಾ ವರದಿ ತಿಳಿಸಿದೆ. ಕಳೆದ ಜೂನ್ 4…

Read More

ಮುಟ್ಟುಗೋಲು ಹಾಕಿರುವ ಮುಡಾ ಸೈಟ್ ಮಾಹಿತಿ ಬಹಿರಂಗಪಡಿಸಿ: ಇ.ಡಿಗೆ ಸ್ನೇಹಮಯಿ ಕೃಷ್ಣ ಪತ್ರ

ಮೈಸೂರು, ಜುಲೈ 17: ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಮುಡಾ ಹಗರಣದ ತನಿಖೆ ನಡೆಸುತ್ತಿರುವ ಕೇಂದ್ರ ಜಾರಿ ನಿರ್ದೇಶನಾಲಯಕ್ಕೆ ಇತ್ತೀಚೆಗೆ ಮತ್ತಷ್ಟು ಮಹತ್ವದ ಅಂಶಗಳು ತಿಳಿದುಬಂದಿತ್ತು. ಮೊದಲಿಗೆ ಸುಮಾರು 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದ ಇ.ಡಿ, ನಂತರ ಮತ್ತೆ 92 ಸೈಟ್​ಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಒಬ್ಬನೇ ವ್ಯಕ್ತಿಗೆ ಅಕ್ರಮವಾಗಿ 30 ರಿಂದ 40 ನಿವೇಶನಗಳನ್ನು ಹಂಚಿಕೆ ಮಾಡಿರುವುದನ್ನು ಇತ್ತೀಚೆಗೆ ಪತ್ತೆಮಾಡಿತ್ತು. ಇದೀಗ, ಮುಟ್ಟುಗೋಲು ಹಾಕಿಕೊಂಡಿರುವ 252 ಸೈಟುಗಳ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ…

Read More

ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿ ಶಾಸಕ ಕೆ.ವೈ ನಂಜೇಗೌಡರಿಗೆ ಶಾಕ್ ಕೊಟ್ಟ ಇ.ಡಿ!

ಕೋಲಾರ, ಜುಲೈ 17: ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರ ಆಸ್ತಿಯನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ. ಶಾಸಕ ಕೆ.ವೈ.ನಂಜೇಗೌಡ ಹಾಗೂ ಇತರರಿಗೆ ಸೇರಿದ ಒಟ್ಟು 1.32 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿದೆ. 2023ರಲ್ಲಿ ಕೋಮುಲ್ ನೇಮಕಾತಿ ಹಗರಣ ಸಂಬಂಧ 1.32 ಕೋಟಿ ರೂ. ಮೌಲ್ಯದ ಸ್ಥಿರ-ಚರಾಸ್ತಿಯನ್ನು ಜಪ್ತಿ ಮಾಡಿದೆ. ಈ ಬಗ್ಗೆ ಇಡಿ ಎಕ್ಸ್​​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. 2023ರ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ (KOMUL)…

Read More

ಭೂಒತ್ತುವರಿ ಆರೋಪ: ನ್ಯಾಯಾಂಗ ನಿಂದನೆ ಕೇಸ್ ನಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ.ಗೆ ರಿಲೀಫ್

ನವದೆಹಲಿ, ಜುಲೈ 17: ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ಹಿಂದಿನ ರಾಮನಗರ…

Read More

ಕೊನೆಗೂ ಕಿರುತೆರೆ ನಿರೂಪಕಿ ಅನುಶ್ರೀಗೆ ವಿವಾಹ ಭಾಗ್ಯ!

ಬೆಂಗಳೂರು, ಜುಲೈ 17: ಕನ್ನಡ ಕಿರುತೆರೆ ಲೋಕದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಮದುವೆ ಯಾವಾಗ? ಎಂದು ಹಲವಾರು ವರ್ಷಗಳಿಂದ ಪ್ರಶ್ನಿಸುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ಸಿಕ್ಕಿದೆ. ಏಕೆಂದರೆ ಇದೀಗ ಖ್ಯಾತ ಕಿರುತೆರೆ ನಿರೂಪಕಿ ಅನುಶ್ರೀ ಅವರಿಗೆ ಕೊನೆಗೂ ಕಂಕಣಭಾಗ್ಯ ಕೂಡಿ ಬಂದಿದ್ದು, ಮದುವೆಗೆ ಮುಹೂರ್ತ ಫಿಕ್ಸ್ ಕೂಡ ಆಗಿದೆ. ಅನುಶ್ರೀ ಮುಂದಿನ ಆಗಸ್ಟ್ 28ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆ ಆಗಲಿದ್ದು, ಬೆಂಗಳೂರಿನ ಸಾಫ್ಟ್ ವೇರ್ ಉದ್ಯಮಿಯನ್ನು ವರಿಸಲಿದ್ದಾರೆ. ಕುಟುಂಬಸ್ಥರು ನೋಡಿದ ಹುಡುಗನ ಜೊತೆಯೇ ಅನುಶ್ರೀ…

Read More

ಸಚಿವರ ಆಡಳಿತ ವೈಖರಿ ಪರಿಶೀಲಿಸಿದ ಸುರ್ಜೇವಾಲ

ಬೆಂಗಳೂರು, ಜುಲೈ 16: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರು ಇಂದು ಕೆಲ ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ರಾಜ್ಯದ ಕೈ ಶಾಸಕರ ಜೊತೆ ಸಭೆ ನಡೆಸಿ ಅವರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದ ಸುರ್ಜೆವಾಲ ಅವರು ಇಂದು ಸಚಿವರ ಜೊತೆ ಸಭೆ ನಡೆಸಿದ್ದಾರೆ. ಇಂದು ಬೆಳಗ್ಗೆ ಒಬ್ಬೊಬ್ಬ ಸಚಿವರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿ, ಆಡಳಿತ ವೈಖರಿ, ಖಾತೆ ನಿರ್ವಹಣೆ, ಪಕ್ಷದ ನಾಯಕರು, ಮುಖಂಡರು,…

Read More

ತಿರುಪತಿಗೆ ತುಮುಲ್ ನಿಂದ ನಂದಿನಿ ತುಪ್ಪ ರವಾನೆ

ತುಮಕೂರು, ಜುಲೈ 16: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗಾಗಿ ತುಮಕೂರು ಹಾಲು ಒಕ್ಕೂಟದಿಂದ ಟಿಟಿಡಿ ದೇವಾಲಯಕ್ಕೆ(ತಿರುಮಲದ ತಿರುಪತಿ ತಿಮ್ಮಪ್ಪ ದೇವಾಲಯ) ನಂದಿನಿ ತುಪ್ಪ ಕೊಂಡೊಯ್ಯುವ ಟ್ಯಾಂಕರ್‌ ವಾಹನಕ್ಕೆ ತುಮುಲ್‌ ಅಧ್ಯಕ್ಷ ಹಾಗೂ ಶಾಸಕ ಹೆಚ್‌.ವಿ.ವೆಂಕಟೇಶ್‌ ಚಾಲನೆ ನೀಡಿದರು. ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ನೇರವಾಗಿ ತುಪ್ಪ ಪೂರೈಸುವ ಅವಕಾಶವನ್ನು ಕೆಎಂಎಫ್‌ ತನ್ನ ವ್ಯಾಪ್ತಿಯ ಹಾಲು ಒಕ್ಕೂಟಗಳಿಗೆ ಕಲ್ಪಿಸಿರುವುದರಿಂದ ತುಪ್ಪವನ್ನು ಟ್ಯಾಂಕರ್‌ ಮೂಲಕ ಟಿಟಿಡಿಗೆ ಪೂರೈಸುವ ಕಾರ್ಯವನ್ನು ತುಮುಲ್‌ ಆರಂಭಿಸಿದೆ. ಟಿಟಿಡಿಗೆ ತುಪ್ಪ ಕೊಂಡೊಯ್ಯುವ ಟ್ಯಾಂಕರ್‌ ವಾಹನಕ್ಕೆ ಚಾಲನೆ…

Read More
error: Content is protected !!